ಕರಾವಳಿಗೆ ಹೈಕೋರ್ಟ್ ಪೀಠ ಏಕೆ ಬೇಕು? ದಶಕಗಳ ಬೇಡಿಕೆಗೆ ಮತ್ತೆ ಬಲ

Date:

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಕರ್ನಾಟಕಕ್ಕೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ (Circuit Bench) ಸ್ಥಾಪಿಸಬೇಕು ಎಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ನ್ಯಾಯದ ವಿಚಾರದಲ್ಲಿ ಭೌಗೋಳಿಕ ಅಂತರದಿಂದಾಗಿ ಜನಸಾಮಾನ್ಯರು ಎದುರಿಸುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಬೇಡಿಕೆಯನ್ನು ಮತ್ತಷ್ಟು ಬಲಪಡಿಸಲು ಯು-ಆಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ, ಉಡುಪಿ ಜಿಲ್ಲೆ ಮುಂದಾಗಿದೆ.

- Advertisement -

ಕರಾವಳಿಗೆ ಹೈಕೋರ್ಟ್ ಪೀಠ ಏಕೆ ಅಗತ್ಯ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಕರ್ನಾಟಕದ ಕರಾವಳಿ ಭಾಗದ ಜನರು ತಮ್ಮ ನ್ಯಾಯಾಂಗ ವ್ಯವಹಾರಗಳಿಗಾಗಿ ಬೆಂಗಳೂರಿನ ಹೈಕೋರ್ಟ್‌ನ್ನು ಅವಲಂಬಿಸಬೇಕಾದ ಸಂದರ್ಭಗಳು ಎದುರಾಗುತ್ತವೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಬೆಂಗಳೂರಿಗೆ ತೆರಳುವುದು ಸಾಮಾನ್ಯ ನಾಗರಿಕರಿಗೆ ಸುಲಭದ ಪ್ರಯಾಣವಲ್ಲ. ಪ್ರಕರಣದ ವಿಚಾರಣೆಗಾಗಿ ಪದೇಪದೇ ಬೆಂಗಳೂರಿಗೆ ತೆರಳಬೇಕಾದ ಕಕ್ಷಿದಾರರು ದೂರದ ಪ್ರಯಾಣ, ವಸತಿ, ಊಟ ಹಾಗೂ ಇತರ ವೆಚ್ಚಗಳನ್ನು ಭರಿಸಬೇಕಾಗುತ್ತದೆ.

ವಿಶೇಷವಾಗಿ ಉತ್ತರ ಕನ್ನಡದಂತಹ ದೂರದ ಜಿಲ್ಲೆಗಳಿಂದ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ಪ್ರಯಾಣದ ಅಂತರ ಮತ್ತು ಸಮಯ ಇನ್ನಷ್ಟು ಹೆಚ್ಚಾಗುತ್ತದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳನ್ನು ಬೆಂಗಳೂರಿನೊಂದಿಗೆ ಸಂಪರ್ಕಿಸುವ ಘಾಟಿ ಮಾರ್ಗಗಳು ಮಳೆಗಾಲದಲ್ಲಿ ಸಮಸ್ಯಾತ್ಮಕವಾಗುವ ಸಂದರ್ಭಗಳೂ ಇವೆ. ಭಾರಿ ಮಳೆ, ಭೂಕುಸಿತ, ರಸ್ತೆ ಸಂಚಾರದ ಅಡಚಣೆ ಸೇರಿದಂತೆ ಹಲವು ಕಾರಣಗಳಿಂದ ಪ್ರಯಾಣದ ಅನಿಶ್ಚಿತತೆ ಹೆಚ್ಚುತ್ತದೆ.

ಇಂತಹ ಪರಿಸ್ಥಿತಿಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಬೇಕಾದ ಕಕ್ಷಿದಾರರು, ಸಾಕ್ಷಿಗಳು, ವಕೀಲರು ಹಾಗೂ ಅವರ ಕುಟುಂಬದವರು ಸಮಯ ಮತ್ತು ಹಣ ಎರಡನ್ನೂ ವ್ಯಯಿಸಬೇಕಾಗುತ್ತದೆ. ಬಡವರು, ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಈ ಹೊರೆ ಮತ್ತಷ್ಟು ಗಂಭೀರವಾಗುತ್ತದೆ.

