ಉಡುಪಿ | ಕಾರ್ಕಳದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

Date:

ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (CITU) ಹಾಗೂ ಕಾರ್ಕಳ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವು ಇಂದು ಕಾರ್ಕಳದ ಸಿಐಟಿಯು ಕಚೇರಿಯಲ್ಲಿ ನಡೆಯಿತು.

- Advertisement -

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ರಾಜ್ಯಾದ್ಯಂತ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದ್ದು, ಕಾರ್ಕಳದಲ್ಲಿಯೂ ಮೊದಲ ಹಂತದಲ್ಲಿ ಕಾರ್ಮಿಕರಿಗೆ ಕಾರ್ಡ್‌ಗಳನ್ನು ವಿತರಿಸಲಾಯಿತು. ಕಾರ್ಕಳ ತಾಲೂಕಿನಲ್ಲಿ ಸಾವಿರಾರು ಬೀಡಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಈ ಯೋಜನೆ ಅವರಿಗೆ ಮಹತ್ವದ ನೆರವಾಗಲಿದೆ ಎಂದು ತಿಳಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರಸ್ತುತ ಈ ಯೋಜನೆಯಡಿ ಅಪಘಾತ ಪರಿಹಾರ ಸೌಲಭ್ಯ, ಸಹಜ ಮರಣ ಪರಿಹಾರ ಹಾಗೂ ಅಂತ್ಯಕ್ರಿಯೆ ವೆಚ್ಚ ಸೇರಿದಂತೆ ವಿವಿಧ ಸೌಲಭ್ಯಗಳು ದೊರೆಯಲಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕಿದ್ದು, ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಲು ಹೋರಾಟದ ಅಗತ್ಯವಿದೆ ಎಂದು ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್ ಹೇಳಿದರು.

ಕರ್ನಾಟಕದಲ್ಲಿ ಲಕ್ಷಾಂತರ ಬೀಡಿ ಕಾರ್ಮಿಕರು ಕಡಿಮೆ ವೇತನದಲ್ಲಿ ದುಡಿಯುತ್ತಿದ್ದು, ಈ ಸ್ಮಾರ್ಟ್ ಕಾರ್ಡ್ ಯೋಜನೆ ಅವರಿಗೆ ಸಾಮಾಜಿಕ ಭದ್ರತೆಯ ಭರವಸೆಯಾಗಿ ಪರಿಣಮಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಕಾರ್ಕಳ ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ ಹಾಗೂ ಸಿಐಟಿಯು ಮುಖಂಡೆ ಪುಷ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...