ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

Date:

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಅನಧಿಕೃತ ಹೋಂ ಸ್ಟೇಗಳನ್ನು ಅಗತ್ಯ ಪರವಾನಗಿ ಪಡೆಯುವವರೆಗೆ ಮುಚ್ಚಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶುಕ್ರವಾರ ಕೋಡಿ ಗ್ರಾಮ ಪಂಚಾಯತ್ ಕಚೇರಿ ಎದುರು ಧರಣಿ ನಡೆಸಿದರು.

- Advertisement -

ಧರಣಿಯನ್ನುದ್ದೇಶಿಸಿ ಮಾತನಾಡಿದ ಸ್ಥಳೀಯ ಪ್ರಮುಖ ಸುದೀನ, ಈ ಭಾಗದಲ್ಲಿ ಹೋಂ ಸ್ಟೇ ಹೆಸರಿನಲ್ಲಿ ಅಕ್ರಮ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದರು. ತೆರಿಗೆ ವಂಚನೆ, ಸಿಆರ್‌ಝಡ್ ನಿಯಮಗಳ ಉಲ್ಲಂಘನೆ ಹಾಗೂ ಹಕ್ಕುಪತ್ರಗಳ ದುರುಪಯೋಗದಂತಹ ಅಕ್ರಮಗಳು ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಕ್ಷಮ ಪ್ರಾಧಿಕಾರಗಳು ಬಂಡವಾಳಶಾಹಿಗಳ ಪರ ನಿಲುವು ತಾಳುತ್ತಿವೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಸ್ಥಳೀಯ ನಿವಾಸಿ ಜ್ಯೋತಿ ಮಾತನಾಡಿ, ನಗರ ಪ್ರದೇಶದಲ್ಲಿ ಹಕ್ಕುಪತ್ರದ ದರ 500 ರೂ. ಇದ್ದರೆ, ಗ್ರಾಮೀಣ ಪ್ರದೇಶದ ಕೋಡಿ ಗ್ರಾಮದಲ್ಲಿ 5,000 ರೂ. ಇದ್ದ ದರ ಇದೀಗ 9,000 ರೂ.ಗೆ ಏರಿಕೆಯಾಗಿದೆ. ಗ್ರಾಮದಲ್ಲಿ ಭೂಮಿಯ ಬೇಡಿಕೆ ಮತ್ತು ಮೌಲ್ಯ ಹೆಚ್ಚಿರುವುದು ಇದಕ್ಕೆ ಕಾರಣವಾಗಿರಬಹುದು. ಆದರೆ ನಾವು ನಮ್ಮ ಮನೆಗಳಲ್ಲಿ ವಾಸಿಸುತ್ತಿದ್ದೇವೆಯೇ ಹೊರತು ಯಾವುದೇ ವ್ಯವಹಾರ ನಡೆಸುತ್ತಿಲ್ಲ. ಬೇರೆಯವರು ಮಾಡಿದ ತಪ್ಪಿಗೆ ಸ್ಥಳೀಯ ನಿವಾಸಿಗಳಿಗೆ ಶಿಕ್ಷೆಯಾಗಬಾರದು. ಹಕ್ಕುಪತ್ರದ ದರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಹೋಂ ಸ್ಟೇಗೆ ಮೂರನೇ ನೋಟಿಸ್ ಜಾರಿ

ಧರಣಿ ಸ್ಥಳಕ್ಕೆ ಆಗಮಿಸಿದ ಕೋಡಿ ಗ್ರಾಮ ಪಂಚಾಯತ್ ಪಿಡಿಒ ರವೀಂದ್ರ ಅವರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಒಪ್ಪದ ಗ್ರಾಮಸ್ಥರು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವವರೆಗೆ ಗ್ರಾಮ ಪಂಚಾಯತ್ ಕಚೇರಿ ಎದುರೇ ಧರಣಿ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.

ಬಳಿಕ ಗ್ರಾಮಸ್ಥರು ಆರೋಪಿಸಿದ ಹೋಂ ಸ್ಟೇಗೆ ನೋಟಿಸ್ ಜಾರಿಗೊಳಿಸಿ, ಅದರ ಪ್ರತಿಯನ್ನು ಪ್ರತಿಭಟನಾಕಾರರಿಗೆ ಹಸ್ತಾಂತರಿಸಲಾಯಿತು. ಇದಾದ ಬಳಿಕ ಗ್ರಾಮಸ್ಥರು ಧರಣಿ ಹಿಂಪಡೆದರು.

ಈ ಕುರಿತು ಪ್ರತಿಕ್ರಿಯಿಸಿದ ಪಿಡಿಒ ರವೀಂದ್ರ, ಸಂಬಂಧಪಟ್ಟ ಹೋಂ ಸ್ಟೇಗೆ ಈಗಾಗಲೇ ಎರಡು ಬಾರಿ ನೋಟಿಸ್ ನೀಡಲಾಗಿದೆ. ಶುಕ್ರವಾರ ಮೂರನೇ ಹಾಗೂ ಅಂತಿಮ ನೋಟಿಸ್ ನೀಡಿ, ಉತ್ತರಿಸಲು ಒಂದು ವಾರದ ಕಾಲಾವಕಾಶ ನೀಡಲಾಗಿದೆ. ಈ ಅವಧಿಯಲ್ಲಿಯೂ ಸ್ಪಂದಿಸದೆ ಸೂಕ್ತ ದಾಖಲೆಗಳನ್ನು ಸಲ್ಲಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಅನುಷಾ ಭಟ್ ಉಪಸ್ಥಿತರಿದ್ದರು. ಧರಣಿಯಲ್ಲಿ ಸ್ಥಳೀಯ ಹಿರಿಯರಾದ ಕೃಷ್ಣ ಮಾಸ್ಟರ್, ಪ್ರಮುಖರಾದ ಲೋಹಿತ್ ಕುಂದರ್, ಮಾಧವ ಕುಂದರ್, ಸತೀಶ್, ಸಂತೋಷ್, ಕೃಷ್ಣ, ಸುಜಾತ, ಜ್ಯೋತಿ ಖಾರ್ವಿ, ಬೇಬಿ, ಲೋಹಿತ್ ಖಾರ್ವಿ, ರಾಜು ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ‘ಋತು ತಾರೆ’ ಪ್ರಾಯೋಗಿಕ ಜಾರಿಗೆ ಸಿದ್ಧತೆ: ಆರೋಗ್ಯಾಧಿಕಾರಿ ಮಾಹಿತಿ

ಮಧ್ಯ ವಯಸ್ಕ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಋತುಬಂಧ ಸಮಸ್ಯೆಗಳಿಗೆ ಪೂರಕವಾಗಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ ಕಾರ್ಮಿಕರ ಬದುಕಿಗಿಲ್ಲ ಭದ್ರತೆ!

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ...

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಮಾರಾಟಕ್ಕೆ ಬ್ರೇಕ್‌: ತೀವ್ರ ಕಾರ್ಯಾಚರಣೆಗೆ ಎಡಿಸಿ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಸಿಗರೇಟ್, ತಂಬಾಕು...

ಬೆಂಗಳೂರು | ಪಿಯುಸಿ ಪಾಸಾದವರಿಗೆ ಅರಣ್ಯ ಇಲಾಖೆಯಲ್ಲಿ 450 ಉದ್ಯೋಗಾವಕಾಶ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪಿಯುಸಿ ಉತ್ತೀರ್ಣ ಅಭ್ಯರ್ಥಿಗಳಿಗೆ ಕರ್ನಾಟಕ ಅರಣ್ಯ ಇಲಾಖೆ...