ಉಡುಪಿ‌ | ಅವಕಾಶ ವಂಚಿತ ಸಮುದಾಯಗಳು ದೇವರಾಜು ಅರಸರನ್ನು ಮರೆಯಲಾಗದು : ಮೀನಾಕ್ಷಿ ನಾಯ್ಕ

Date:

ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ತಬ್ಬಲಿ ಜಾತಿಗಳ ಸಾಮಾಜಿಕ ಮತ್ತು ಆರ್ಥಿಕ ಮುಂಚಲನೆಯನ್ನು ಸಾಧ್ಯವಾಗಿಸಿ ಕರ್ನಾಟಕವನ್ನು ಕತ್ತಲೆಯಿಂದ ಪಾರುಮಾಡಿದ ಧೀಮಂತ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಅವರನ್ನು ಈ ನಾಡಿನ ಅವಕಾಶ ವಂಚಿತ ಸಮುದಾಯಗಳೆಲ್ಲವೂ ಮರೆಯದೇ ನೆನಪಿಟ್ಟುಕೊಳ್ಳಬೇಕು ಎಂದು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥೆ ಮೀನಾಕ್ಷಿ ನಾಯ್ಕ ಅವರು ಹೇಳಿದರು.

- Advertisement -
1012297368

ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಐಕ್ಯುಎಸಿ ಅಡಿಯಲ್ಲಿ ಕನ್ನಡ, ಸಮಾಜಶಾಸ್ತ್ರ ವಿಭಾಗಗಳು ರಾ.ಸೇ.ಯೋ. ಘಟಕದ ಜೊತೆಗೆ ಆಯೋಜಿಸಿದ ದಿವಂಗತ ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಅವರು ದೇವರಾಜ ಅರಸು ತನ್ನ ಇಡೀ ಆಳ್ವಿಕೆಯನ್ನು ಸಮೂಹದ ಬುದ್ಧಿಯ ವಿಕಾಸಕ್ಕೆ ಬಳಸಿದರಲ್ಲದೆ, ಬುದ್ಧಿಯ ದ್ವೇಷಕ್ಕೆ ಬಳಸಲಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಸೌಮ್ಯಲತಾ ಪಿ., ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ ಎಂ, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಧಾಕೃಷ್ಣ ನಾಯಕ್, ರಾಷ್ಟ್ರೀಯ ಸೇವಾ ಕಾರ್ಯಕ್ರಮಾಧಿಕಾರಿ ನಂದೀಶ್‌ ಕುಮಾರ್‌ ಕೆ ಸಿ, ಆಂಗ್ಲಭಾಷಾ ವಿಭಾಗದ ನಿಶ್ಚಿತ ಎಸ್‌ ಹೋಬಳಿದಾರ್‌,‌ ರಾಜ್ಯಶಾಸ್ತ್ರ ವಿಭಾಗದ ಅಪರ್ಣ ಕೆ ಯು ಉಪಸ್ಥಿತರಿದ್ದರು. ಅಭೀಷ ಸ್ವಾಗತಿಸಿ, ಅಕ್ಷಯಾ ವಂದಿಸಿದ ಈ ಕಾರ್ಯಕ್ರಮವನ್ನು ಪ್ರಿಯಾ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುರತ್ಕಲ್ | 81 ದಿನಗಳ ಧರಣಿ ಅಂತ್ಯ: ಮಹಿಳಾ ಹೊರ‌ಗುತ್ತಿಗೆ ಕಾರ್ಮಿಕರು ಮರಳಿ ಕೆಲಸಕ್ಕೆ

ಸುರತ್ಕಲ್‌ನ HPCL ಕಂಪನಿಯಲ್ಲಿ ಉದ್ಯೋಗ‌ ಕಳೆದುಕೊಂಡ ಮಹಿಳಾ ಹೊರಗುತ್ತಿಗೆ ಕಾರ್ಮಿಕರ 81...

ವಿಜಯಪುರ |ಬೆಳಕಿನ ಹಬ್ಬದ ಸಂಭ್ರಮದೊಂದಿಗೆ ಸಂವಿಧಾನದ ಮೌಲ್ಯಗಳ ಜಾಗೃತಿ

ಬೆಳಕಿನ ಹಬ್ಬದ ಸಂಭ್ರಮದ ನಡುವೆಯೇ ಸಂವಿಧಾನದ ಆಶಯ, ಸಮಾನತೆ, ಸ್ವಾತಂತ್ರ್ಯ ಹಾಗೂ...

ವಿಜಯಪುರ |ಜಾತಿ–ಧರ್ಮದ ಭೇದ ಮರೆತು ಸೌಹಾರ್ದದ ದೀಪ ಬೆಳಗಿಸಿದ ಸರ್ವಧರ್ಮೀಯರು

ಜಾತಿ, ಧರ್ಮಗಳ ಎಲ್ಲ ಭೇದಭಾವಗಳನ್ನು ಮರೆತು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ...

ಯುವಜನತೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲಿ: ಸಂತೋಷ್ ಹೆಗ್ಡೆ

ಭ್ರಷ್ಟಾಚಾರದಿಂದ ದೂರವಿದ್ದು, ಯುವಜನತೆ ಮಾನವೀಯತೆ ಹಾಗೂ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು...