ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ 26 ನೇ ವಾರ್ಷಿಕ ಮಹಾಸಭೆ

Date:

ಸರ್ಕಾರ ಕಾರ್ಮಿಕರ ಇಎಸ್ಐ ಸಮಸ್ಯೆ ಬಗೆಹರಿಸಬೇಕು ಶಾಶ್ವತ ಪರಿಹಾರಕ್ಕೆ ಕುಂದಾಪುರದಲ್ಲಿ ಸರ್ಕಾರ ಇಎಸ್ಐ ಆಸ್ಪತ್ರೆ ಮಂಜೂರು ಮಾಡಬೇಕು, ಬ್ರಹ್ಮಾವರದಲ್ಲಿ ಮಂಜೂರಾದ ಇಎಸ್ಐ ಆಸ್ಪತ್ರೆ ಕಾಮಗಾರಿ ಶೀಘ್ರ ಆರಂಭಿಸಬೇಕು, ಪಿಎಫ್ ಪಿಂಚಣಿ ರೂ,9000/- ಕ್ಕೆ ಹೆಚ್ಚಳ ಮಾಡಬೇಕು,ಪಿಎಫ್ ಮತ್ತು ಪಿಂಚಣಿ ಹಿಂಪಡೆಯುವ ಕಾನೂನು ಬದಲಾವಣೆ ಕಾರ್ಮಿಕ ವಿರೋಧಿಯಾಗಿ ಮಾಡಿರುವುದನ್ನು ಖಂಡಿಸಿ ನಿರ್ಣಯ ಮಾಡಲಾಯಿತು.

- Advertisement -

ರಾಜ್ಯ ಸರ್ಕಾರ ಪರಿಷ್ಕರಿಸಿದ ಕನಿಷ್ಠ ಕೂಲಿ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಇಂದು ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ನಡೆದ 26 ನೇ ವಾರ್ಷಿಕ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ (ಸಿಐಟಿಯು) ಅಧ್ಯಕ್ಷರಾದ ವಿ.ನರಸಿಂಹ, ಅವರು ಕಾರ್ಮಿಕ ವರ್ಗದ ಉತ್ತಮ ಬದುಕಿಗಾಗಿ

ದಾಳಿ ದಬ್ಬಾಳಿಕೆ ಎದುರಿಸಿ ಸಂಘಟನೆ ಬೆಳೆದಿದೆ ಅಲ್ಲದೇ ಅಂತಹ ಕಾರ್ಮಿಕರ ಜೊತೆಯಲ್ಲಿ ಗ್ರಾಮಗಳ ಜನರಿಗೂ ಸಮಾಜ ಸೇವೆ ಮಾಡಲೂ ಸಾಧ್ಯವಾಗಿರುವುದು ಸಂಘದ ಇತಿಹಾಸ ಎಂದು ಹೇಳಿದರು.

ಇಂದಿಗೂ ಹಲವು ಸಮಸ್ಯೆಗಳನ್ನು ಪರಿಹರಿಸಲು ಸಂಘ ನಿರಂತರವಾಗಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿದೆ ಎಂದು ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಚ್ ನರಸಿಂಹ ವಾರ್ಷಿಕ ಕರಡು ವರದಿ ಮಂಡಿಸಿದರು, ಕೋಶಾಧಿಕಾರಿ ಪ್ರಕಾಶ್ ಕೋಣಿ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ವರದಿ, ಲೆಕ್ಕ ಪತ್ರ ಮೇಲೆ ಚರ್ಚೆ ನಡೆಸಿ ಅಂಗೀಕಾರ ಮಾಡಲಾಯಿತು.

ಮಹಾಸಭೆಯಲ್ಲಿ ಅತಿಥಿಗಳಾಗಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ, ಹಿರಿಯ ಮುಖಂಡ ಕೆ ಶಂಕರ್,ಮಹಾಬಲ ವಡೇರಹೋಬಳಿ,ಜನವಾದಿ ಮಹಿಳಾ ಸಂಘಟನೆಯ ಶೀಲಾವತಿ, ಬೀಡಿ ಕಾರ್ಮಿಕರ ಸಂಘದ ಬಲ್ಕೀಸ್ ಇದ್ದರು.

ಸಂಘದ ಪದಾಧಿಕಾರಿಗಳಾದ ಸುರೇಂದ್ರ ಎಚ್, ಚಂದ್ರ ಪೂಜಾರಿ, ಲಕ್ಷ್ಮಣ ಡಿ, ಜಿ ಡಿ ಪಂಜುಪೂಜಾರಿ ಉಪಸ್ಥಿತರಿದ್ದರು.

ಹೊಸ ಸಮಿತಿ ಆಯ್ಕೆ: ಅಧ್ಯಕ್ಷರಾಗಿ ವಿ ನರಸಿಂಹ, ಪ್ರಧಾನ ಕಾರ್ಯದರ್ಶಿ ಯಾಗಿ ಎಚ್ ನರಸಿಂಹ ಕೋಶಾಧಿಕಾರಿ ಪ್ರಕಾಶ್ ಕೋಣಿಯನ್ನು ಸೇರಿದಂತೆ ಪದಾಧಿಕಾರಿಗಳು,ಕಾರ್ಯಕಾರಿ ಸಮಿತಿಯನ್ನು ಮಹಾಸಭೆ ಆಯ್ಕೆ ಮಾಡಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...

ರಾಯಚೂರು | ದಸರಾ ವೇಳೆ ದಲಿತ ಸಚಿವರನ್ನು ತಡೆದ ಆರೋಪ: ಮೈಸೂರು ಎಸ್‌ಪಿ ವಿರುದ್ಧ ಕ್ರಮಕ್ಕೆ ಹನುಮಂತಪ್ಪ ಮನ್ನಾಪುರಿ ಆಗ್ರಹ

ಮೈಸೂರಿನ ದಸರಾ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತೆರಳುತ್ತಿದ್ದ...

ಚಿಕ್ಕಮಗಳೂರು | ಮರ ಎಳೆಯಲು ಕಟ್ಟಿದ್ದ ಹಗ್ಗದಿಂದ ಸವಾರ ಸಾವು 

ಚಿಕ್ಕಮಗಳೂರು ತಾಲೂಕಿನ ಹೊರವಲಯದ ತೇಗೂರು ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಟ್ಟಿದ್ದ ಹಗ್ಗ...