ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

Date:

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ ರಾಜ್ಯ ಸರ್ಕಾರವು ನಡೆಸಿದ ಇಂಧನ ಪರೀಕ್ಷೆಯಲ್ಲಿ ಪೆಟ್ರೋಲ್, ನಲ್ಲಿ ಮಿತಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಎಥೆನಾಲ್ ಪತ್ತೆಯಾಗಿರುವುದಾಗಿ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ವ್ಯವಹಾರಗಳ ಸಚಿವರಾದ ರಿಜ್ವಾನ್ ಅರ್ಷದ್ ಅವರು ಬಹಿರಂಗ ಪಡಿಸಿದ್ದಾರೆ, ಇದು ಕೇಂದ್ರ ಸರ್ಕಾರವು ಜನರಿಗೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ರಾಜ್ಯದ ಜನರ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಪೆಟ್ರೋಲಿನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣದ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಿ ರಾಜ್ಯದ 7 ಜಿಲ್ಲೆಗಳಿಂದ 63 ಸ್ಯಾಂಪಲ್ ಗಳನ್ನು ಪರೀಕ್ಷೆಗೆಂದು ಕೇಂದ್ರ ಸರ್ಕಾರಕ್ಕೆ ಸಂಬಂದಿಸಿದ ಸಂಸ್ಥೆಗಳಿಗೆ ಕಳುಹಿಸಿದಾಗ ಕೇಂದ್ರ ಸರ್ಕಾರವು ಪರೀಕ್ಷೆಗೆ ಸ್ಪಂದಿಸದೆ ಅಸಹಕಾರ ತೋರಿಸಿದೆ ಎಂದು ಮಾನ್ಯ ಸಚಿವರು ಹೇಳಿದ್ದಾರೆ, ಇದು ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಇರುವ ಅಸಡ್ಡೆಯನ್ನು ಸೂಚಿಸುತ್ತದೆ ಮತ್ತು ಕೇಂದ್ರ ಸರ್ಕಾರ ಎಥೆನಾಲ್ ಮೂಲಕ ಜನರಿಗೆ ಎಸಗುತ್ತಿರುವ ಮೋಸದಾಟ ಬಯಲಾಗುವ ಭಯದಿಂದ ಪರೀಕ್ಷೆ ನಡೆಸಲು ಒಪ್ಪಿಗೆ ಸೂಚಿಸದಿರುವುದನ್ನು ಸೂಚಿಸುತ್ತದೆ. ಕೇಂದ್ರ ಸರ್ಕಾರವು ಪೆಟ್ರೋಲ್, ನಲ್ಲಿ 20 ಶೇಕಡ ಎಥೆನಾಲ್ ಇದೆ ಎಂದು ಹೇಳಿತ್ತು, ಸತ್ಯಾಸತ್ಯತೆಗಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ ಪ್ರಮಾಣೀಕೃತವಾದ NABL ಸಂಸ್ಥೆಯ ಮೂಲಕ ನಡೆಸಿದ ಪರೀಕ್ಷೆಯಲ್ಲಿ 30 ಶೇಕಡಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಎಥೆನಾಲ್ ಪತ್ತೆಯಾಗಿರುತ್ತದೆ ಮತ್ತು ಇದು ವಾಹನ ಬಳಕೆದಾರರ ದೃಷ್ಟಿಯಿಂದ ಆತಂಕಕಾರಿ. ಆದರೀಗ ರಾಜ್ಯ ಸರ್ಕಾರ ನಡೆಸಿದ ಪರೀಕ್ಷೆಯ ಬಗ್ಗೆ ಕೇಂದ್ರ ಸರ್ಕಾರ ತಕರಾರು ಎತ್ತಿರುವುದು ಮತ್ತು ತೈಲ ಕಂಪನಿಗಳ ಮೂಲಕ ಸಮರ್ಥನೆಗೆ ಇಳಿದಿರುವುದು ಇದು ಕಂಪನಿಗಳ ಮೇಲೆ ಒತ್ತಡ ಬಳಸಿರುವುದಕ್ಕೆ ಸಾಕ್ಷಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

ಭಾರತದ ಪ್ರಮುಖ ಪ್ರಮುಖ ವಾಹನ ತಯಾರಿಕಾ ಕಂಪನಿಗಳನ್ನು ಪ್ರತಿನಿಧಿಸುವ ಸಂಘಟನೆಯಾದ SIAM (Society of indian automobile manufacturers) ಸಂಸ್ಥೆಯು 2026 ಜುಲೈ 28ರಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಪತ್ರ ಬರೆದು E20 ಪೆಟ್ರೋಲಿನಲ್ಲಿ ಕ್ಲೋರೈಡ್ ಮತ್ತು ಸಲ್ಪರ್ ಅಂಶ ಹೆಚ್ಚಾಗಿದ್ದು ಇದು ವಾಹನದ ಇಂಧನದ ಕಾರ್ಯಕ್ಷಮತೆಯನ್ನು ಕಡಿಮೆಗೊಳಿಸುತ್ತದೆ ಹಾಗೂ ಇದರಿಂದ ವಾಹನಗಳ ಕಾರ್ಯನಿರ್ವಹಣೆಗೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದು. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಎಥೆನಾಲ್ ಪೆಟ್ರೋಲಿನ ಮೋಸದಾಟದಿಂದಾಗಿ ಜನರ ವಾಹನಗಳು ಗುಜರಿಗೆ ಸೇರುವ ಅಪಾಯವಿದ್ದು ಕೇಂದ್ರ ಸರ್ಕಾರ ಇನ್ನಾದರೂ ತನ್ನ ಜನ ವಿರೋದಿ ನೀತಿಯನ್ನು ಕೈಬಿಟ್ಟು ಜನರ ದುಡಿಮೆಯ ದುಡ್ಡಿಗೆ ನ್ಯಾಯೋಚಿತವಾದ ಉತ್ಪನ್ನವನ್ನು ನೀಡುವಂತಾಗಬೇಕು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು: ಜಾನ್ ಆರ್. ಡಿಸಿಲ್ವ

ಇಂದು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು...

ರಾಯಚೂರು | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್‌...

ಉಡುಪಿ | ಮಣಿಪಾಲದಲ್ಲಿ ಯುವಕರ ಗುಂಪು ಘರ್ಷಣೆ ; 11 ಮಂದಿ ವಿರುದ್ಧ ಪ್ರಕರಣ ದಾಖಲು

ಈಶ್ವರನಗರದ ಎಪಿಕೋಡ್ ಸೆಂಟರ್ ಎದುರು ರಾಷ್ಟ್ರೀಯ ಹೆದ್ದಾರಿ 169(A)ರ ಪಕ್ಕದಲ್ಲಿ ಗುಂಪು...

ಉಡುಪಿ | ಮಣಿಪಾಲದಲ್ಲಿ ಪೊಲೀಸರ ಮೇಲೆಯೇ ಪಟಾಕಿ ಎಸೆದು ಬೆದರಿಕೆ: ಪ್ರಕರಣ ದಾಖಲು

ತಡರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ...