ಮಂಗಳೂರು | ದೇರಳಕಟ್ಟೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕೊಳಚೆ ನೀರು ಶೇಖರಣೆ, ವಿಪರೀತ ದುರ್ವಾಸನೆ, ಕಠಿಣ ಕ್ರಮ ಕೈಗೊಳ್ಳಲು ಸಿಪಿಐ(ಎಂ) ಒತ್ತಾಯ

Date:

ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕಳೆದ ಹಲವಾರು ತಿಂಗಳಿನಿಂದ ಕೊಳಚೆ ನೀರು ಶೇಖರಣೆಗೊಂಡಿದ್ದು ಇದರಿಂದ ವಿಪರೀತ ದುರ್ವಾಸನೆ ಪರಿಸರದಾದ್ಯಂತ ಬೀರುತ್ತಿದ್ದು, ಇದರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಉಳ್ಳಾಲ ವಲಯ ಸಮಿತಿಯು ಇಂದು ಉಳ್ಳಾಲ ತಾಲೂಕು ತಹಶೀಲ್ದಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು,ಬೆಳ್ಮ ಗ್ರಾಮ ಪಂಚಾಯತ್ ನ‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳಿಗೆ ಮನವಿಯನ್ನು ಅರ್ಪಿಸಿತು.

- Advertisement -
1011024524

ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಮುಂಭಾಗದ ರಸ್ತೆಯು ಬೆಳ್ಮ ಗ್ರಾಮ ಪಂಚಾಯತ್ ಹಾಗೂ ಕೋಟೆಕಾರ್ ಪಟ್ಟಣ ಪಂಚಾಯತ್ ನ‌ ಮಧ್ಯದಲ್ಲಿ ಹಾದು ಹೋಗುತ್ತಿದೆ. ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಈ ರಸ್ತೆಯ ಪಕ್ಕದಲ್ಲಿ ಲಾಡ್ಜ್ ಗಳು ಹಾಗೂ ವಾಣಿಜ್ಯ ಸಂಕೀರ್ಣಗಳಿದ್ದು ಅಲ್ಲಿನ ಡ್ರೈನೇಜ್ ನೀರು ಮಧ್ಯದಲ್ಲಿರುವ ಪ್ರಮುಖ ರಸ್ತೆಯ ಅಡಿಭಾಗದಲ್ಲಿ ಬಂದು ಕೆ ಎಸ್ ಹೆಗ್ಡೆ ಆಸ್ಪತ್ರೆಯಿರುವ ಕೋಟೆಕಾರ್‌ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಹಾದು ಹೋಗುತ್ತಿದೆ. ಆದರೆ ಈ ಆಸ್ಪತ್ರೆಯ ಮುಖ್ಯದ್ವಾರದ ಬಳಿಯಲ್ಲೇ ಈ ಕೊಳಚೆ ನೀರನ್ನು ಮುಂದಕ್ಕೆ ಸಾಗದ ಹಾಗೆ ತಡೆಹಿಡಿಯಲಾಗಿದೆ. ಇದರಿಂದ ಆ ಪರಿಸರದಲ್ಲಿ ವಿಪರೀತ ದುರ್ನಾತ ಬೀರುತ್ತಿದ್ದು ಅಲ್ಲಿ ಒಂದು ಕ್ಷಣವೂ ಇರಲು ಸಾಧ್ಯವಿಲ್ಲ. ಇದರಿಂದಾಗಿ ಮಲೇರಿಯಾ ಡೆಂಗ್ಯೂನಂತಹ ಮಾರಕ ಕಾಯಿಲೆಗಳು ಹರಡುವ ಅಪಾಯವಿದೆ. ಹಾಗೂ ಅಲ್ಲೇ ಪಕ್ಕದಲ್ಲಿರುವ ಅಟೋರಿಕ್ಷಾ ನಿಲ್ದಾಣದಲ್ಲಿ 50 ಕ್ಕೂ ಮಿಕ್ಕಿ ಅಟೋರಿಕ್ಷಾ ಚಾಲಕರಿದ್ದು ದುಡಿಯಲು ಅಸಾಧ್ಯವಾಗಿದೆ. ಕಳೆದ ಹಲವಾರು ತಿಂಗಳಿನಿಂದ ಇರುವ ಈ ಸಮಸ್ಯೆಯ ಬಗ್ಗೆ ಸ್ಥಳೀಯರು ಸಂಬಂಧಪಟ್ಟವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಜನತೆಯ ಆರೋಗ್ಯದ ಪ್ರಶ್ನೆಯನ್ನು ಮುಂದಿಟ್ಟು ಹಾಗೂ ಒಳಚರಂಡಿ ವ್ಯವಸ್ಥೆಗೆ ಅಂತಿಮ ಕಾಯಕಲ್ಪ ನೀಡುವ ಸಲುವಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮಧ್ಯೆಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು CPIM ಉಳ್ಳಾಲ ವಲಯ ಸಮಿತಿಯು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1011024522

ನಿಯೋಗದಲ್ಲಿ CPIM ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಜಿಲ್ಲೆಯ ಕಮ್ಯುನಿಸ್ಟ್ ಚಳುವಳಿಯ ಹಿರಿಯ ನೇತಾರರಾದ ಕೃಷ್ಣಪ್ಪ ಸಾಲ್ಯಾನ್, CPIM ಉಳ್ಳಾಲ ವಲಯ ನಾಯಕರಾದ ಜನಾರ್ಧನ ಕುತ್ತಾರ್, ಇಬ್ರಾಹಿಂ ಅಂಬ್ಲಮೊಗರು, ಸದಾಶಿವ ಕುತ್ತಾರ್, DYFI ಜಿಲ್ಲಾ ನಾಯಕರಾದ ರಜಾಕ್ ಮುಡಿಪು, CITU ನಾಯಕರಾದ ಜಗದೀಶ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...