ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

Date:

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ, ಅದರಲ್ಲೂ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಸೂಚಿಸಿದರು.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಭೋವಿ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರೊಂದಿಗಿನ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ರಾಜ್ಯ ಸರ್ಕಾರ ಸಾಮಾನ್ಯ ಜನರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದರ ಜೊತೆಗೆ ಭೋವಿ ಸಮುದಾಯದ ಅಭಿವೃದ್ಧಿಗಾಗಿ ಆರು ವಿಶೇಷ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳು ನಿಜವಾದ ಅರ್ಹ ಬಡವರು ಹಾಗೂ ನಿರ್ಗತಿಕರಿಗೆ ತಲುಪುವಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಭೋವಿ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಅತ್ಯಂತ ಅಗತ್ಯವಾಗಿದ್ದು, ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಸೌಲಭ್ಯಗಳಿಗೆ ಇದು ಪ್ರಮುಖ ದಾಖಲೆಯಾಗಿದೆ. ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಅರ್ಹರಿಗೆ ಜಾತಿ ಪ್ರಮಾಣ ಪತ್ರ ದೊರಕುವಂತೆ ಕಂದಾಯ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ, ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ರಾಮಪ್ಪ ತಿಳಿಸಿದರು.

Advertisements

ಭೋವಿ ಸಮುದಾಯದ ಸಾಂಪ್ರದಾಯಿಕ ವೃತ್ತಿಯಾದ ಕಲ್ಲು ಒಡೆಯುವ ಕೆಲಸಕ್ಕೆ ಅನುಕೂಲವಾಗುವಂತೆ ಸರ್ಕಾರ ಎರಡು ಎಕರೆವರೆಗೆ ಕಲ್ಲುಕೋರೆ ನೀಡಲು ಅವಕಾಶ ಕಲ್ಪಿಸಿದೆ. ಉಡುಪಿ ಜಿಲ್ಲೆಯಲ್ಲಿ 21 ಮಂದಿ ಅರ್ಜಿ ಸಲ್ಲಿಸಿದ್ದರೂ ಇಬ್ಬರು ಮಾತ್ರ ಇದರ ಪ್ರಯೋಜನ ಪಡೆದಿದ್ದಾರೆ. ಉಳಿದ ಅರ್ಜಿದಾರರಿಗೆ ಅರಣ್ಯ ಹಾಗೂ ಕಂದಾಯ ಇಲಾಖೆಯ ನಿರಪೇಕ್ಷಣಾ ಪತ್ರ ಪಡೆಯುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಗಣಿ ಇಲಾಖೆ ಅಧಿಕಾರಿಗಳು ಅನುಸರಣೆ ನಡೆಸಿ ನಿಯಮಾನುಸಾರ ಮುಂದಿನ ಎರಡು ತಿಂಗಳಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.

BHOVI ABHIVRUDDHI NIGAMA SABHE 9

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿರುವ ಭೋವಿ ಸಮುದಾಯದ ಕಾರ್ಮಿಕರು ಕಾರ್ಮಿಕ ಇಲಾಖೆಯ ಗುರುತಿನ ಚೀಟಿ ಪಡೆಯಲು ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಪ್ರತಿಯೊಬ್ಬರಿಗೂ ಗುರುತಿನ ಚೀಟಿ ನೀಡಬೇಕು ಎಂದರು.

ಸಮುದಾಯದ ಮಕ್ಕಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದರ ಜೊತೆಗೆ ಪ್ರತಿಷ್ಠಿತ ಶಾಲೆಗಳಲ್ಲಿ ಭೋವಿ ಸಮುದಾಯದ ಮಕ್ಕಳ ದಾಖಲಾತಿ ಹೆಚ್ಚಿಸಲು ಕ್ರಮವಹಿಸಬೇಕು. ಒಂದನೇ ತರಗತಿ ಪ್ರವೇಶದ ಸಂದರ್ಭದಲ್ಲಿ ಜಾತಿ ಮತ್ತು ಉಪಜಾತಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ದಾಖಲಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಬೇಕು ಎಂದು ಹೇಳಿದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಭೋವಿ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಮೂಲಸೌಕರ್ಯ ಹಾಗೂ ಆರ್ಥಿಕ ನೆರವು ನೀಡುತ್ತಿದ್ದು, ಮಹಿಳೆಯರು ಸ್ವಾವಲಂಬಿಗಳಾಗಲು ಹಲವು ಅವಕಾಶಗಳನ್ನು ಕಲ್ಪಿಸಿದೆ. ಸಮುದಾಯದವರು ಈ ಸೌಲಭ್ಯಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದರು.

ಶಾಸಕ ಸುನಿಲ್ ಕುಮಾರ್ ಮಾತನಾಡಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭೋವಿ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುವಲ್ಲಿ ಸಮಸ್ಯೆಗಳು ಎದುರಾಗುತ್ತಿವೆ. ಶಿಕ್ಷಣ ಮತ್ತು ಉದ್ಯೋಗಕ್ಕೆ ಅತ್ಯಗತ್ಯವಾಗಿರುವ ಪ್ರಮಾಣ ಪತ್ರ ನೀಡುವ ಕುರಿತು ಕಂದಾಯ ಇಲಾಖೆ ಸ್ಪಷ್ಟ ತೀರ್ಮಾನ ಕೈಗೊಂಡು ಸಮುದಾಯಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಭೋವಿ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಅರ್ಹರಿಗೆ ತಲುಪುವಂತೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಎರಡೂ ಜಿಲ್ಲೆಗಳ ಸಮುದಾಯದ ಕುಂದುಕೊರತೆಗಳನ್ನು ಆಲಿಸಿ, ಯೋಜನೆಗಳ ಅನುಷ್ಠಾನದಲ್ಲಿನ ಸಮಸ್ಯೆಗಳಿಗೆ ಗರಿಷ್ಠ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಜಿಲ್ಲೆಯಲ್ಲಿ ಭೋವಿ ಸಮುದಾಯ ಭವನ ನಿರ್ಮಾಣಕ್ಕೆ ಬೇಡಿಕೆ ಇದ್ದು, ನಿಯಮಾನುಸಾರ ಸಿ.ಎ. ಸೈಟ್‌ಗಳನ್ನು ನೀಡಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ಭೋವಿ ಸಮುದಾಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....