ಹಿರಿಯಡಕ: ಸಂಜೀವಿನಿ ಒಕ್ಕೂಟದಲ್ಲಿ ₹23 ಲಕ್ಷ ವಂಚನೆ: ದಂಪತಿ ಬಂಧನ

Date:

ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾಗಿದ್ದ ಸುಗಂಧಿ ಹಾಗೂ ಅವರ ಪತಿ ಸಂತೋಷ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದರೂ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯ ನಕಲಿ ಸಹಿ ಮಾಡಿ ಬ್ಯಾಂಕ್‌ನಿಂದ ಹಣ ಪಡೆದಿರುವ ಆರೋಪವೂ ಇದೆ.

ಲೆಕ್ಕಪರಿಶೋಧನೆ ವೇಳೆ ವಂಚನೆ ಬೆಳಕಿಗೆ ಬಾರದಂತೆ ಬೇರೆ ಬೇರೆ ಸಾಲದ ಖಾತೆ ಪುಸ್ತಕಗಳನ್ನು ನಿರ್ವಹಿಸಿ ಕಾರ್ಯಕಾರಿ ಸಮಿತಿಗೆ ಅನುಮಾನ ಬಾರದ ರೀತಿಯಲ್ಲಿ ದಾಖಲೆಗಳನ್ನು ಸೃಷ್ಟಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈ ಮೂಲಕ ಒಟ್ಟು ₹23 ಲಕ್ಷವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...