ನ್ಯಾಯ ಜನರ ಮನೆ ಬಾಗಿಲಿಗೆ ಹತ್ತಿರವಾಗಬೇಕೆಂಬ ಆಶಯ

ನ್ಯಾಯದ ಮೂಲ ಉದ್ದೇಶ ಪ್ರತಿಯೊಬ್ಬ ನಾಗರಿಕನಿಗೂ ಸುಲಭವಾಗಿ ನ್ಯಾಯ ದೊರಕುವಂತಾಗುವುದು. ನ್ಯಾಯಾಲಯ ಜನರಿಂದ ದೂರವಾದಷ್ಟೂ ಅದರ ಸೇವೆಯನ್ನು ಪಡೆಯುವ ವೆಚ್ಚ ಮತ್ತು ಸಂಕಷ್ಟ ಹೆಚ್ಚಾಗುತ್ತದೆ. ಹೀಗಾಗಿ ಕರಾವಳಿ ಪ್ರದೇಶದಲ್ಲೇ ಹೈಕೋರ್ಟ್‌ನ ಸಂಚಾರಿ ಪೀಠ ಅಥವಾ ಸೂಕ್ತ ನ್ಯಾಯಾಂಗ ವ್ಯವಸ್ಥೆ ಸ್ಥಾಪನೆಯಾದರೆ ಜನರಿಗೆ ನ್ಯಾಯ ಪಡೆಯುವ ಪ್ರಕ್ರಿಯೆ ಹೆಚ್ಚು ಸುಲಭವಾಗಬಹುದು ಎಂಬುದು ಹೋರಾಟಗಾರರ ವಾದವಾಗಿದೆ.

ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಕರಾವಳಿ ಜಿಲ್ಲೆಗಳ ಕಕ್ಷಿದಾರರಿಗೆ ಬೆಂಗಳೂರಿನವರೆಗೆ ಪದೇಪದೇ ಪ್ರಯಾಣಿಸುವ ಅನಿವಾರ್ಯತೆ ಕಡಿಮೆಯಾಗಬಹುದು. ಪ್ರಕರಣಗಳ ವಿಚಾರಣೆಗೆ ಬೇಕಾಗುವ ಸಮಯ, ಪ್ರಯಾಣ ವೆಚ್ಚ ಹಾಗೂ ಇತರ ಆರ್ಥಿಕ ಹೊರೆಯನ್ನು ತಗ್ಗಿಸಲು ಇದು ನೆರವಾಗಬಹುದು.

ಕರಾವಳಿಗೆ ಹೈಕೋರ್ಟ್ ಪೀಠ ಬೇಕೆಂಬ ಬೇಡಿಕೆಯನ್ನು ಕೇವಲ ವಕೀಲರ ಸಮುದಾಯದ ಬೇಡಿಕೆಯಾಗಿ ನೋಡುವ ಬದಲು, ಇಡೀ ಕರಾವಳಿ ಜನತೆಯ ನ್ಯಾಯಾಂಗ ಹಕ್ಕಿನ ಪ್ರಶ್ನೆಯಾಗಿ ರೂಪಿಸುವ ಪ್ರಯತ್ನ ನಡೆಯುತ್ತಿದೆ. ಈ ಕಾರಣಕ್ಕಾಗಿ ವಿವಿಧ ಸಾಮಾಜಿಕ ಮತ್ತು ವೃತ್ತಿಪರ ಸಂಘಟನೆಗಳನ್ನು ಹೋರಾಟದೊಂದಿಗೆ ಸೇರಿಸಿಕೊಳ್ಳಲು ಮುಂದಾಗಲಾಗಿದೆ. ವಕೀಲರ ಸಂಘಗಳು, ಪತ್ರಕರ್ತರ ಸಂಘಟನೆಗಳು, ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ರೈತ ಮತ್ತು ಕಾರ್ಮಿಕ ಸಂಘಟನೆಗಳು, ಮಹಿಳಾ ಮಂಡಳಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು, ಯುವಕ ಸಂಘಟನೆಗಳು ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆಗಳು ಒಟ್ಟಾಗಿ ಧ್ವನಿ ಎತ್ತುವ ಅಗತ್ಯವನ್ನು ಹೋರಾಟ ಸಮಿತಿ ಪ್ರತಿಪಾದಿಸುತ್ತಿದೆ.

