ಉಡುಪಿ‌ | ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

Date:

ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರ ಅಂದರೆ ಜೂನ್ 30 ರಿಂದ ಜುಲೈ 6 ರ ವರೆಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಯೆಂದು ಸೂಚಿಸಿರುತ್ತಾರೆ. ಈ ಹಿನ್ನಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ.

- Advertisement -

ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ, ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು ಮತ್ತು ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯಬಾರದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು. ಕಟ್ಟಡಗಳ ಮೇಲೆ ಅಪಾಯಕಾರಿ ಗೆಲ್ಲು/ರೆಂಬೆ-ಕೊಂಬೆಗಳಿದ್ದಲ್ಲಿ ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.
ಹೆಚ್ಚು ಮಳೆಯಾಗುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಭೂಕುಸಿತವಾಗುವ ಸಂಭವ ಹೆಚ್ಚಾಗಿರುತ್ತದೆ ಹಾಗಾಗಿ ಇಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಹಶೀಲ್ದಾರರ ಕಛೇರಿ ಅಥವಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿಯ ಉಳಿಯಬಹುದು.

ಮುಂದಿನ 7 ದಿನಗಳಲ್ಲಿ ಹೆಚ್ಚು ಗಾಳಿಯೊಂದಿಗೆ ಮಳೆ ಬರುವುದರಿಂದ ಸಾರ್ವಜನಿಕರು ಹೊರಗೆ ತಿರುಗಾಡದೆ ಸೂಕ್ತ ಕಟ್ಟಡದಲ್ಲಿ ವಾಸಿಸಬೇಕು. ದುರ್ಬಲ ಕಟ್ಟಡದಲ್ಲಿ ವಾಸವಿದ್ದಲ್ಲಿ ಅಥವಾ ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು.

ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ತುರ್ತು ಸೇವೆಗೆ ಶುಲ್ಕ ರಹಿತ 1077 ಅಥವಾ ದೂ.ಸಂಖ್ಯೆ: 0820-2574802 ಅಥವಾ ಆಯಾ ತಾಲೂಕು ತಹಶೀಲ್ದಾರರ ಕಛೇರಿಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201, ಕಾಪು ದೂ.ಸಂಖ್ಯೆ: 0820-2551444, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಬೈಂದೂರು ದೂ.ಸಂಖ್ಯೆ: 08254-251657 ಹಾಗೂ ಹೆಬ್ರಿ ದೂ.ಸಂಖ್ಯೆ: 08253-250201 ಮತ್ತು ಉಡುಪಿ ನಗರಸಭೆ ಸಹಾಯವಾಣಿ ಸಂಖ್ಯೆ: 0820-2520306 ಗೆ ಕರೆಮಾಡಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...