ಉಡುಪಿ | ಎಸ್ ಐ ಆರ್: ಸಾಂವಿಧಾನಿಕ ಹಕ್ಕು ಕಾಪಾಡಲು ಸಿಪಿಐ(ಎಂ) ಮನವಿ

Date:

ಭಾರತ ಚುನಾವಣಾ ಆಯೋಗವು ದೇಶದಾದ್ಯಂತ “ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐ ಆರ್) ಜೂನ್ 30 ರಿಂದ ಪ್ರಕ್ರಿಯೆ ಆರಂಭವಾಗಲಿದ್ದು ಕೆಲವು ದಾಖಲೆಗಳನ್ನು ಕೇಳುತ್ತಿದ್ದು ಭಾರತೀಯನಾಗಿದ್ದು ಕೆಲವು ದಾಖಲೆಗಳನ್ನು ಒದಗಿಸಲು ಸಮಸ್ಯೆಯಾದರೆ ಜಿಲ್ಲಾಡಳಿತವು ಅಂತಹ ದಾಖಲೆಗಳನ್ನು ಸುಸೂತ್ರವಾಗಿ ಶೀಘ್ರ ದಾಖಲೆಗಳನ್ನು ಒದಗಿಸಲು ಮುಂದಾಗಬೇಕು ಎಂದು ಸಿಪಿಎಂ ಜಿಲ್ಲಾ ಸಮಿತಿ ಇಂದು ಅಪರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ನೀಡಿತು.

- Advertisement -

ಸಾಂವಿಧಾನಿಕ ಹಕ್ಕನ್ನು ಚಲಾಯಿಸಲು ಕೆಲವು ದಾಖಲೆಗಳನ್ನು ಹೊಂದಿಸಿಕೊಳ್ಳಲಾಗದ ಕೋಟ್ಯಂತರ ಬಡಜನರು, ಕೂಲಿಕಾರರು, ವಲಸೆ ಕಾರ್ಮಿಕರು, ಮಹಿಳೆಯರು,ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ದೇಶದಲ್ಲಿ ಈಗಾಗಲೇ ಎಸ್ ಐ ಆರ್ ನಡೆಸಿರುವ ರಾಜ್ಯಗಳಲ್ಲಿ ಸುಮಾರು 6.5 ಕೋಟಿ ಜನ ಮತದಾರರು ಪಟ್ಟಿಯಿಂದ ಹೊರಗುಳಿಯುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಇದುವರೆಗಿನ ಎಸ್ ಐ ಆರ್ ಜಾರಿಯಲ್ಲಿ ಪಶ್ಚಿಮ ಬಂಗಾಳವನ್ನು ಹೊರತುಪಡಿಸಿದರೆ ಬೇರಾವ ರಾಜ್ಯಗಳಲ್ಲೂ ಜಾರಿ ಮಾಡದಿದ್ದ ‘ತಾರ್ಕಿಕ ವ್ಯತ್ಯಾಸ’ ಮಾನದಂಡವನ್ನು ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಆಯೋಗ ಅಳವಡಿಸಿರುವುದು ಖಂಡನೀಯವಾಗಿದೆ.
ಕೇಂದ್ರದ ಬಿಜೆಪಿ ಸರಕಾರವು ಸಂವಿಧಾನ ವಿರೋಧಿಯಾದ ಎಸ್ ಐ ಆರ್ ಜಾರಿಗೊಳಿಸಿರುವುದನ್ನು ಕರ್ನಾಟಕ ರಾಜ್ಯ ಸರ್ಕಾರ ಎಲ್ಲರ ಹಕ್ಕುಗಳನ್ನು ರಕ್ಷಿಸಲು ಮುಂದಾಗಬೇಕು ಎಂದು ಸಿಪಿಎಂ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಬೇಡಿಕೆಗಳು:

1.ಪ್ರತಿಯೊಬ್ಬ ನಾಗರಿಕರ ಮತದಾನದ ಹಕ್ಕು ರಕ್ಷಿಸಬೇಕು ದಾಖಲೆಗಳ ಕೊರತೆಯಿಂದ ಯಾರ ಹೆಸರನ್ನೂ ಮತದಾರರ ಪಟ್ಟಿಯಿಂದ ತೆಗೆಯದಂತೆ ಅಗತ್ಯ ಕ್ರಮವಹಿಸಬೇಕು.

