ಹೂಡೆ | ರಸ್ತೆ, ಚರಂಡಿ ಸ್ವಚ್ಚತೆಗೆ ಗ್ರಾಮಸ್ಥರ ಸಾಮೂಹಿಕ ಶ್ರಮದಾನ

Date:

ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮ ಪಂಚಾಯತ್ ಹಾಗೂ ಗ್ರಾಮಸ್ಥರ ಸಹಯೋಗದೊಂದಿಗೆ ಇಂದು ಕೆಪ್ಪತೋಡ್‌ನಿಂದ ಇಲಾಹಿ ಮಂಜಿಲ್ ತನಕ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮವನ್ನು ಸ್ವಚ್ಚ ಹಾಗೂ ಪರಿಸರ ಸ್ನೇಹಿಯಾಗಿ ಉಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶ್ರಮದಾನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಯಂಪ್ರೇರಿತರಾಗಿ ಶ್ರಮದಾನ ಮಾಡಿದರು.

- Advertisement -

ಕಾರ್ಯಕ್ರಮದ ಅಂಗವಾಗಿ ರಸ್ತೆ ಬದಿಗಳಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸುವುದು, ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯಗಳನ್ನು ಸಂಗ್ರಹಿಸುವುದು, ಚರಂಡಿಗಳ ಸ್ವಚ್ಚತೆ ಸೇರಿದಂತೆ ವಿವಿಧ ಕಾರ್ಯಗಳನ್ನು ಕೈಗೊಳ್ಳಲಾಯಿತು. ಸ್ಥಳೀಯ ನಿವಾಸಿಗಳು, ಯುವಕರು ಹಾಗೂ ಸಮಾಜಸೇವಕರು ಕೈಜೋಡಿಸಿ ಪರಿಸರ ಜಾಗೃತಿ ಮೂಡಿಸುವ ಕೆಲಸಕ್ಕೂ ಮುಂದಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...
WhatsApp Image 2026 05 10 at 6.54.33 PM 1

ಗ್ರಾಮದ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದ್ದು, ಇಂತಹ ಕಾರ್ಯಕ್ರಮಗಳು ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ಮೂಡಿಸಲು ಸಹಕಾರಿಯಾಗುತ್ತದೆ ಎಂದು ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಹೈದರ್‌ ಅಲಿ ತಿಳಿಸಿದರು. ಮುಂದಿನ ದಿನಗಳಲ್ಲಿಯೂ ಇಂತಹ ಸ್ವಚ್ಚತಾ ಅಭಿಯಾನಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೈದರ್ ಅಲಿ, ಅಲ್ತಾಫ್ ಕೆ. ಸುಲೈಮಾನ್, ಅಲ್ತಾಫ್, ಶಫಿ ಸೌಕೂರು, ಅನ್ಸಾರ್, ಇಸ್ಮಾಯಿಲ್ , ವಾಹಿದ್ ಸುಲೈಮಾನ್, ಮುನೀರ್ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp Image 2026 05 10 at 6.54.32 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಜಮೀನು ಕಬಳಿಕೆ: ನಾಲ್ವರ ವಿರುದ್ಧ ಪ್ರಕರಣ

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2 ರಲ್ಲಿದ್ದ 6...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...