ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಕುಟುಂಬ: ಅಪಘಾತದಲ್ಲಿ ಇಬ್ಬರು ಸಾವು, ನಾಲ್ವರಿಗೆ ಗಾಯ

Date:

ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ಭಾನುವಾರ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.

- Advertisement -

ಮಮತಾ(36) ಹಾಗೂ ಮಗಳು ಧೃತಿಕಾ(14) ಸ್ಥಳದಲ್ಲಿಯೇ ಅಸುನೀಗಿದರೆ, ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್​​ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ ನಿವಾಸಿಗಳು ಎಂಬುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಈ ಸುದ್ದಿ ಓದಿದ್ದೀರಾ? ಕುಣಿಗಲ್‌ ಬೈಪಾಸ್‌ನಲ್ಲಿ ಅಪಘಾತ: ಮಂಗಳೂರು ಉದ್ಯಮಿ ಸಾವು, ಪತ್ನಿಗೆ ಗಾಯ

ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ ಉಡುಪಿ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ಬಳಿಕ ಮುರುಡೇಶ್ವರ ಮತ್ತು ಗೋಕರ್ಣ ಕ್ಷೇತ್ರಗಳ ದರ್ಶನದ ಉದ್ದೇಶದಿಂದ ಬೈಂದೂರು ಮಾರ್ಗವಾಗಿ ಪ್ರಯಾಣಿಸುತ್ತಿದ್ದರು. ಗಾಯಾಳು ತಂದೆ ಮತ್ತು ಇಬ್ಬರು ಮಕ್ಕಳಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದ್ದರೆ, ಕಾರು ಚಾಲಕ ಕಿರಣ್​​ನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಉಡುಪಿಯಲ್ಲಿ ಅ.25ರಂದು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ 5ನೇ ಶಾಖೆ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ...