ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

Date:

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ ಗಾಂಧೀಜಿ ಈ ನೆಲದ ಆತ್ಮವಾಗಿದ್ದು, ಭಾರತದ ಹೆಮ್ಮೆಯ ಪದಕವಾಗಿದ್ದಾರೆ ಎಂದು ಲಯನ್ಸ್‌ನ ಕ್ಯಾಬಿನೆಟ್ ಸದಸ್ಯ ಲಯನ್ ಬಿ. ಬಾಲಕೃಷ್ಣ ಶೆಟ್ಟಿ ಹೇಳಿದರು.

- Advertisement -

ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್‌ಕ್ರಾಸ್ ಘಟಕ, ರೋವರ್ಸ್‌ ಮತ್ತು ರೇಂಜರ್ಸ್‌ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಾಮರಸ್ಯ ನಡಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...
1012966368

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ ಶೆಟ್ಟಿ ಎಚ್. ಮಾತನಾಡಿ, ಸಾಮರಸ್ಯದ ಬದ್ಧತೆಯೊಂದಿಗೆ ಸತ್ಯಾಗ್ರಹದ ಸಾತ್ವಿಕ ಸಾಮರ್ಥ್ಯವನ್ನು ಕಾಪಾಡಿಕೊಂಡು ದೇಶದ ಪ್ರಜಾಸತ್ತೆಯ ಉಳಿವಿಗೆ ಗಾಂಧೀಜಿಯವರ ತತ್ವಗಳು ಮಾರ್ಗದರ್ಶಕವಾಗಿವೆ ಎಂದರು. ಗಾಂಧೀಜಿ ಕೇವಲ ವ್ಯಕ್ತಿಯಾಗಿರದೆ ಒಂದು ವಿಚಾರಧಾರೆಯಾಗಿ ರೂಪುಗೊಂಡಿದ್ದು, ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಅವರ ಅನುಯಾಯಿಗಳ ಕೊಡುಗೆಯೂ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಮಹತ್ವದ್ದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಲಯನ್ ಬಾಲಕೃಷ್ಣ ಹೆಗ್ಡೆ, ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕ ರಾಮಾಂಜಿ ಉಡುಪಿ, ರೆಡ್‌ಕ್ರಾಸ್ ಸಂಚಾಲಕ ಡಾ. ರಾಧಾಕೃಷ್ಣ ನಾಯಕ್, ರೋವರ್ಸ್‌ ಹಾಗೂ ಐಕ್ಯುಎಸಿ ಸಂಚಾಲಕ ಡಾ. ಲಿತಿನ್ ಬಿ.ಎಂ., ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ನಂದೀಶ್ ಕುಮಾರ್ ಕೆ.ಸಿ. ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...