ಉಡುಪಿ | ಗೃಹಬಳಕೆ ಗ್ರಾಹಕರಿಗೆ ಅನಿಲ ವಿತರಣೆಯಲ್ಲಿ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಿ

Date:

ಉಡುಪಿ ಜಿಲ್ಲೆಯ ಗೃಹ ಬಳಕೆ ಗ್ರಾಹಕರಿಗೆ ಎಲ್ ಪಿ ಜಿ ಸಿಲಿಂಡರ್ ಗಳ ವಿತರಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಿಲಿಂಡರ್ ವಿತರಣಾ ಸಂಸ್ಥೆಯವರಿಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹ ಬಳಕೆ ಸೇರಿದಂತೆ
ಮತ್ತಿತರ ಅನಿಲ ವಿತರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇತ್ತೀಚಿನ ದಿನಗಳಲ್ಲಿ ಗೃಹ ಬಳಕೆ ಸಿಲಿಂಡರ್ ಗಳ ವಿತರಣೆ ಅದರಲ್ಲಿಯು ಏಕ ಸಿಲಿಂಡರ್ ಹೊಂದಿರುವವರಿಗೆ ವಿತರಣೆ ಯಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದೆ ಎಂದು ದೂರುಗಳು ಕೇಳಿ ಬರುತ್ತಿವೆ. ಈ ಹಿಂದೆ ಬೇಡಿಕೆಗೆ ಅನುಗುಣವಾಗಿ ಅನಿಲ ಲಭ್ಯ ವಾಗುತ್ತಿತ್ತು. ಪಶ್ಚಿಮ ಎಷ್ಯಾ ದೇಶಗಳಲ್ಲಿನ ಯುದ್ಧ ದ ಬಿಕ್ಕಟಿನ್ನಿಂದಾಗಿ ಸಮರ್ಪಕವಾಗಿ ಅನಿಲಗಳು ಆಮದು ಆಗದೆ ಇರುವ ಹಿನ್ನೆಲೆ, ಸ್ವಲ್ಪ ತೊಂದರೆಗಳು ಉಂಟಾಗಿವೆ. ಆದರೆ ಗೃಹ ಬಳಕೆ ಅನಿಲಗಳ ವಿತರಣೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ವಿತರಿಸಲು ಸರಕಾರ ಬದ್ಧವಿದೆ.ಗೃಹ ಬಳಕೆ ವಿತರಣೆಯಲ್ಲಿ ಏಕ ಸಿಲಿಂಡರ್ ಹೊಂದಿರುವ ಗ್ರಾಹಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗೆಗೆ ಹಾಗೂ ವಿತರಣಾ ಸಂಸ್ಥೆಯವರಿಗೆ ಸೂಚಿಸಿದರು.

