ಉಡುಪಿ | ನಾಲ್ಕು ಲೇಬರ್ ಕೋಡ್ ವಿರೋಧಿಸಿ ಸಿಐಟಿಯು ಪ್ರತಿಭಟನೆ

Date:

ಕೇಂದ್ರ ಸರ್ಕಾರ ನಾಲ್ಕು ಲೇಬರ್ ಕೋಡ್ ಕುರಿತು ಅಧಿಸೂಚನೆ ಬಿಡುಗಡೆಗೊಳಿಸಿರುವುದನ್ನು ವಿರೋಧಿಸಿ ಸಿಐಟಿಯು ಉಡುಪಿ ವಲಯ ಸಮಿತಿಯ ನೇತೃತ್ವದಲ್ಲಿ ಬುಧವಾರ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿ ಅಧಿಸೂಚನೆ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು.

- Advertisement -

ಸಭೆಯನ್ನುದ್ದೇಶಿಸಿ ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷ ಶಶಿಧರ್ ಗೊಲ್ಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಹಾಗೂ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಳೂರು ಮಾತನಾಡಿ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ಸುಭಾಷ್ ನಾಯಕ್‌, ಮುಖಂಡರಾದ ಸೈಯದ್, ಮುರಳಿ, ಜನರಲ್ ವರ್ಕರ್ಸ್ ಯೂನಿಯನ್ ಕಾರ್ಯದರ್ಶಿ ರಮೇಶ್, ಬೀಡಿ ಅಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್, ಕಾರ್ಯದರ್ಶಿ ಉಮೇಶ್ ಕುಂದರ್, ಜನವಾದಿ ಮಹಿಳಾ ಸಂಘದ ಉಡುಪಿ ಜಿಲ್ಲಾಧ್ಯಕ್ಷೆ ಸರೋಜ ಎಸ್., ಮುಖಂಡರಾದ ಶಾರದ ಹಾಗೂ ಸಿಐಟಿಯು ಮುಖಂಡರಾದ ನಾಗೇಶ್‌, ವಿಶ್ವನಾಥ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್. ಕಾಂಚನ್ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...