ಉಡುಪಿ | ಅಗ್ನಿ ದುರಂತ: 14 ಅಂಗಡಿಗಳು ಭಸ್ಮ, ಅಂದಾಜು ₹2.5 ಕೋಟಿ ನಷ್ಟ, ತನಿಖೆಗೆ ಒತ್ತಾಯ

Date:

ಉಡುಪಿ ನಗರದ ಹೃದಯಭಾಗದಲ್ಲಿರುವ ಸಿಟಿ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ರವಿವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸುಮಾರು 14 ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ. ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಮುಂದುವರಿದ ಅಗ್ನಿಶಾಮಕ ದಳದ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ.

- Advertisement -
1010645538

ರಾಜಸ್ಥಾನ ಮೂಲದ ಉದ್ಯಮಿ ಭೀಮ ಅವರಿಗೆ ಸೇರಿದ ಪ್ಲಾಸ್ಟಿಕ್ ಸಾಮಗ್ರಿಗಳ ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಪಕ್ಕದ ಅಂಗಡಿಗಳಿಗೆ ವ್ಯಾಪಿಸಿದೆ. ಪ್ಲಾಸ್ಟಿಕ್ ಅಂಗಡಿ, ಮೊಬೈಲ್ ಅಂಗಡಿ ಸೇರಿದಂತೆ ಹಲವಾರು ವ್ಯಾಪಾರ ಮಳಿಗೆಗಳು ಸಂಪೂರ್ಣ ನಾಶವಾಗಿವೆ. ಘಟನೆಯಲ್ಲಿ ಸುಮಾರು ₹2.5 ಕೋಟಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...
1010645539

ಘಟನಾ ಸ್ಥಳಕ್ಕೆ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖಾ ಮಟ್ಟದಲ್ಲಿ ಪರಿಹಾರ ನೀಡಲು ಸಾಧ್ಯವಾದಷ್ಟು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.

1010645546

45 ನಿಮಿಷ ತಡ ಆರೋಪ – ತನಿಖೆಗೆ ಆಗ್ರಹ
ಘಟನೆ ಸಂಭವಿಸಿದ ಬಳಿಕ ಸುಮಾರು 45 ನಿಮಿಷಗಳವರೆಗೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸದಿರುವ ಕುರಿತು ವ್ಯಾಪಾರಸ್ಥರು ಗಂಭೀರ ಆರೋಪ ವ್ಯಕ್ತಪಡಿಸಿದ್ದಾರೆ. ನಗರದಲ್ಲೇ ಅಗ್ನಿಶಾಮಕ ಕಚೇರಿ ಇರುವುದರಿಂದ ತಡದ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು, ಈ ಕುರಿತು ಉನ್ನತ ಮಟ್ಟದ ಪಾರದರ್ಶಕ ತನಿಖೆ ನಡೆಸಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ.

1010645544 1

HRS ವತಿಯಿಂದ 7 ಬೇಡಿಕೆ
ಹ್ಯೂಮಾನಿಟೇರಿಯನ್ ರಿಲೀಫ್ ಸೊಸೈಟಿ (HRS) ಉಡುಪಿ ಜಿಲ್ಲಾ ಸಂಚಾಲಕ ಬಿಲಾಲ್ ಮಲ್ಪೆ ಅವರು ಸ್ಥಳ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ 7 ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಹಾನಿಗೊಳಗಾದ ವ್ಯಾಪಾರಸ್ಥರಿಗೆ ತಕ್ಷಣ ಪರಿಹಾರ, ಅಗ್ನಿ ಭದ್ರತಾ ಕ್ರಮಗಳ ಕಡ್ಡಾಯ ಅನುಷ್ಠಾನ, ಅಗ್ನಿಶಾಮಕ ದಳದ ಸಾಮರ್ಥ್ಯ ವೃದ್ಧಿ ಸೇರಿದಂತೆ ಹಲವಾರು ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

1010645541

ಮನವಿಯಲ್ಲಿ ಏನಿದೆ ?

