ಉಡುಪಿ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಗಳಿಗೆ ಸ್ಪಂದಿಸಲು ಹ್ಯೂಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ (HRS) ತನ್ನ ಟಾಸ್ಕ್ ಫೋರ್ಸ್ ತಂಡಗಳನ್ನು ಸಜ್ಜುಗೊಳಿಸಿದೆ. ಕರಾವಳಿ ಭಾಗಗಳಲ್ಲಿ ಭಾರೀ ಮಳೆ, ನೆರೆ ಹಾಗೂ ಇತರೆ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅಗತ್ಯ ನೆರವು ಒದಗಿಸಲು ತಂಡದ ಸದಸ್ಯರ ಸಂಪರ್ಕ ಸಂಖ್ಯೆಗಳನ್ನೂ ಪ್ರಕಟಿಸಲಾಗಿದೆ. ಉಡುಪಿ ಜಿಲ್ಲೆಗೆ ಜೂನ್ 8 ಮತ್ತು 9 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

HRS ಟಾಸ್ಕ್ ಫೋರ್ಸ್ ಸಂಪರ್ಕ ವಿವರಗಳು:
ಉಡುಪಿ:
ಮಹಮ್ಮದ್ ಶಾರೂಕ್ – 8050801021
ಹೂಡೆ:
ಅಲ್ತಾಫ್ ನಕ್ವಾ – 7411559957
ಮಲ್ಪೆ:
ಮಹಮ್ಮದ್ ಝುಬೇರ್ – 7022054111
ಕಾಪು:
ಮಹಮ್ಮದ್ ಅಲಿ – 95356 79603
ಭಾರೀ ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಅನಗತ್ಯ ಸಂಚಾರವನ್ನು ತಪ್ಪಿಸಿ, ತುರ್ತು ನೆರವಿನ ಅಗತ್ಯವಿದ್ದಲ್ಲಿ ಮೇಲ್ಕಂಡ HRS ಟಾಸ್ಕ್ ಫೋರ್ಸ್ ಸದಸ್ಯರನ್ನು ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾ ಸಂಚಲಾಕರಾದ ಎಂ ಬಿಲಾಲ್ ಮಲ್ಪೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – +919844994978







