ಉಡುಪಿ | ಹೆಬ್ರಿಯಲ್ಲಿ ₹60 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು, ಪ್ರಕರಣ ದಾಖಲು

Date:

ಉಡುಪಿ ಜಿಲ್ಲೆಯ ಹೆಬ್ರಿ ಗ್ರಾಮದ ಕೀರ್ತನ ಪ್ರಭು (34) ಎಂಬವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು ₹59.97 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ.

- Advertisement -

ಕೀರ್ತನ ಪ್ರಭು ಅವರು ಬೆಳಿಗ್ಗೆ 6:45 ಗಂಟೆಗೆ ಎದ್ದು ನೋಡಿದಾಗ ಮನೆಯ ಹಿಂಭಾಗ ಹಾಗೂ ಎದುರಿನ ಬಾಗಿಲುಗಳು ತೆರೆದಿರುವುದು ಗಮನಕ್ಕೆ ಬಂದಿದೆ. ಹಾಲ್ ಬಳಿ ಇದ್ದ ಗೋದ್ರೇಜ್ ಬಾಗಿಲು ಕೂಡ ತೆರೆಯಲ್ಪಟ್ಟಿದ್ದು, ಅನುಮಾನಗೊಂಡ ಅವರು ಮನೆಯ ಮೊದಲ ಮಹಡಿಯ ಮಲಗುವ ಕೋಣೆಗೆ ತೆರಳಿ ಪರಿಶೀಲಿಸಿದಾಗ ಕಬ್ಬಿಣದ ಗೋದ್ರೇಜ್ ಲಾಕರ್ ತೆರೆಯಲ್ಪಟ್ಟಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕಳ್ಳರು ಮನೆಯ ಹಿಂಭಾಗದ ಕಿಟಕಿಯ ಚಿಲಕದ ಕೊಂಡಿಯನ್ನು ಮೀಟಿ ಒಳನುಗ್ಗಿ, ಮೊದಲ ಮಹಡಿಯಲ್ಲಿ ಇರಿಸಿದ್ದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಹೆಬ್ರಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 25/2026ರಂತೆ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 331(4), 305 ಅಡಿಯಲ್ಲಿ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...