  1. ಘಟನೆಯಲ್ಲಿ ನಷ್ಟ ಅನುಭವಿಸಿದ ವ್ಯಾಪಾರಸ್ಥರ ಕುರಿತು ತಕ್ಷಣ ಸಮಗ್ರ ಹಾನಿ ಸಮೀಕ್ಷೆ ನಡೆಸಿ, ತುರ್ತು ಆರ್ಥಿಕ ಪರಿಹಾರವನ್ನು ಸರ್ಕಾರದಿಂದ ಒದಗಿಸಬೇಕು.
  2. ಅಗ್ನಿ ಅನಾಹುತ ಸಂಭವಿಸಿದ ನಂತರ ಸುಮಾರು 45 ನಿಮಿಷಗಳವರೆಗೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸದಿರುವ ಕುರಿತು ವ್ಯಾಪಾರಸ್ಥರು ಗಂಭೀರ ಆರೋಪ ವ್ಯಕ್ತಪಡಿಸಿರುವುದರಿಂದ, ಈ ವಿಚಾರದಲ್ಲಿ ಪಾರದರ್ಶಕ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಬೇಕು.
  3. ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಆಡಳಿತ ವೈಫಲ್ಯ ಪತ್ತೆಯಾದಲ್ಲಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
  4. ನಗರದಲ್ಲಿನ ಎಲ್ಲಾ ವಾಣಿಜ್ಯ ಸಂಕೀರ್ಣಗಳಲ್ಲಿ ಅಗ್ನಿ ಭದ್ರತಾ ಕ್ರಮಗಳನ್ನು ಕಡ್ಡಾಯಗೊಳಿಸಿ, ಅಗ್ನಿ ನಿರೋಧಕ ಉಪಕರಣಗಳ ಸ್ಥಾಪನೆ ಹಾಗೂ ಅವುಗಳ ನಿಯಮಿತ ಪರಿಶೀಲನೆ ಖಚಿತಪಡಿಸಬೇಕು.
  5. ಅಗ್ನಿಶಾಮಕ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವ ರೀತಿಯ ಕಟ್ಟಡ ನಿರ್ಮಾಣ ಹಾಗೂ ದಾರಿಗಳ ಸಮಸ್ಯೆಗಳನ್ನು ತಕ್ಷಣ ಸರಿಪಡಿಸಿ, ಸೆಟ್‌ಬ್ಯಾಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.
  6. ವ್ಯಾಪಾರಸ್ಥರು ಮತ್ತು ಸಿಬ್ಬಂದಿಗೆ ಅಗ್ನಿ ನಿರ್ವಹಣೆಯ ಕುರಿತು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು
  7. ಅಗ್ನಿಶಾಮಕ ದಳದ ಸಾಮರ್ಥ್ಯವನ್ನು ಹೆಚ್ಚಿಸಿ, ತ್ವರಿತ ಸ್ಪಂದನೆಗಾಗಿ ಅತ್ಯಾಧುನಿಕ ಉಪಕರಣಗಳು ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಬೇಕು.
1010645540

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ದುರ್ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಅಗ್ನಿಶಾಮಕ ದಳದ ತಡದಿಂದಲೇ ನಷ್ಟ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಹಳೆಯ ಅಗ್ನಿಶಾಮಕ ವಾಹನಗಳಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸುತ್ತಿದ್ದು, ತಕ್ಷಣವೇ ಆಧುನಿಕ ವಾಹನಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ
ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲೆ ಕೂಡ ಘಟನೆಗೆ ಸಂಬಂಧಿಸಿದಂತೆ ತೀವ್ರ ಆತಂಕ ವ್ಯಕ್ತಪಡಿಸಿ, ವ್ಯಾಪಾರಸ್ಥರಿಗೆ ತಕ್ಷಣ ಪರಿಹಾರ ಒದಗಿಸುವುದರ ಜೊತೆಗೆ ಅಗ್ನಿ ಭದ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದೆ. ವಾಣಿಜ್ಯ ಸಂಕೀರ್ಣಗಳಲ್ಲಿ ಅಗ್ನಿ ನಿರೋಧಕ ಉಪಕರಣಗಳ ಕೊರತೆ ಹಾಗೂ ಅಗ್ನಿಶಾಮಕ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವಂತಹ ಪರಿಸ್ಥಿತಿಗಳ ಬಗ್ಗೆ ಗಮನ ಸೆಳೆಯಲಾಗಿದೆ.

1010645537

ಶಾಶ್ವತ ಪರಿಹಾರಕ್ಕೆ ಒತ್ತಾಯ
ನಗರದ ವಾಣಿಜ್ಯ ಸಂಕೀರ್ಣಗಳಲ್ಲಿ ಅಗ್ನಿ ಭದ್ರತಾ ಕ್ರಮಗಳನ್ನು ಕಡ್ಡಾಯಗೊಳಿಸುವುದು, ಅಗ್ನಿಶಾಮಕ ದಳದ ತ್ವರಿತ ಸ್ಪಂದನೆಗಾಗಿ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುವುದು, ವ್ಯಾಪಾರಸ್ಥರಿಗೆ ತರಬೇತಿ ನೀಡುವುದು ಸೇರಿದಂತೆ ಹಲವು ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕ ವಲಯದಿಂದ ಒತ್ತಾಯ ವ್ಯಕ್ತವಾಗಿದೆ.

ಈ ಭೀಕರ ಅಗ್ನಿ ದುರಂತವು ಉಡುಪಿ ನಗರದ ಸುರಕ್ಷತಾ ವ್ಯವಸ್ಥೆಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ತಕ್ಷಣ ಹಾಗೂ ಪರಿಣಾಮಕಾರಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...