ಉಡುಪಿ | ನೀಟ್ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಖಂಡನೀಯ: ಕೇಂದ್ರದ ನಡೆ ಪ್ರಜಾಪ್ರಭುತ್ವ ವಿರೋಧಿ : ಕಾಂಗ್ರೆಸ್

Date:

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು ತಿಳಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೊಳಗಾಗಿದ್ದು, ಹಲವರು ಜೀವ ಕಳೆದುಕೊಂಡಿರುವಂತಹ ಗಂಭೀರ ಬೆಳವಣಿಗೆಗಳ ನಡುವೆಯೂ ಕೇಂದ್ರ ಸರ್ಕಾರ ನೈತಿಕ ಹೊಣೆಗಾರಿಕೆ ವಹಿಸಲು ಸಿದ್ಧವಾಗಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಪ್ರಶ್ನೆಪತ್ರಿಕೆಯನ್ನು ಹಣ ನೀಡಿ ಖರೀದಿಸಿರುವ ಕುರಿತು ಸಿಬಿಐ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವುದಾಗಿ ಉಲ್ಲೇಖಿಸಿದ ಅವರು, ಪ್ರಕರಣದ ಬಗ್ಗೆ ಜನರಲ್ಲಿ ಮೂಡಿರುವ ಅನುಮಾನಗಳನ್ನು ನಿವಾರಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ಭಾರತದ ಸಂವಿಧಾನವು ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕನ್ನು ಪ್ರತಿಯೊಬ್ಬ ನಾಗರಿಕನಿಗೂ ನೀಡಿದೆ. ಆದರೆ ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸುವ ಬದಲು ಲಾಠಿಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಕೇಂದ್ರ ಸರ್ಕಾರದ ಅಸಹಿಷ್ಣು ಧೋರಣೆಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು.

ಪ್ರತಿಭಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ನ್ಯಾಯ ಒದಗಿಸಬೇಕು. ಅನಗತ್ಯ ಬಲಪ್ರಯೋಗಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಭಾಸ್ಕರ ರಾವ್ ಕಿದಿಯೂರು, ಭಿನ್ನಾಭಿಪ್ರಾಯಗಳನ್ನು ಬಲಪ್ರಯೋಗದಿಂದಲ್ಲ, ಸಂವಾದದ ಮೂಲಕ ಪರಿಹರಿಸುವುದೇ ಪ್ರಜಾಪ್ರಭುತ್ವದ ನಿಜವಾದ ಮಾರ್ಗ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರದಲ್ಲಿ ಅ.24ರಿಂದ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ

ಬುದ್ಧನ ಕರುಣೆ, ಸಮಾನತೆ, ಸಹಬಾಳ್ವೆ ಹಾಗೂ ಬಹುತ್ವದ ಸಂದೇಶವನ್ನು ಜನರಿಗೆ ತಲುಪಿಸುವ...

ಕಬ್ಬಿಗೆ ಟನ್‌ಗೆ ₹5,500 ನಿಗದಿಗೆ ಆಗ್ರಹ: ಅ.23ರಂದು ಗಣಂಗೂರು ಟೋಲ್ ಬಂದ್ ಪ್ರತಿಭಟನೆ

ಕಬ್ಬು ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ರೈತರ ಪ್ರಮುಖ ಬೇಡಿಕೆಗಳನ್ನು...