ಉಡುಪಿ | ನಾಳೆ ಕೊಲ್ಲೂರು ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ: ಬಿಗಿ ಪೊಲೀಸ್ ಬಂದೋಬಸ್ತ್

Date:

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.

- Advertisement -

ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಹಾಗೂ ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಪೊಲೀಸ್ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗಲಿದ್ದು, ಯಾವುದೇ ಸಾರ್ವಜನಿಕ ಭೇಟಿ ಅಥವಾ ಕಾರ್ಯಕ್ರಮಗಳನ್ನು ಆಯೋಜಿಸಿಲ್ಲ. ಆದ್ದರಿಂದ ಅವರ ವಾಹನ ಸಂಚಾರದ ಮಾರ್ಗ, ಪ್ರವೇಶ ದ್ವಾರಗಳು ಹಾಗೂ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರು ಗುಂಪು ಸೇರುವುದು ಅಥವಾ ಜನಸಂದಣಿ ಉಂಟುಮಾಡುವುದು ಬೇಡ ಎಂದು ಸೂಚಿಸಲಾಗಿದೆ.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಜಾರಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಕೆಲವೊಂದು ಅನಾನುಕೂಲತೆಗಳು ಉಂಟಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಕ್ತರು ದರ್ಶನಕ್ಕೆ ಆಗಮಿಸುವುದನ್ನು ಸಾಧ್ಯವಾದರೆ ತಪ್ಪಿಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ.

ಆದಾಗ್ಯೂ, ಭಕ್ತಾದಿಗಳಿಗೆ ಯಾವುದೇ ಸಮಯದಲ್ಲೂ ದೇವಸ್ಥಾನ ಪ್ರವೇಶ ನಿಷೇಧವಿಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಮುಖ್ಯಮಂತ್ರಿಗಳ ಭೇಟಿ ವೇಳೆ ದರ್ಶನಕ್ಕೆ ವಿಳಂಬ ಅಥವಾ ಅನಾನುಕೂಲತೆ ಉಂಟಾಗುವ ಸಾಧ್ಯತೆ ಇರುವುದರಿಂದ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿಗಳ ಸೂಚನೆಗಳಿಗೆ ಸಹಕರಿಸುವಂತೆ ಕೋರಿದೆ.

1011246991
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...

ರಾಯಚೂರು | ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಹೆಚ್ಚಾಗಲಿ: ಶಾಸಕಿ ಕರೆಮ್ಮ ಗೋಪಾಲಕೃಷ್ಣ

ರಾಜ್ಯದಲ್ಲಿ ಮಠಮಾನ್ಯಗಳ ಕೊಡುಗೆ ಅಪಾರವಾಗಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ...

ಹುಬ್ಬಳ್ಳಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಪ್ರಗತಿಪರ ಒಕ್ಕೂಟದಿಂದ ಪ್ರತಿಭಟನೆ

"ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...