ಉಡುಪಿ | ದೇಶಾದ್ಯಂತ ಕಾರ್ಮಿಕರ ಕಪ್ಪು ದಿನ: 4 ಕಾರ್ಮಿಕ ಸಂಹಿತೆಗಳಿಗೆ ತೀವ್ರ ವಿರೋಧ

Date:

ಕೇಂದ್ರ ಸರ್ಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ದೇಶಾದ್ಯಂತ ದುಡಿಯುವ ವರ್ಗದ ಕಾರ್ಮಿಕರು ಇಂದು “ಕಪ್ಪು ದಿನ”ವನ್ನು ಆಚರಿಸಿದರು. ಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಕರೆ ನೀಡಿದಂತೆ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಮಟ್ಟದ ಕೆಲಸದ ಸ್ಥಳಗಳಲ್ಲಿ, ಕಾರ್ಖಾನೆಗಳು ಮತ್ತು ಕಂಪನಿಗಳ ಮುಂದೆ ಕಾರ್ಮಿಕರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

- Advertisement -

ಉಡುಪಿ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಕಾರ್ಮಿಕರು ಕಪ್ಪು ದಿನ ಆಚರಣೆ ನಡೆಸಿದರೆ, ಉಡುಪಿಯಲ್ಲಿ ಸಿಐಟಿಯು ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1010281263

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಲಿವೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಕಾರ್ಮಿಕರು ಹೆಚ್ಚಿನ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ, ಕೆಲಸದ ಅವಧಿ ಹೆಚ್ಚಳಗೊಂಡಿದೆ, ಮುಷ್ಕರ ಹಕ್ಕುಗಳನ್ನು ದುರ್ಬಲಗೊಳಿಸಲಾಗಿದೆ ಮತ್ತು ಕಾರ್ಮಿಕ ಸಂಘಗಳ ನೋಂದಣಿಯಲ್ಲಿ ಬದಲಾವಣೆ ತರಲಾಗಿದೆ ಎಂದು ಅವರು ಹೇಳಿದರು. ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿರುವುದರಿಂದ ಅವರ ಸುರಕ್ಷತೆ, ಭದ್ರತೆ ಮತ್ತು ಆರೋಗ್ಯ ಸಮಸ್ಯೆಗಳ ಬಗ್ಗೆ ಆತಂಕವಿದೆ ಎಂದು ತಿಳಿಸಿದರು.

1010281264 1

ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಮಾತನಾಡಿ, ಕಾರ್ಮಿಕರ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಈ ಸಂಹಿತೆಗಳನ್ನು ಜಾರಿಗೆ ತಂದಿದ್ದು, ಇದಕ್ಕೆ ಸರ್ಕಾರ ಸರಿಯಾದ ಬೆಲೆ ತೆರಬೇಕಾಗಬಹುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಬೀಡಿ ಸಂಘದ ಉಡುಪಿ ಅಧ್ಯಕ್ಷ ನಳಿನಿ, ಕಾರ್ಯದರ್ಶಿ ಉಮೇಶ್ ಕುಂದರ್, ಜನವಾದಿ ಮಹಿಳಾ ಸಂಘದ ಜಿಲ್ಲಾ ಅಧ್ಯಕ್ಷೆ ಸರೋಜ ಎಸ್, ಸಿಐಟಿಯು ಮುಖಂಡರಾದ ಮೋಹನ್, ಗಿರಿಜಾ, ವಸಂತಿ, ಕಟ್ಟಡ ಸಂಘದ ಮುಖಂಡರಾದ ಸಾರಿಕಾ, ಶರ್ಮಿಳಾ, ಸೌಮ್ಯಶಾರದ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್. ಕಾಂಚನ್ ಕಾರ್ಯಕ್ರಮವನ್ನು ನಿರೂಪಿಸಿದರು.

