ಉಡುಪಿ ನಗರದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದ ಶಂಕರಗೌಡ ಶಿವಪ್ಪ ಆಡೂರ (26) ಅವರು ಮೇ 17ರಂದು ಸಮುದ್ರದಲ್ಲಿ ಬಿದ್ದು ನಾಪತ್ತೆಯಾಗಿದ್ದಾರೆ.
ಮೀನುಗಾರಿಕಾ ಬಲೆಯನ್ನು ಎಳೆಯುತ್ತಿದ್ದ ವೇಳೆ ಬೋಟ್ ಅಲುಗಾಡಿದ ಪರಿಣಾಮ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದಿದ್ದು, ಬಳಿಕ ಅವರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ನಾಪತ್ತೆಯಾದ ವ್ಯಕ್ತಿಯು 5 ಅಡಿ 3 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂ: 0820-2537999, ಪಿ.ಎಸ್.ಐ: 9480805447 ಅಥವಾ ವೃತ್ತ ನಿರೀಕ್ಷಕರು: 9480805430 ಅನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.





