ಉಡುಪಿ | ಆ.24ರಂದು ಕೌಶಲಾಭಿವೃದ್ಧಿ–ಸ್ವಉದ್ಯೋಗ ಮಾಹಿತಿ ಕಾರ್ಯಾಗಾರ ; ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಉದ್ಘಾಟನೆ

Date:

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸ್ವಉದ್ಯೋಗ ಉತ್ತೇಜನದ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಮತ್ತು ದಲಿತ ಮಹಿಳಾ ಒಕ್ಕೂಟದ ಸಹಯೋಗದಲ್ಲಿ ಒಂದು ದಿನದ ಕೌಶಲಾಭಿವೃದ್ಧಿ ಮತ್ತು ಸ್ವಉದ್ಯೋಗ ಮಾಹಿತಿ ಕಾರ್ಯಾಗಾರ ಆಗಸ್ಟ್ 24ರಂದು ಆದಿ ಉಡುಪಿ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

- Advertisement -

ಕಾರ್ಯಾಗಾರವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. (ಐಎಎಸ್) ಉದ್ಘಾಟಿಸಲಿದ್ದು, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕಿ ವಸಂತಿ ಶಿವಾನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಅನಿತಾ ಮಡ್ಲೂರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ಯಾಗಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳ ಸಬ್ಸಿಡಿ ಸಾಲ ಯೋಜನೆಗಳು, ರಾಷ್ಟ್ರೀಕೃತ ಬ್ಯಾಂಕ್‌ಗಳ ಸ್ವಉದ್ಯೋಗ ಸಾಲ ಸೌಲಭ್ಯಗಳು, ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿವೇತನಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುತ್ತದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಶಂಕರ್ ಮಲ್ಲಾರ್, ಕಾವೇರಿ ನ್ಯಾಚುರಲ್ಸ್‌ನ ಪ್ರಮೀಳ ಬಾರ್ಕೂರು ಹಾಗೂ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ್ ಜಿ. ಮಾರ್ಗದರ್ಶನ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಹಾಗೂ ಮಾಜಿ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಗುಜ್ಜರಬೆಟ್ಟು ಉಪಸ್ಥಿತರಿರಲಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಮಹಿಳಾ ಒಕ್ಕೂಟ ಮನವಿ ಮಾಡಿದೆ.

WhatsApp Image 2026 08 20 at 10.34.33 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...