1010281169

ಸಿದ್ದಾಪುರದಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ: ಲೇಬರ್ ಕೋಡ್ ಜಾರಿಗೆ ತೀವ್ರ ವಿರೋಧ

ಕೇಂದ್ರ ಸರ್ಕಾರ ಕಾರ್ಮಿಕರ ಹಲವು ಕಾಯ್ದೆಗಳನ್ನು ಮೊಟಕು ಮಾಡಿ ಏಪ್ರಿಲ್ 1ರಿಂದ ನಾಲ್ಕು ಲೇಬರ್ ಕೋಡ್ ಜಾರಿಗೆ ಮುಂದಾಗಿರುವ ಕ್ರಮವನ್ನು ಖಂಡಿಸಿ, ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ನೀಡಿದ ಕಪ್ಪು ದಿನಾಚರಣೆಯ ಅಂಗವಾಗಿ ಸಿದ್ದಾಪುರ ಪೇಟೆಯಲ್ಲಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕಾರ್ಮಿಕರು ದೀರ್ಘ ಹೋರಾಟದ ಮೂಲಕ ಪಡೆದ ಹಕ್ಕುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿ ಹೊಸ ಲೇಬರ್ ಕೋಡ್ ಜಾರಿಗೆ ತರುತ್ತಿರುವುದು ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳುವ ಕ್ರಮವಾಗಿದೆ ಎಂದು ಆರೋಪಿಸಿದರು. ಹೊಸ ಲೇಬರ್ ಕೋಡ್ ಮಾಲೀಕರಿಗೆ ಹೆಚ್ಚು ಲಾಭ ಹಾಗೂ ರಕ್ಷಣೆ ನೀಡುವ ಕಾಯ್ದೆಯಾಗಿದೆ ಎಂದರು.

ಲೇಬರ್ ಕೋಡ್ ರಾಜ್ಯದಲ್ಲಿ ಜಾರಿಯಾದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ರದ್ದಾಗಿ ಕಾರ್ಮಿಕರು ಸೌಲಭ್ಯಗಳನ್ನು ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗುತ್ತದೆ. ಕರ್ನಾಟಕ ಸರ್ಕಾರ ಇದನ್ನು ಜಾರಿಗೆ ತಂದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಈ ವೇಳೆ ಅನಿಲ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಕೊರೊನಾ ಸಮಯದಲ್ಲಿಯೇ ಏರಿಸಿದ ಬೆಲೆಗಳನ್ನು ಇಳಿಸದೇ ಮುಂದುವರಿಸಿರುವುದು ಹಾಗೂ ಯುದ್ಧದ ನೆಪದಲ್ಲಿ ಮತ್ತೆ ಬೆಲೆ ಏರಿಕೆ ಮಾಡಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ತಾಲೂಕು ಉಪಾಧ್ಯಕ್ಷ ಅಲೆಕ್ಸಾಂಡರ್, ಸಿದ್ದಾಪುರ ಘಟಕದ ಅಧ್ಯಕ್ಷ ರಾಘವೇಂದ್ರ ಆಚಾರ್ಯ, ರಾಘವೇಂದ್ರ, ಚಕ್ರೇಶ್, ಸುಧಾಕರ ಮೇಸ್ತ್ರಿ, ರತ್ನಾಕರ ರಾವ್, ಸುಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಅಲೆಕ್ಸಾಂಡರ್ ಸ್ವಾಗತಿಸಿ, ರಾಘವೇಂದ್ರ ಆಚಾರ್ಯ ವಂದಿಸಿದರು.

1010281217

ಕಾರ್ಮಿಕ ಸಂಹಿತೆ ವಿರೋಧಿಸಿ ಕುಂದಾಪುರದಲ್ಲಿ ಕಪ್ಪು ದಿನ: ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ಜಾರಿಗೆ ತರಲು ಮುಂದಾಗಿರುವ 4 ಕಾರ್ಮಿಕ ಸಂಹಿತೆಗಳನ್ನು ತಡೆಹಿಡಿಯುವಂತೆ ಒತ್ತಾಯಿಸಿ ಸಿಐಟಿಯು ಕೇಂದ್ರ ಸಮಿತಿಯ ಕರೆಯ ಮೇರೆಗೆ ಕುಂದಾಪುರದ ವಿವಿಧ ಕಡೆಗಳಲ್ಲಿ ಕಾರ್ಮಿಕ ಸಂಘಗಳು “ಕಪ್ಪು ದಿನ” ಆಚರಿಸಿ ಪ್ರತಿಭಟನೆ ನಡೆಸಿದವು.