WhatsApp Image 2026 08 23 at 12.10.00 AM 2

ಕರಾವಳಿಯ ವಿಶೇಷ ಸಮಸ್ಯೆಗಳಿಗೆ ನ್ಯಾಯಾಂಗ ಸ್ಪಂದನೆ

ಕರಾವಳಿ ಕರ್ನಾಟಕ ತನ್ನದೇ ಆದ ಭೌಗೋಳಿಕ, ಪರಿಸರ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಹೊಂದಿದೆ. ಸಮುದ್ರ ತೀರ, ನದಿಗಳು, ಬಂದರುಗಳು, ಕೃಷಿ ಪ್ರದೇಶಗಳು, ಅರಣ್ಯ ಮತ್ತು ಪಶ್ಚಿಮ ಘಟ್ಟಗಳಂತಹ ಸೂಕ್ಷ್ಮ ಪರಿಸರ ವ್ಯವಸ್ಥೆಗಳನ್ನು ಹೊಂದಿರುವ ಈ ಭಾಗದಲ್ಲಿ ಭೂಮಿ ಮತ್ತು ಪರಿಸರಕ್ಕೆ ಸಂಬಂಧಿಸಿದ ವಿವಾದಗಳು ನಿರಂತರವಾಗಿ ಎದುರಾಗುತ್ತಿವೆ.

CRZ ನಿಯಮಗಳು, ಭೂ ವ್ಯಾಜ್ಯಗಳು, ಪರಿಸರ ಸಂರಕ್ಷಣೆ, ಅಭಿವೃದ್ಧಿ ಕಾಮಗಾರಿಗಳು, ಸಾರ್ವಜನಿಕ ಮೂಲಸೌಕರ್ಯ, ಭೂಸ್ವಾಧೀನ ಸೇರಿದಂತೆ ಹಲವು ವಿಷಯಗಳು ನ್ಯಾಯಾಂಗದ ಮುಂದೆ ಬರುತ್ತವೆ. ಸ್ಥಳೀಯವಾಗಿ ಹೈಕೋರ್ಟ್ ಪೀಠದಂತಹ ವ್ಯವಸ್ಥೆ ಇದ್ದರೆ ಇಂತಹ ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಕಕ್ಷಿದಾರರಿಗೆ ನ್ಯಾಯಾಂಗ ವ್ಯವಸ್ಥೆಯನ್ನು ಸುಲಭವಾಗಿ ತಲುಪಲು ಸಾಧ್ಯವಾಗುತ್ತದೆ ಎಂಬ ನಿರೀಕ್ಷೆಯಿದೆ. ಅದೇ ರೀತಿ ಮಹಿಳೆಯರು, ಹಿರಿಯ ನಾಗರಿಕರು, ಮಕ್ಕಳು ಹಾಗೂ ದುರ್ಬಲ ವರ್ಗಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿಯೂ ನ್ಯಾಯಾಂಗ ವ್ಯವಸ್ಥೆಯ ಪ್ರವೇಶ ಸುಲಭವಾಗುವುದು ಮಹತ್ವದ್ದಾಗಿದೆ.

ಹೈಕೋರ್ಟ್ ಪೀಠ ಸ್ಥಾಪನೆಯ ಪರಿಣಾಮ ಕೇವಲ ನ್ಯಾಯಾಂಗ ಕ್ಷೇತ್ರಕ್ಕೆ ಸೀಮಿತವಾಗುವುದಿಲ್ಲ ಎಂಬ ಅಭಿಪ್ರಾಯವೂ ಇದೆ. ನ್ಯಾಯಾಂಗ ವ್ಯವಸ್ಥೆಯ ಪ್ರಮುಖ ಕೇಂದ್ರವೊಂದು ಕರಾವಳಿಯಲ್ಲಿ ರೂಪುಗೊಂಡರೆ ವಕೀಲರು, ಕಾನೂನು ವೃತ್ತಿಪರರು, ನ್ಯಾಯಾಂಗ ಸಿಬ್ಬಂದಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಉದ್ಯೋಗ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಬಹುದು.

ಕಾನೂನು ಶಿಕ್ಷಣ ಸಂಸ್ಥೆಗಳು, ಕಾನೂನು ಸಂಶೋಧನೆ, ವೃತ್ತಿಪರ ಸೇವೆಗಳು ಮತ್ತು ಸಂಬಂಧಿತ ಆರ್ಥಿಕ ಚಟುವಟಿಕೆಗಳಿಗೂ ಇದು ಸಹಕಾರಿಯಾಗುವ ಸಾಧ್ಯತೆಯಿದೆ. ಈ ಮೂಲಕ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ನ್ಯಾಯಾಂಗ ಮೂಲಸೌಕರ್ಯವೂ ಒಂದು ಪ್ರಮುಖ ಅಂಶವಾಗಬಹುದು.

