ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ (ರಿ.) ನಡೆಸಿದ ನಿರಂತರ ಹೋರಾಟ ಹಾಗೂ ಪ್ರಯತ್ನಗಳಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಪ್ರವೀಣ ಪರ್ಕಳ ಕರಾಟೆ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪ್ರವೀಣ ಪರ್ಕಳ ಅವರು ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರೆತಿರುವುದು ತುಳುನಾಡಿನ ಜನತೆಯ ಪಾಲಿಗೆ ಮಹತ್ವದ ಬೆಳವಣಿಗೆಯಾಗಿದ್ದು, ಈ ನಿಟ್ಟಿನಲ್ಲಿ ಸಂಘಟನೆ ಕೈಗೊಂಡ ಹೋರಾಟ ಹಾಗೂ ಜನಜಾಗೃತಿ ಕಾರ್ಯಗಳನ್ನು ಪ್ರವೀಣ ಪರ್ಕಳ ಶ್ಲಾಘಿಸಿದರು.
ಸಭೆಯಲ್ಲಿ ಮುಂಬರುವ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯ ಆಯೋಜನೆ, ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳು ಹಾಗೂ ಪಂದ್ಯಾವಳಿಗೆ ಅಗತ್ಯವಿರುವ ಪ್ರಾಯೋಜಕತ್ವದ ಕುರಿತು ಸಮಾಲೋಚನೆ ನಡೆಸಲಾಯಿತು. ಕರಾವಳಿಯ ಪ್ರತಿಭಾವಂತ ಕರಾಟೆ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ಕಲ್ಪಿಸುವುದು ಹಾಗೂ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುವ ಕುರಿತು ಚರ್ಚೆ ನಡೆಯಿತು.
ತುಳು ಭಾಷೆ, ಸಂಸ್ಕೃತಿ ಹಾಗೂ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಪರಸ್ಪರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಅಭಿಪ್ರಾಯ ವಿನಿಮಯ ನಡೆಯಿತು.






