ಉಡುಪಿ | ಗಾಂಧಿನಗರ ಬೈಕಾಡಿ ಡಬಲ್ ಮರ್ಡರ್‌: ಆರೋಪಿ ಶಾಹಿದ್ ಅಲಿ ಪೊಲೀಸ್ ಕಸ್ಟಡಿಗೆ

Date:

ಗಾಂಧಿನಗರ ಬೈಕಾಡಿಯಲ್ಲಿ ಆ.23ರಂದು ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಶಾಹಿದ್ ಅಲಿ (31)ನನ್ನು ಬ್ರಹ್ಮಾವರ ಪೊಲೀಸರು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

- Advertisement -

ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶಾಹಿದ್ ಅಲಿ ತನ್ನ ತಂದೆ ಮೆಹಬೂಬ್ ಅಲಿ ಹಾಗೂ ತಾಯಿ ಸಂಶಾದ್ ಬೇಗಂ ಅವರನ್ನು ಮನೆಯಲ್ಲೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದನು. ಬಳಿಕ ಆತನೇ ಪೊಲೀಸರಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದನು. ಆ.24ರಂದು ಆರೋಪಿಯನ್ನು ಬಂಧಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರಕರಣದ ಹೆಚ್ಚಿನ ತನಿಖೆ, ಸಾಕ್ಷ್ಯ ಸಂಗ್ರಹ ಹಾಗೂ ಮಹಜರು ಪ್ರಕ್ರಿಯೆಗಾಗಿ ತನಿಖಾಧಿಕಾರಿ ಗೋಪಿಕೃಷ್ಣ ನೇತೃತ್ವದ ತಂಡ ಉಡುಪಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ನ್ಯಾಯಾಲಯವು ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು, ಆರೋಪಿ ಮಾದಕ ದ್ರವ್ಯ ಸೇವಿಸಿ ಹತ್ಯೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ಪರೀಕ್ಷಾ ವರದಿಯಲ್ಲಿ ಯಾವುದೇ ಮಾದಕ ದ್ರವ್ಯ ಸೇವಿಸಿರುವುದು ಪತ್ತೆಯಾಗಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...