ಉಡುಪಿ | ಬ್ರಹ್ಮಾವರ ವಲಯ ಕರಾಟೆ ಸ್ಪರ್ಧೆ: 40 ಶಾಲೆಗಳ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

Date:

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಬೊಕ್ಕಪಟ್ಣ ಹೊನ್ನಾಳ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯು ಬುಧವಾರ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಉತ್ಸಾಹಭರಿತವಾಗಿ ನಡೆಯಿತು.

- Advertisement -

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಇಮ್ತಿಯಾಜ್ ಹೊನ್ನಾಳ ವಹಿಸಿ ಮಾತನಾಡಿ, ದಾನಿಗಳು ಹಾಗೂ ಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿಯತ್ತ ಸಾಗುತ್ತಿದ್ದು, ಇಂತಹ ಕ್ರೀಡಾ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲು ಅವರ ಬೆಂಬಲ ಅತ್ಯಂತ ಅಗತ್ಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಗೆಲುವು-ಸೋಲಿನ ಬಗ್ಗೆ ಮಾತ್ರ ಯೋಚಿಸದೆ ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ರೋಹಿತಾಕ್ಷ, ಕಾರ್ಯದರ್ಶಿ ವಾಮನ್ ಪಾಲನ್, ಉಡುಪಿ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಬ್ರಹ್ಮಾವರ ವಲಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಅಂಪಾರು, ಮುಖ್ಯ ಶಿಕ್ಷಕ ಪ್ರಶಾಂತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶುಕೂರ್ ಸಾಹೇಬ್, ಕಾರ್ಯದರ್ಶಿ ಮುಶ್ತಾಕ್ ಅಹಮದ್, ಅಬ್ಬರ್ ಸಾಹೇಬ್, ಜಾಕೀರ್ ಬಿ.ಆರ್., ಶಕೀಲ್ ಹಾಗೂ ಖತೀಬ್ ಅಕ್ಬರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕರು, ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶಾಲೆಯ ಮುಖ್ಯ ಶಿಕ್ಷಕ ರೂಬಿ ಪಿಂಟೋ ಸ್ವಾಗತಿಸಿದರು. ಖಲೀಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಬ್ರಹ್ಮಾವರ ವಲಯದ ಸುಮಾರು 40 ಶಾಲೆಗಳಿಂದ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ವಿಭಾಗಗಳ ಕರಾಟೆ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...