ಕರಾವಳಿಗೆ ಹೈಕೋರ್ಟ್ ಪೀಠದ ಬೇಡಿಕೆಯನ್ನು ಪರಿಣಾಮಕಾರಿಯಾಗಿ ಸರ್ಕಾರ ಮತ್ತು ಸಂಬಂಧಪಟ್ಟ ನ್ಯಾಯಾಂಗ ಪ್ರಾಧಿಕಾರಗಳ ಗಮನಕ್ಕೆ ತರಲು ಸಂಘಟಿತ ಹೋರಾಟದ ಅಗತ್ಯವಿದೆ. ಈ ನಿಟ್ಟಿನಲ್ಲಿ ಉಡುಪಿಯಲ್ಲಿ ನಡೆಯಲಿರುವ ಸಭೆಯನ್ನು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

ಸಭೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿ ಬೇಡಿಕೆಯ ಕುರಿತು ಚರ್ಚಿಸುವುದರ ಜೊತೆಗೆ ಮುಂದಿನ ದಿನಗಳಲ್ಲಿ ಯಾವ ರೀತಿಯ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು, ಸರ್ಕಾರದ ಮೇಲೆ ಹೇಗೆ ಒತ್ತಡ ತರಬೇಕು ಮತ್ತು ಕರಾವಳಿಯ ಮೂರು ಜಿಲ್ಲೆಗಳನ್ನು ಒಳಗೊಂಡಂತೆ ಹೋರಾಟವನ್ನು ಹೇಗೆ ವಿಸ್ತರಿಸಬೇಕು ಎಂಬ ಬಗ್ಗೆ ರೂಪುರೇಷೆ ಸಿದ್ಧಪಡಿಸುವ ನಿರೀಕ್ಷೆಯಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಭೌಗೋಳಿಕವಾಗಿ ಹಾಗೂ ಸಾಮಾಜಿಕವಾಗಿ ವಿಭಿನ್ನವಾಗಿದ್ದರೂ ನ್ಯಾಯಾಂಗದ ಸುಲಭ ಪ್ರವೇಶದ ವಿಚಾರದಲ್ಲಿ ಸಾಮಾನ್ಯ ಸಮಸ್ಯೆಗಳನ್ನು ಹೊಂದಿವೆ. ಹೀಗಾಗಿ ಈ ಮೂರು ಜಿಲ್ಲೆಗಳ ಜನಪ್ರತಿನಿಧಿಗಳು, ವಕೀಲರು, ಸಾಮಾಜಿಕ ಸಂಘಟನೆಗಳು ಮತ್ತು ಸಾರ್ವಜನಿಕರು ಒಗ್ಗಟ್ಟಾಗಿ ಧ್ವನಿ ಎತ್ತಿದರೆ ಬೇಡಿಕೆಗೆ ಹೆಚ್ಚಿನ ಬಲ ಸಿಗಬಹುದು.

WhatsApp Image 2026 08 23 at 12.10.00 AM 1

ಈ ದಿನ.ಕಾಮ್ ಜೊತೆ ಮಾತನಾಡಿದ ಯು-ಆ್ಯಕ್ಟ್ ಸಂಸ್ಥಾಪಕ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕ ನ್ಯಾಯವಾದಿ ಪ್ರೇಮ್‌ಪ್ರಸಾದ್ ಶೆಟ್ಟಿ, ಕರಾವಳಿ ಭಾಗಕ್ಕೆ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ದಶಕಗಳಿಂದಲೂ ಇದೆ. ರಾಜ್ಯದಲ್ಲಿ ಈಗಾಗಲೇ ಧಾರವಾಡ ಹಾಗೂ ಕಲಬುರಗಿಯಲ್ಲಿ ಹೈಕೋರ್ಟ್ ಪೀಠಗಳನ್ನು ಸ್ಥಾಪಿಸಲಾಗಿದ್ದು, 2008ರಲ್ಲಿ ಆದೇಶದ ಮೂಲಕ ಅಲ್ಲಿ ಸಂಚಾರಿ ಪೀಠಗಳನ್ನು ಆರಂಭಿಸಿ, ಬಳಿಕ ಅವುಗಳನ್ನು ಖಾಯಂ ಪೀಠಗಳನ್ನಾಗಿ ಘೋಷಿಸಲಾಗಿದೆ. ಇದೇ ರೀತಿಯಲ್ಲಿ ಕರಾವಳಿ ಭಾಗಕ್ಕೂ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿದರು.

