ಉಡುಪಿ | ಬೀಡಿ ಕಾರ್ಮಿಕರ ಸಂಕಷ್ಟಕ್ಕೆ ಕೇಂದ್ರದ 4 ಕಾರ್ಮಿಕ ಸಂಹಿತೆಗಳೇ ಕಾರಣ : ಜೆ. ಬಾಲಕೃಷ್ಣ ಶೆಟ್ಟಿ

Date:

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45ನೇ ವಾರ್ಷಿಕ ಮಹಾಸಭೆಯು ಇಂದು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಿತು.

- Advertisement -

ಸಭೆಯನ್ನು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್‌ನ ರಾಜ್ಯಾಧ್ಯಕ್ಷ ಕಾಮ್ರೇಡ್ ಜೆ. ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಕೇಂದ್ರ ಸರಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳಿಂದಾಗಿ ಬೀಡಿ ಕಾರ್ಮಿಕರು ಇಂದು ಹಲವಾರು ಸಂಕಷ್ಟಗಳನ್ನು ಎದುರಿಸುವಂತಾಗಿದೆ ಎಂದು ಅವರು ಆರೋಪಿಸಿದರು. ಬೀಡಿ ಕಾರ್ಮಿಕರ ಕಲ್ಯಾಣ ಮಂಡಳಿ ರಾಜ್ಯದಿಂದ ಕೇಂದ್ರಕ್ಕೆ ವರ್ಗಾವಣೆಯಾಗಿರುವುದರಿಂದ ಬೀಡಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸರಿಯಾಗಿ ದೊರೆಯುತ್ತಿಲ್ಲ. ಬೀಡಿ ಆಸ್ಪತ್ರೆಗಳಲ್ಲಿ ಸಮರ್ಪಕ ಚಿಕಿತ್ಸೆ ಹಾಗೂ ಡಿಸ್ಪೆನ್ಸರಿಗಳಲ್ಲಿ ಅಗತ್ಯ ಔಷಧಿಗಳು ಸಿಗುತ್ತಿಲ್ಲ ಎಂದು ಅವರು ಹೇಳಿದರು.

1012120404

ಅದೇ ರೀತಿ, ಬೀಡಿ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ ನೀಡಲಾಗುತ್ತಿದ್ದ ಸಹಾಯಧನ, ಆರೋಗ್ಯ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳು ಸರಿಯಾಗಿ ದೊರೆಯುತ್ತಿಲ್ಲ. ಮತ್ತೊಂದೆಡೆ ರಾಜ್ಯ ಸರಕಾರಗಳು ಬೀಡಿ ಕಾರ್ಮಿಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಬೀಡಿ ಕಂಪನಿ ಮಾಲೀಕರೊಂದಿಗೆ ಕೆಲವು ಒಪ್ಪಂದಗಳನ್ನು ಮಾಡಿಕೊಂಡಿರುವಂತಿದೆ ಎಂದು ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.

ಈ ಎಲ್ಲಾ ಕಾರಣಗಳಿಂದಾಗಿ ಬೀಡಿ ಕಾರ್ಮಿಕರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್, ಜಿಲ್ಲಾ ಕೋಶಾಧಿಕಾರಿ ಬಲ್ಕೀಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್‌ನ ಅಧ್ಯಕ್ಷೆ ನಳಿನಿ ಎಸ್. ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಉಮೇಶ್ ಕುಂದರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಕೋಶಾಧಿಕಾರಿ ಜ್ಯೋತಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...