ಪಿಡಿಓ ಆತ್ಮಹತ್ಯೆ ಪ್ರಕರಣ; ಸಮಗ್ರ ತನಿಖೆ, ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ

Date:

ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯತ್‌ನ ಪಿಡಿಓ ಮುಕ್ತಂ ಹುಸೇನ ಕರಡಿಗುಡ್ಡ (46) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಡುಪಿ ಜಿಲ್ಲಾ ಘಟದ ನಿಯೋಗ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

- Advertisement -

ಮುಕ್ತಂ ಹುಸೇನ ಅವರು ಅತಿಯಾದ ಕೆಲಸದ ಒತ್ತಡ, ಹಿಂದಿನ ಪ್ರಕರಣವೊಂದರ ಮೇಲೆ ನಡೆದ ಲೋಕಾಯುಕ್ತ ತನಿಖೆ ಹಾಗೂ ಸತತವಾಗಿ ವೇತನ ಲಭ್ಯವಾಗದ ಸಮಸ್ಯೆಯಿಂದ ಮಾನಸಿಕವಾಗಿ ಬೇಸತ್ತು ಕಳೆದ ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದೇ ವೇಳೆ, ಆಯುಕ್ತಾಲಯ, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳ ಸಿಬ್ಬಂದಿಗೆ ಕಡ್ಡಾಯ ವರ್ಗಾವಣೆ, ಒತ್ತಡರಹಿತ ಕೆಲಸದ ವಾತಾವರಣ ಕಲ್ಪಿಸುವುದು, ಹಿರಿಯ ಅಧಿಕಾರಿಗಳ ಅಸಹಕಾರ ನಿಲ್ಲಿಸುವುದು, ಕ್ಷುಲ್ಲಕ ಕಾರಣಗಳಿಗೆ ಅಮಾನತು ಮಾಡುವ ಕ್ರಮವನ್ನು ತಡೆಯುವುದು, ಹಾಗೂ ಕಾಲಮಿತಿಯೊಳಗೆ ತನಿಖೆ ಪೂರ್ಣಗೊಳಿಸಿ ಅಮಾನತು ಹಿಂಪಡೆಯಬೇಕು ಎಂದು ಸಂಘ ಆಗ್ರಹಿಸಿದೆ.

ಹಾಗೂ ಮೀನಾಕ್ಷಿ ಸುಂದರಂ ಸಮಿತಿ ವರದಿಯನ್ನು ಜಾರಿಗೊಳಿಸುವುದು, ದಾಖಲೆರಹಿತ ಹಾಗೂ ವರದಿ ಆಧಾರದ ಮೇಲೆ ಬರುವ ದೂರುಗಳಿಗೆ ಇಲಾಖಾ ವಿಚಾರಣೆ ನಡೆಸುವ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಉಡುಪಿ ಜಿಲ್ಲಾಧ್ಯಕ್ಷ ದಯಾನಂದ ಬೆನ್ನೂರು, ಉಪಾಧ್ಯಕ್ಷೆ ಫರ್ಜಾನಾ, ರಾಜ್ಯ ಪರಿಷತ್ ಸದಸ್ಯ ಹರೀಶ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರಾದ ಅನಿಲ್ ಶೆಟ್ಟಿ ಮತ್ತು ರಾಘವೇಂದ್ರ ಪ್ರಭು, ಸಂಘಟನಾ ಕಾರ್ಯದರ್ಶಿ ಜಯರಾಮ ಶೆಟ್ಟಿ, ತಾಲೂಕು ಅಧ್ಯಕ್ಷರಾದ ಸುರೇಶ್ (ಉಡುಪಿ), ಪ್ರತಾಪ ಶೆಟ್ಟಿ (ಕಾರ್ಕಳ), ಬ್ರಹ್ಮಾವರ ಉಪಾಧ್ಯಕ್ಷ ಪ್ರಭಾಶಂಕರ್ ಪುರಾಣಿಕ್ ಸೇರಿದಂತೆ ಹಲವು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...