ಕರಾವಳಿ ಭಾಗದಲ್ಲಿ ಭೂ ವ್ಯಾಜ್ಯಗಳು, ಮೀನುಗಾರರ ಸಮಸ್ಯೆಗಳು, ಸಿಆರ್‌ಝಡ್‌ಗೆ ಸಂಬಂಧಿಸಿದ ಪ್ರಕರಣಗಳು, ವಿದ್ಯಾರ್ಥಿಗಳ ಸಮಸ್ಯೆಗಳು, ವಿವಿಧ ಸಂಸ್ಥೆಗಳಿಗೆ ಸಂಬಂಧಿಸಿದ ವ್ಯಾಜ್ಯಗಳು ಸೇರಿದಂತೆ ಅನೇಕ ಪ್ರಕರಣಗಳು ಪ್ರಸ್ತುತ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇವೆ. ಹೈಕೋರ್ಟ್‌ನಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಇರುವುದರಿಂದ ನ್ಯಾಯಾಲಯದ ಮೇಲೂ ಹೆಚ್ಚಿನ ಒತ್ತಡವಿದೆ. ಕರಾವಳಿಗೆ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಈ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಕರಾವಳಿ ಭಾಗದ ಜನರಿಗೆ ತ್ವರಿತವಾಗಿ ನ್ಯಾಯ ದೊರೆಯಲು ಅನುಕೂಲವಾಗಲಿದೆ ಎಂದರು.

ಕರಾವಳಿಗೆ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವುದು ಕರಾವಳಿಗರ ನ್ಯಾಯಯುತ ಬೇಡಿಕೆಯಾಗಿದೆ. ರಾಜ್ಯ ಸರ್ಕಾರ, ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಗೂ ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಕರಾವಳಿಗೆ ಹೈಕೋರ್ಟ್ ಪೀಠವನ್ನು ನೀಡಬೇಕು. ‘ಜನರ ಬಾಗಿಲಿಗೆ ನ್ಯಾಯ’ ಎಂಬ ಆಶಯದಂತೆ ಹೈಕೋರ್ಟ್ ಪೀಠ ಕರಾವಳಿಯಲ್ಲಿ ಸ್ಥಾಪನೆಯಾದರೆ ಸಾಮಾನ್ಯ ಜನರಿಗೂ ನ್ಯಾಯ ಪಡೆಯುವುದು ಸುಲಭವಾಗಲಿದೆ ಎಂದು ಹೇಳಿದರು.

ಈ ಸಂಬಂಧ ಮುಂದಿನ ದಿನಗಳಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವವರೆಗೂ ಹೋರಾಟವನ್ನು ನಿರಂತರವಾಗಿ ಮುನ್ನಡೆಸಲಾಗುವುದು ಎಂದು ಪ್ರೇಮ್‌ಪ್ರಸಾದ್ ಶೆಟ್ಟಿ ಹೇಳಿದರು.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ನ್ಯಾಯಾಲಯಗಳಲ್ಲಿ ಲಕ್ಷಾಂತರ ದಾವೆಗಳು ಇತ್ಯರ್ಥವಾಗುತ್ತಿವೆ. ಆದರೆ, ಈ ಪ್ರಕರಣಗಳಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗದೆ ಹಲವರು ನ್ಯಾಯದಿಂದ ವಂಚಿತರಾಗುತ್ತಿದ್ದಾರೆ. ಬೆಂಗಳೂರಿಗೆ ತೆರಳಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದು ಸಾಮಾನ್ಯ ಜನರಿಗೆ ಆರ್ಥಿಕವಾಗಿ ಹಾಗೂ ಸಮಯದ ದೃಷ್ಟಿಯಿಂದಲೂ ಕಷ್ಟವಾಗುತ್ತಿದೆ. ಆದ್ದರಿಂದ ಕರಾವಳಿ ಭಾಗಕ್ಕೆ ಹೈಕೋರ್ಟ್ ಪೀಠದ ಅಗತ್ಯ ಅತ್ಯಂತ ಹೆಚ್ಚಾಗಿದೆ ಎಂದರು.

ಈ ಹೋರಾಟವನ್ನು ಇಡೀ ಕರಾವಳಿ ಭಾಗಕ್ಕೆ ವಿಸ್ತರಿಸುವ ಉದ್ದೇಶದಿಂದ ಮುಂದಿನ 15 ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುವುದು. ಇದೇ ವೇಳೆ ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕ ಅಭಿಯಾನ ನಡೆಸಲಾಗುವುದು. ವಿದ್ಯಾರ್ಥಿಗಳ ಬಳಿಗೂ ಈ ಹೋರಾಟವನ್ನು ಕೊಂಡೊಯ್ದು, ಕರಾವಳಿಗೆ ಹೈಕೋರ್ಟ್ ಪೀಠದ ಅಗತ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪ್ರೇಮ್‌ಪ್ರಸಾದ್ ಶೆಟ್ಟಿ ಹೇಳಿದರು.

