ಉಡುಪಿ | ವಿವೇಕದ ಬೆಳಕಿನಲ್ಲಿ ಸ್ವಾತಂತ್ರ್ಯವನ್ನು ಕಾದುಕೊಳ್ಳೋಣ : ಡಾ. ಜಯಪ್ರಕಾಶ್ ಶೆಟ್ಟಿ

Date:

ಹಿಂಸೆ ಮತ್ತು ಅಸತ್ಯದ ವಿರುದ್ಧ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಅಹಿಂಸೆ ಹಾಗೂ ಸತ್ಯಾಗ್ರಹದ ಪರಿಣಾಮಕಾರಿ ಅಸ್ತ್ರದ ಮೂಲಕ ಸ್ವಾತಂತ್ರ್ಯವನ್ನು ಗಳಿಸಿದ ಭಾರತ, ಬಾಬಾಸಾಹೇಬ್‌ ಡಾ. ಬಿ.ಆರ್. ಅಂಬೇಡ್ಕರ್‌ ಅವರು ಕಟ್ಟಿಕೊಟ್ಟ ವಿವೇಕದ ಮಹಾದೀಪವಾದ ಸಂವಿಧಾನದ ಬೆಳಕಿನಲ್ಲಿಯೇ ಮುನ್ನಡೆಯಬೇಕು. ನಮ್ಮ ಪೂರ್ವಜರು ತ್ಯಾಗ, ಹೋರಾಟದ ಮೂಲಕ ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ನಾವು ಎಚ್ಚರಿಕೆಯಿಂದ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್. ಹೇಳಿದರು.

- Advertisement -
1012221976

ಅವರು ಕಾಲೇಜಿನಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ರಾ.ಸೇ.ಯೋ. ಯೋಜನಾಧಿಕಾರಿ ನಂದೀಶ್‌ ಕುಮಾರ್‌ ಕೆ.ಸಿ. ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಿದರು. ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...