ಉಡುಪಿ | ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಸಹಿಸಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

ಉಡುಪಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಬೈಂದೂರು ತಾಲೂಕಿನ ಮರವಂತೆಯಲ್ಲಿ ಹೊರ ಬಂದರು, ಗಂಗೊಳ್ಳಿ ಮೀನುಗಾರಿಕೆ ಬಂದರಿನ ಮರು ನಿರ್ಮಾಣ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹಾಗೂ ಕೋಡಿ ಜೆಟ್ಟಿಯ ನ್ಯಾವಿಗೇಷನ್ ಚಾನೆಲ್‌ನಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಕೈಗೊಳ್ಳದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಂದರು ಇಲಾಖೆ ಹಾಗೂ ಸಿಆರ್ ಝ್ ನವರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಕಾಮಗಾರಿಗಳನ್ನು ತ್ವರಿತವಾಗಿ ಗುಣಮಟ್ಟದೊಂದಿಗೆ ಕೈಗೊಳ್ಳುವುದರೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು” ಎಂದು ಸೂಚನೆ ನೀಡಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಮಳೆ, ಬೆಳೆ ರಸಗೊಬ್ಬರಗಳ ದಾಸ್ತಾನುಗಳ ಬಗ್ಗೆ ಮಾತನಾಡಿದ ಅವರು, ಈ ಬಾರಿ ಭತ್ತದ ಇಳುವರಿ ಶೇಕಡ 50 ರಷ್ಟು ಕಡಿಮೆಯಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ತಾಲೂಕುವಾರು ವಿವರವನ್ನು ಸಂಗ್ರಹಿಸುವಂತೆ ಸೂಚಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬರ ನಿರ್ವಹಣೆ ಕಾರ್ಯವನ್ನು ಸಮರ್ಥವಾಗಿ ಎದುರಿಸಲು ಸೂಚನೆ

ಜಿಲ್ಲೆಯಲ್ಲಿ ವಾಡಿಕೆಗಿಂತ ಶೇಕಡ 22 ರಷ್ಟು ಕಡಿಮೆ ಮಳೆಯಾಗಿದ್ದು, ಅಂತರ ಜಲಮಟ್ಟವೂ ಶೇಕಡ 24ರಷ್ಟು ಕಡಿಮೆಯಾಗಿದ್ದು, ಮುಂಬರುವ ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿಯೇ 604 ಕಿಂಡಿ ಅಣೆಕಟ್ಟುಗಳಿದ್ದು, ಅವುಗಳಲ್ಲಿ 357 ಕಿಂಡಿ ಅಣೆಕಟ್ಟುಗಳಿಗೆ ತಡೆ ಹಲಗೆಗಳನ್ನು ಅಳವಡಿಸಲಾಗಿದೆ. ಬಾಕಿ ಉಳಿದಿರುವ 343 ಕಿಂಡಿ ಅಣೆಕಟ್ಟುಗಳಿಗೆ ತಡೆ ಹಲಗೆಗಳನ್ನು ಈ ಕೂಡಲೇ ಅಳವಡಿಸಬೇಕೆಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಜೊತೆಗೆ ಉಡುಪಿ ನಗರಕ್ಕೆ ವಾರಾಹಿಯ ಕುಡಿಯುವ ನೀರಿನ ಯೋಜನೆಯನ್ನು ಫೆಬ್ರವರಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ಉಪ್ಪು ನೀರು, ಸಿಹಿ ನೀರಿಗೆ ಬೆರೆಸುವುದನ್ನು ತಡೆಯುವ ಖಾರ್ ಲ್ಯಾಂಡ್ ನಿರ್ಮಾಣದ 11 ಕಾಮಗಾರಿ ವರದಿಗೆ ಪ್ರಾದೇಶಿಕ ನಿರ್ದೇಶಕರಿಂದ (ಪರಿಸರ) ಅನುಮೋದನೆ ಪಡೆದು ನಿಗದಿತ ಕಾಲಾವದಿಯಲ್ಲಿ ಪೂರ್ಣಗೊಳಿಸಲು ಆದೇಶಿಸಿದರು.

ಪೂರ್ಣ ಪ್ರಮಾಣದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸೂಚನೆ

ಜಿಲ್ಲೆಯಲ್ಲಿ 3.12 ಲಕ್ಷ ಕುಟುಂಬಗಳಿದ್ದು, ಈ ಪೈಕಿ 1,83,072 ಕುಟುಂಬದ ಯಜಮಾನಿಯರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಅಲ್ಲದೆ, ಜಿಲ್ಲೆಯಲ್ಲಿರುವ ಕೊರಗ ಹಾಗೂ ಮಲೆಕುಡಿಯ ಜನಾಂಗ ರವರು ಗೃಹಲಕ್ಷ್ಮಿ ಯೋಜನೆ ತಲುಪುವ ದೃಷ್ಟಿಯಿಂದ ವಿಶೇಷ ಅಭಿಯಾನ ಮಾಡಬೇಕು, ಯಾವುದೇ ಕುಟುಂಬಕ್ಕೂ ಈ ಯೋಜನೆ ಕೈತಪ್ಪದಂತೆ ನೋಡಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅಲ್ಲದೆ, ನಗರೋತ್ಥಾನ ನಾಲ್ಕನೇ ಹಂತದ ಕಾಮಗಾರಿಗಳಲ್ಲಿ, ಅನುಮೋದನೆಯಾದ 71 ಕಾಮಗಾರಿಗಳಲ್ಲಿ 32 ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಕಳೆದ ವಾರ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದಲ್ಲಿ ಸಂಭವಿಸಿದ ದೋಣಿ ಅಗ್ನಿ ದುರಂತದ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಸಭೆಯಲ್ಲಿ ಶಾಸಕರುಗಳಾದ ಯಶ್‌ಪಾಲ್ ಎ ಸುವರ್ಣ, ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಡಿಎಫ್‌ಒ ಗಣಪತಿ ಸೇರಿದಂತೆ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...