ಉಡುಪಿ | ಕನಿಷ್ಠ ಕೂಲಿ ಪರಿಷ್ಕರಣೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Date:

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾವಿರಾರು ಕಾರ್ಮಿಕರು ಮಣಿಪಾಲದಲ್ಲಿ ಭಾರಿ ಪ್ರತಿಭಟನೆ ನಡೆಸಿದರು.

- Advertisement -
1011060506

ಮಣಿಪಾಲದ ಟೈಗರ್ ಸರ್ಕಲ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಎಸಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಾವಿರಾರು ಕಾರ್ಮಿಕರಿಂದ ಸಂಗ್ರಹಿಸಲಾದ ಸಹಿ ಪ್ರತಿಯನ್ನೂ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ ಮಾತನಾಡಿದರು. ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ವಿ., ಕೋಶಾಧಿಕಾರಿ ಕವಿರಾಜ್ ಎಸ್. ಕಾಂಚನ್ ಸೇರಿದಂತೆ ಹಲವರು ಭಾಗವಹಿಸಿದರು.

ಹಂಚು ಕಾರ್ಮಿಕ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್. ನರಸಿಂಹ, ಜಿ.ಡಿ. ಪಂಜು, ಅಣ್ಣಪ್ಪ, ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ರಾಜು ಪಡುಕೊಣೆ, ಸುಭಾಸ್ ಚಂದ್ರ ನಾಯಕ್, ಗಣೇಶ್ ತೊಂಡೆಮಕ್ಕಿ, ಸಂತೋಷ ಹೆಮ್ಮಾಡಿ, ಚಿಕ್ಕಯ್ಯ ಮೊಗವೀರ, ನಾಗರತ್ನ ಪಡುವರಿ, ಅಂಗನವಾಡಿ ಮುಖಂಡರಾದ ಭಾರತಿ ಹಾಗೂ ಯಶೋಧ ಉಪಸ್ಥಿತರಿದ್ದರು.

1011060509

ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಮುಖಂಡರಾದ ಮಹಾಬಲ ಹೊಡೆಯರ ಹೋಬಳಿ, ಉಮೇಶ್ ಕುಂದರ್, ಸುನೀತಾ ಶೆಟ್ಟಿ, ಸುಮತಿ, ಬಲ್ಕೀಸ್, ನಳಿನಿ ಹಾಗೂ ಸಿಐಟಿಯು ಮುಖಂಡರಾದ ಸರೋಜ, ಮುರಳಿ, ನಾಗೇಶ್ ರಾಮಕಾರ್ಕಡ, ಸೈಯಾದ್, ಮೋಹನ್ ಚಂದ್ರ ನಿಟ್ಟೆ, ಶೀಲಾವತಿ, ಶಾರದ, ಸಾರಿಕಾ, ನಾಗರತ್ನ ನಾಡ ಮತ್ತು ಶೋಭಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ದೆಹಲಿ ಸಭೆ ವಿಫಲ; ಬಂಕಾಪುರ ಟೋಲ್ ಬಂದ್ ಮಾಡಿ ರೈತರು ಬೃಹತ್ ಪ್ರತಿಭಟನೆ

ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು...

ಯಾದಗಿರಿ | ಶಾಸಕರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ: 200ಕ್ಕೂ ಹೆಚ್ಚು ಟಿಪ್ಪರ್‌ಗಳ ಮೆರವಣಿಗೆ

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ...

ಶಿರಸಿ | ಹೊರಗುತ್ತಿಗೆ ನೌಕರರ ಸೇವೆ ಮುಂದುವರಿಸಲು ಒತ್ತಾಯ; ಜಿಲ್ಲಾಧಿಕಾರಿಗೆ ಮನವಿ

ಶಿರಸಿ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ...

ಮಂಗಳೂರು | ದಸರಾ ರಜೆಯಲ್ಲೇ ಸೆಮಿಸ್ಟರ್ ಪರೀಕ್ಷೆ: ಸಂತ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ಹಬ್ಬದ ರಜೆ ಹಾಗೂ ಪದವಿ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿ ವಿಚಾರವಾಗಿ...