ಪ್ರತಿಭಟನೆಯಲ್ಲಿ ಕಾರ್ಮಿಕರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕುಂದಾಪುರದ 10 ಹಂಚು ಕಾರ್ಖಾನೆಯ ಬಳಿ ಬೆಳಿಗ್ಗೆ ಫ್ಯಾಕ್ಟರಿ ಗೇಟ್ ಎದುರು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ LPG ಗ್ಯಾಸ್ ಕೊರತೆ ಹಾಗೂ ಟೋಲ್ ದರ ಏರಿಕೆ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಲಾಯಿತು. ಕಾರ್ಮಿಕ ಸಂಹಿತೆಗಳ ಜಾರಿಗೆ ರಾಜ್ಯ ಸರ್ಕಾರ ನಿಯಮಾವಳಿ ರೂಪಿಸುತ್ತಿರುವುದನ್ನೂ ಸಿಐಟಿಯು ತೀವ್ರವಾಗಿ ವಿರೋಧಿಸಿದೆ.

ಈ ಪ್ರತಿಭಟನೆಯಲ್ಲಿ ಸಿಐಟಿಯು ಸಂಚಾಲನ ಸಮಿತಿಯ ಸಂಚಾಲಕ ಚಂದ್ರಶೇಖರ್ ವಿ ನೇತೃತ್ವ ವಹಿಸಿದ್ದರು.

1010281218

ಬ್ರಹ್ಮವರದಲ್ಲಿ ಕಾರ್ಮಿಕರ ಪ್ರತಿಭಟನೆ: ಆಕಾಶವಾಣಿ ಬಳಿ ಕಪ್ಪು ದಿನ ಆಚರಣೆ

ಕೇಂದ್ರ ಸರ್ಕಾರದ 4 ಕಾರ್ಮಿಕ ಸಂಹಿತೆಗಳ ವಿರುದ್ಧ ಕಾರ್ಮಿಕರು ಬ್ರಹ್ಮವರದಲ್ಲಿ ಆಕಾಶವಾಣಿ ಕಚೇರಿ ಬಳಿ ಪ್ರತಿಭಟನೆ ನಡೆಸಿ “ಕಪ್ಪು ದಿನ” ಆಚರಿಸಿದರು.

ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಸುಭಾಷ್ ನಾಯಕ್, ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ ಮಾತನಾಡಿ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಮುಖಂಡರಾದ ಸದಾಶಿವ ಪೂಜಾರಿ, ರಮೇಶ್ ಪೂಜಾರಿ, ಮುರಳಿ ಸೇರಿದಂತೆ ಹಲವು ಕಾರ್ಮಿಕರು ಉಪಸ್ಥಿತರಿದ್ದರು.

1010281215

ಕಾರ್ಕಳದಲ್ಲಿ ಸಿಐಟಿಯು ನೇತೃತ್ವದಲ್ಲಿ ಕಪ್ಪು ದಿನ ಆಚರಣೆ: ಕಾರ್ಮಿಕರ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ 4 ಕಾರ್ಮಿಕ ಸಂಹಿತೆಗಳ ವಿರುದ್ಧ ಕಾರ್ಕಳದಲ್ಲಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು “ಕಪ್ಪು ದಿನ” ಆಚರಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕಾರ್ಕಳ ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ, ಕಟ್ಟಡ ಕಾರ್ಮಿಕ ಸಂಘದ ಮುಖಂಡ ನಾಗೇಶ್ ಹಾಗೂ ಸಿಐಟಿಯು ಮುಖಂಡರಾದ ಜಯಂತಿ, ಶಕುಂತಲಾ, ಪುಷ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...