2.ಯಾರಿಗೆ ಚುನಾವಣಾ ಆಯೋಗ ನಿಗದಿಪಡಿಸಿರುವ 11 ದಾಖಲೆಗಳ ಪೈಕಿ ಒಂದು ದಾಖಲೆಯನ್ನೂಒದಗಿಸಲು ಸಾಧ್ಯವಿಲ್ಲವೋ ಅಂತವರಿಗೆ ಜನನ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ,ಖಾಯಂ ವಾಸ ದೃಢೀಕರಣ ಪತ್ರ ಇತ್ಯಾದಿ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಲು ಸಾಧ್ಯವಾಗುವಂತೆ ನಿಯಮಗಳನ್ನು ಸರಳಗೊಳಿಸಿ, ಸುಲಭವಾಗಿ ಮತ್ತು ಶೀಘ್ರವಾಗಿ ರಾಜ್ಯ ಸರ್ಕಾರವೇ ಒದಗಿಸಲು ಕ್ರಮ ತೆಗೆದುಕೊಳ್ಳಬೇಕು.ದಾಖಲೆಯಿಲ್ಲ ಎಂಬ ಆತಂಕಕ್ಕೆ ಒಳಗಾಗುವ ಜನರಲ್ಲಿ ವಿಶ್ವಾಸ ತುಂಬುವ ದ್ರಷ್ಟಿಯಿಂದ ಮತದಾರರಿಗೆ ಆಗುವ ಅನಗತ್ಯ ವೆಚ್ಚ,ಸಮಯ ತಾಪತ್ರಯಗಳನ್ನು ತಪ್ಪಿಸಬೇಕು.

3.’ತಾರ್ಕಿಕ ವ್ಯತ್ಯಾಸ’ ಹೆಸರಿನಲ್ಲಿ ಪರಿಷ್ಕರಣೆಯನ್ನು ರಾಜ್ಯದಲ್ಲಿ ಅಳವಡಿಸದಂತೆ ಚುನಾವಣಾ ಆಯುಕ್ತರಿಗೆ ರಾಜ್ಯ ಸರ್ಕಾರ ಮನವಿ ನೀಡಬೇಕು.ಹೆಸರುಗಳ ಉಪನಾಮ,ಇನಿಷಿಯಲ್ ವ್ಯತ್ಯಾಸಗಳು,ವಯಸ್ಸಿನ ಅಂತರ ಕಡಿಮೆ ಅಥವಾ ಹೆಚ್ಚಿದೆಯೆಂದು, ಮತದಾರರ ಪಟ್ಟಿಯಿಂದ ಕೈ ಬಿಡದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲು ಚುನಾವಣಾ ಆಯೋಗಕ್ಕೆ ಕೋರಬೇಕು.

4.ಮತದಾರರ ಪಟ್ಟಿಯನ್ನು ಕಂಪ್ಯೂಟರ್ ಓದಬಲ್ಲ ಮಾದರಿಯಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಬೇಕು.

5.ರಾಜ್ಯ ಸರಕಾರ ತನ್ನ ಆಡಳಿತದ ಯಂತ್ರ ಬಳಸಿ ಹಾಗೂ ಬಿಎಲ್ಒ ಗಳ ಸಹಾಯದಿಂದ ಪ್ರತಿ ವಾರ್ಡ್/ಪಂಚಾಯಿತಿಗೆ ಅಗತ್ಯ ಸಂಖ್ಯೆಯ ಮತದಾರರ ಸೇವಾ ಕೇಂದ್ರಗಳನ್ನು ತೆರೆದು ಜನರಿಗೆ ಅಗತ್ಯ ನೆರವು ನೀಡಲು ಮುಂದಾಗಬೇಕು ಎಂದು ಸಿಪಿಎಂ ಮನವಿಯಲ್ಲಿ ತಿಳಿಸಿದೆ.

ನಿಯೋಗದಲ್ಲಿ ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕಾರ್ಯದರ್ಶಿ ಮಂಡಳಿ ಸದಸ್ಯ ಚಂದ್ರಶೇಖರ ವಿ, ಶಶಿಧರ ಗೊಲ್ಲ, ಕವಿರಾಜ್ ಎಸ್ ಕಾಂಚನ್, ಉಮೇಶ್ ಕುಂದರ್, ನಳಿನಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...