WhatsApp Image 2026 08 23 at 12.10.00 AM

ಈದಿನ.ಕಾಮ್‌ ಜೊತೆ ಮಾತನಾಡಿದ ಕರ್ನಾಟಕ ಬಾರ್ ಕೌನ್ಸಿಲ್‌ನ ಸದಸ್ಯೆ ಶ್ಯಾಮಲಾ ಭಂಡಾರಿ, ಕರಾವಳಿಗೆ ಹೈಕೋರ್ಟ್ ಪೀಠ ಸ್ಥಾಪನೆಯಾಗದಂತೆ ಕೆಲವೊಂದು ಲಾಬಿಗಳು ಅಡ್ಡಿಯಾಗುತ್ತಿವೆ ಎಂದು ಆರೋಪಿಸಿದರು.

ಈ ಅಡ್ಡಿಗಳನ್ನು ಮೆಟ್ಟಿ ನಿಲ್ಲಬೇಕಾದರೆ ಜನಪ್ರತಿನಿಧಿಗಳು, ವಕೀಲರು ಹಾಗೂ ಸಾರ್ವಜನಿಕರು ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಕರಾವಳಿಗೆ ಹೈಕೋರ್ಟ್ ಪೀಠದ ಅಗತ್ಯತೆ ಏನು ಎಂಬುದನ್ನು ಸರ್ಕಾರ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಜನಪ್ರತಿನಿಧಿಗಳಿಗೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡಬೇಕು ಎಂದು ಅವರು ಹೇಳಿದರು.

ಕರಾವಳಿ ಭಾಗದ ಜನರಿಗೆ ನ್ಯಾಯಾಂಗ ಸೇವೆಗಳನ್ನು ಸುಲಭವಾಗಿ ಹಾಗೂ ತ್ವರಿತವಾಗಿ ದೊರಕಿಸುವ ನಿಟ್ಟಿನಲ್ಲಿ ಹೈಕೋರ್ಟ್ ಪೀಠದ ಬೇಡಿಕೆ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಶ್ಯಾಮಲಾ ಭಂಡಾರಿ ಅಭಿಪ್ರಾಯಪಟ್ಟರು.

ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ ಎಂಬುದು ಕೇವಲ ನ್ಯಾಯಾಲಯವೊಂದರ ಸ್ಥಾಪನೆಯ ಬೇಡಿಕೆಯಲ್ಲ; ದೂರದ ಪ್ರದೇಶದ ಜನರಿಗೂ ನ್ಯಾಯವನ್ನು ಸುಲಭವಾಗಿ ತಲುಪಿಸುವ ನ್ಯಾಯಾಂಗ ವಿಕೇಂದ್ರೀಕರಣದ ಬೇಡಿಕೆಯಾಗಿದೆ. ದಶಕಗಳಿಂದ ಕೇಳಿಬರುತ್ತಿರುವ ಈ ಬೇಡಿಕೆ ಇದೀಗ ವಿವಿಧ ಕ್ಷೇತ್ರಗಳ ಒಕ್ಕೂಟದ ಮೂಲಕ ಮತ್ತಷ್ಟು ಬಲ ಪಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಕರಾವಳಿಯ ಪ್ರಮುಖ ಜನಪರ ಹೋರಾಟವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ.

ಕರಾವಳಿಯ ಎಲ್ಲ ವರ್ಗಗಳ ಜನರು ಒಂದಾಗಿ ಈ ಬೇಡಿಕೆಯನ್ನು ಮುಂದಿಟ್ಟುಕೊಂಡು ಸಂಘಟಿತವಾಗಿ ಹೋರಾಟ ನಡೆಸಿದರೆ, ದೀರ್ಘಕಾಲದ ಈ ಬೇಡಿಕೆಗೆ ಸರ್ಕಾರ ಹಾಗೂ ಸಂಬಂಧಪಟ್ಟ ಸಂಸ್ಥೆಗಳಿಂದ ಗಂಭೀರ ಸ್ಪಂದನೆ ದೊರಕುವ ನಿರೀಕ್ಷೆ ಮೂಡಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...