ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

Date:

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ)ದ ನೇತೃತ್ವದಲ್ಲಿ ಮಂಗಳವಾರ ಕಟ್‌ಬೇಲ್ತೂರು ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ರೈಲ್ವೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕಟ್‌ಬೇಲ್ತೂರು ರೈಲ್ವೆ ಸೇತುವೆಯ ಅಪಾಯಕಾರಿ ತಿರುವಿನ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದರೂ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯತ್ ಮೂಲಕ ಮನವಿ ಸಲ್ಲಿಸಿ, ಪ್ರತಿಭಟನೆ ನಡೆಸಿ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೂ ರೈಲ್ವೆ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಈ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ಅಪಾಯಕಾರಿ ತಿರುವಿನಿಂದಾಗಿ ಈಗಾಗಲೇ 7–8 ಅಮೂಲ್ಯ ಜೀವಗಳು ಕಳೆದುಹೋಗಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ಇನ್ನಷ್ಟು ಅಪಘಾತಗಳು ಸಂಭವಿಸುವ ಮುನ್ನವೇ ಸೇತುವೆಯ ತಿರುವನ್ನು ಅಗಲೀಕರಣಗೊಳಿಸಿ ವೈಜ್ಞಾನಿಕವಾಗಿ ಸರಿಪಡಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಸೇತುವೆಯ ಅಗಲೀಕರಣ ಹಾಗೂ ಅಪಾಯಕಾರಿ ತಿರುವಿನ ಸರಿಪಡಿಸುವ ಕಾಮಗಾರಿಯನ್ನು ಕೈಗೊಳ್ಳಬೇಕು. ಅಧಿಕಾರಿಗಳು ಇನ್ನೂ ನಿರ್ಲಕ್ಷ್ಯ ಮುಂದುವರಿಸಿದರೆ, ಗ್ರಾಮಸ್ಥರನ್ನು ಸಂಘಟಿಸಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸುರೇಶ್ ಕಲ್ಲಾಗರ ಎಚ್ಚರಿಸಿದರು.

ಸಿಪಿಎಂ ಮುಖಂಡ ಎಚ್. ನರಸಿಂಹ ಮಾತನಾಡಿ, ತಂತ್ರಜ್ಞಾನ ಮತ್ತು ವೈಜ್ಞಾನಿಕ ಅಭಿವೃದ್ಧಿ ಇಷ್ಟೊಂದು ಮುಂದುವರಿದಿರುವ ಸಂದರ್ಭದಲ್ಲಿ ಜನರ ಜೀವಕ್ಕೆ ಅಪಾಯ ಉಂಟುಮಾಡುವ ಇಂತಹ ಸಮಸ್ಯೆಯನ್ನು ವರ್ಷಗಳಿಂದ ಬಗೆಹರಿಸದೆ ಉಳಿಸಿರುವುದು ಆಡಳಿತದ ವೈಫಲ್ಯವಾಗಿದೆ. ಸಾರ್ವಜನಿಕರ ಸುರಕ್ಷತೆಯನ್ನು ಕಡೆಗಣಿಸದೆ, ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಸಮಸ್ಯೆ ಪರಿಹಾರಕ್ಕಾಗಿ ಗ್ರಾಮದ ಜನರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಪ್ರತಿಭಟನೆಯನ್ನುದ್ದೇಶಿಸಿ ಚಂದ್ರಶೇಖರ ವಿ. ಹಾಗೂ ಸಂತೋಷ ಹೆಮ್ಮಾಡಿ ಮಾತನಾಡಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರೈಲ್ವೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗೆ ಮನವಿ ನೀಡಲಾಯಿತು.

ಪ್ರತಿಭಟನೆಯಲ್ಲಿ ಸ್ಥಳೀಯರಾದ ಶ್ರೀಧರ ಗಾಣಿಗ, ರಮೇಶ್ ಗಾಣಿಗ,ಶಂಕರ ಆಚಾರ್, ಶಿವರಾಮ,ವಿಜಯ ,ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...