ಬ್ರಹ್ಮಾವರ: ಭಾರೀ ಗಾಳಿ ಮಳೆಗೆ ಶಾಲೆಯ ಹೆಂಚು ಬಿದ್ದು ವಿದ್ಯಾರ್ಥಿನಿಗೆ ಗಾಯ

Date:

ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಗಾಳಿ ಮಳೆಗೆ 15 ಮನೆಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.ಈ ಮಧ್ಯೆ ಬ್ರಹ್ಮಾವರ ತಾಲೂಕಿನಲ್ಲಿ ಹಳೆಯ ಶಾಲಾ ಕಟ್ಟಡದ ಹೆಂಚು ಬಿದ್ದ ಪರಿಣಾಮ ವಿದ್ಯಾರ್ಥಿನಿಗೆ ಗಾಯವಾಗಿದೆ.

- Advertisement -

ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ಭಾರೀ ಗಾಳಿಯೊಂದಿಗೆ ಮಳೆಯಾಗಿತ್ತು.ಈ ವೇಳೆ ಬೀಸಿದ ಭಾರಿ ಗಾಳಿ ಮಳೆಗೆ ವಾರಂಬಳ್ಳಿ ಗ್ರಾಮದ ಬ್ರಹ್ಮಾವರ ಬೋರ್ಡ್ ಪ್ರೈಮರಿ ಶಾಲೆಯ ಮೇಲ್ಚಾವಣೆಯ ಹೆಂಚು ಬಿದ್ದು ಓರ್ವ ವಿದ್ಯಾರ್ಥಿನಿಯ ಕಾಲಿಗೆ ಸಣ್ಣ ಗಾಯವಾಗಿದೆ.ಇದೇ ವೇಳೆ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದಲ್ಲದೆ ಅಲ್ಲಲ್ಲಿ ಮರಗಳು ಉರುಳಿಬಿದ್ದ ಬಗ್ಗೆ ವರದಿಯಾಗಿದೆ.ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆ ವಾಡಿಕೆಗಿಂತ ಕಮ್ಮಿಯಾಗಿದ್ದರೂ ಭಾರೀ ಗಾಳಿಗೆ ಅಲ್ಲಲ್ಲಿ ಹಾನಿ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...