1010261871

ವಾಣಿಜ್ಯ ಬಳಕೆಯ ಗ್ರಾಹಕರಿಗೆ ಶೇ. 20 ರಷ್ಟು ಪ್ರಮಾಣದಲ್ಲಿ ಕೊಡುವ ಉದ್ದೇಶ ಸರಕಾರ ಹೊಂದಿರುವ ಬಗ್ಗೆ ಸರಕಾರ ತಿಳಿಸಿದೆ. ವಿದ್ಯಾರ್ಥಿ ನಿಲಯಗಳಿಗೆ, ಆಸ್ಪತ್ರೆ, ಶಾಲೆ ಸೇರಿದಂತೆ ಮತ್ತಿತರ ಅತೀ ಅಗತ್ಯ ವಿರುವ ಸಂಸ್ಥೆಗಳಿಗೆ ಆದ್ಯತೆಯ ಮೇಲೆ ವಾಣಿಜ್ಯ ಸಿಲಿಂಡರ್ ಗಳ ವಿತರಣೆಯನ್ನು ಮಾಡಬೇಕು ಎಂದ ಅವರು, ಮಣಿಪಾಲ ವ್ಯಾಪ್ತಿಯಲ್ಲಿ ವಾಣಿಜ್ಯ ಸಿಲಿಂಡರ್ ನೋಂದಾಯಿತ ಗ್ರಾಹಕರಿಗೆ ನೋಂದಣಿ ಮಾಡಿಕೊಂಡ ಸಂಸ್ಥೆಗಳಿಂದ ಅನಿಲ ವಿತರಣೆ ಆಗುತ್ತಿಲ್ಲ. ಇದರಿಂದ ತೊಂದರೆ ಉಂಟಾಗುತ್ತಿದೆ. ನೋಂದಾಣಿಯನ್ನು ಇತರೆ ಸಂಸ್ಥೆಗಳಿಗೆ ವರ್ಗಾಯಿಸುವುದು ಅವಶ್ಯವಿದ್ದು, ಈ ಬಗ್ಗೆ ಅನಿಲ ಕಂಪನಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ವಿತರಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಇಲ್ಲ. ಆದರೆ ಅನಧಿಕೃತವಾಗಿ ದಾಸ್ತಾನು ಮಾಡದಂತೆ ಎಚ್ಚರ ವಹಿಸಬೇಕು. ಈಗಾಗಲೇ ಕೆಲವು ಗ್ರಾಹಕರು ಸಾಕಷ್ಟು ದಿನಗಳಿಂದ ಜನರೇಟರ್ ಗಳಿಗೆ ಹಾಗೂ ಮೀನುಗಾರಿಕಾ ಬೋಟ್ ಗಳಿಗೆ, ನಿರಂತರವಾಗಿ ಕೊಂಡೋಯುವವರಿಗೆ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಮಾತನಾಡಿ, ವಾಹನಕ್ಕೆ ಬಳಕೆ ಮಾಡುವ ಎಲ್ ಪಿ ಜಿ ಹಾಗೂ ಸಿ ಎನ್ ಜಿ ಅನಿಲಗಳನ್ನು ಆಯಿಲ್ ಕಾರ್ಪೋರೇಶನ್ ಸಂಸ್ಥೆಗಳು ನಿಗಧಿಪಡಿಸಿರುವ ದರದಲ್ಲಿಯೇ ವಿತರಿಸಬೇಕು. ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ನಿಗಧಿಪಡಿಸಿರುವ ಮೊತ್ತವನ್ನು ಹಾಗೂ ದಾಸ್ತನನ್ನು ತಮ್ಮ ವಿತರಣಾ ಕೇಂದ್ರದಲ್ಲಿ ಜನಸಾಮಾನ್ಯರಿಗೆ ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು, ಒಂದೊಮ್ಮೆ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆದಲ್ಲಿ ಅಂಥವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಬಳಕೆ ಸಿಲಿಂಡರ್ ಗಳನ್ನು ಇತರೆ ಉದ್ದೇಶಕ್ಕೆ ಬಳಸದಂತೆ ನೋಡಿಕೊಳ್ಳಬೇಕು ಒಂದೊಮ್ಮೆ ಇತರೆ ಉದ್ದೇಶಕ್ಕೆ ಬಳಸಿದಲ್ಲಿ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಏಕ ಬಳಕೆ ಸಿಲಿಂಡರ್ ಹೊಂದಿರುವ ಗ್ರಾಹಕರುಗಳು, ಸಿಲಿಂಡರ್ ಪಡೆದ 25 ದಿನಗಳ ನಂತರ ಹಾಗೂ ಎರಡು ಸಿಲಿಂಡರ್ ಹೊಂದಿರುವ ಗ್ರಾಹಕರುಗಳು ಅನಿಲ ಪೂರೈಕೆ ಮಾಡಿದ 35 ದಿನಗಳ ನಂತರ ಬುಕಿಂಗ್ ಮಾಡಲು ಅವಕಾಶವಿದೆ. ಆದಷ್ಟು ಮನೆ ಮನೆಗೆ ಗೃಹ ಬಳಕೆಯ ಸಿಲಿಂಡರ್ ವಿತರಣೆ ಮಾಡುವುದರೊಂದಿಗೆ ಏಜನ್ಸಿ ಗಳ ಮುಂದೆ ಸಾಲುಗಟ್ಟಿ ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ವಿತರಕರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್.ಪಿ ಸುಧಾಕರ್ ನಾಯಕ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ,
ಗ್ಯಾಸ್ಏಜನ್ಸಿ ಹಾಗೂ ಬಂಕುಗಳ ಮಾಲೀಕರುಗಳು, ವಿತರಕರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...