ಉಡುಪಿ | ಭಗತ್ ಸಿಂಗ್‌ನಿಂದ ಸಾಮಾಜಿಕ ಸಮಾನತೆ ಪರ ಹೋರಾಟ: ಸದಾನಂದ ಬೈಂದೂರು

Date:

ಚರಿತ್ರೆಯಲ್ಲಿ ನಾವು ಓದಿರುವಂತೆ ಭಗತ್ ಸಿಂಗ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಎಂಬ ಪ್ರತಿಮಾತ್ಮಕವಾದ ಅರ್ಥ ದಲ್ಲಿ ಬಳಸಲಾಗಿದೆ. ಭಗತ್ ಸಿಂಗರ ಕ್ರಾಂತಿಯ ಹೋರಾಟ ನ್ಯಾಯ ಮತ್ತು ಸಾಮಾಜಿಕ ಸಮಾನತೆಯನ್ನು ತರುವುದರ ಪರವಾಗಿತ್ತು ಎಂಬುದನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದು ಕುಂದಾಪುರ ಸಮುದಾಯ ಅಧ್ಯಕ್ಷ ಸದಾನಂದ ಬೈಂದೂರು ಹೇಳಿದ್ದಾರೆ.

- Advertisement -

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಉಡುಪಿ ಹಾಗೂ ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಜೀವಪರ ಕ್ರಾಂತಿಕಾರಿ ಭಗತ್‌ಸಿಂಗ್ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿ, ವರ್ತಮಾನದಲ್ಲಿ ಭಗತ್ ಸಿಂಗ್, ಅಂಬೇಡ್ಕರ್ ಮತ್ತು ಗಾಂಧಿ ಚರ್ಚಿತರಾಗುತ್ತಾರೆ. ಏಕೆಂದರೆ ಇವರೆಲ್ಲ ಸಾಮಾಜಿಕ ಸ್ವಾತಂತ್ರ್ಯ ಮತ್ತು ಸಮಾನತೆಯ ಬಗ್ಗೆ ಘಂಟಾಘೋಷವಾಗಿ ನಿರ್ಭಿಡೆಯಿಂದ ಮಾತನಾಡುತ್ತಿದ್ದರು ಎಂದರು.

WhatsApp Image 2026 08 29 at 11.08.37 PM

ವಾಸ್ತವಿಕವಾಗಿ ವಿದ್ಯಾರ್ಥಿಗಳು ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು. ಕೇವಲ ವಿದ್ಯೆಯಿಂದ ವಾಸ್ತವವನ್ನು ಅರಿಯಲು ಸಾಧ್ಯವಿಲ್ಲ. ದೇಶದ ಸಂವಿಧಾನಿಕ ಮೌಲ್ಯಗಳನ್ನು ಅರಿತುಕೊಂಡು ಬದುಕಬೇಕು. ಭಗತ್ ಸಿಂಗ್ ಸಾಮಾಜಿಕ ನ್ಯಾಯ ಮತ್ತು ಸತ್ಯಕ್ಕಾಗಿ ಬದುಕಿದವರು ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆ ಏಕಮುಖವಲ್ಲ. ಅದು ಬಹು ಮುಖಿಯಾಗಿರಬೇಕು. ದೇಶಕ್ಕೆ ಪ್ರಾಣ ಅರ್ಪಿಸಿದ ವೀರರು, ಹುತಾತ್ಮರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿ ತಿಳಿದುಕೊಂಡಾಗ ಅವರ ತ್ಯಾಗ, ಬಲಿದಾನಗಳ ಮಹತ್ವ ಅರಿವಾಗುತ್ತದೆ ಎಂದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ದಿವ್ಯಾ ಎಂ.ಎಸ್., ಐಕ್ಯುಎಸಿ ಸಂಚಾಲಕಿ ಡಾ.ನಳಿನಾಶ್ರೀ, ಚಕೋರ ಜಿಲ್ಲಾ ಸಂಚಾಲಕಿ ಶಾಲಿನಿ ಯು.ಬಿ. ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಗಂಗಾಧರ ಆರ್.ಎಚ್. ಸ್ವಾಗತಿಸಿದರು. ಚಕೋರ ಜಿಲ್ಲಾ ಸಂಚಾಲಕ ರಾಮಾಂಜಿ ವಂದಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಸಚಿನ್ ಎಸ್. ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...