ಉಡುಪಿ | ಇಂದ್ರಾಳಿ ರೈಲು ನಿಲ್ದಾಣದಲ್ಲಿ ₹2.26 ಕೋಟಿ ವೆಚ್ಚದ ಲಿಫ್ಟ್‌ಗೆ ಚಾಲನೆ: ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲ

Date:

ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕೊಂಕಣ ರೈಲ್ವೆ ವತಿಯಿಂದ ಸುಮಾರು ₹2.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಲಿಫ್ಟ್ ವ್ಯವಸ್ಥೆಯನ್ನು ಉಡುಪಿ–ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಉದ್ಘಾಟಿಸಿದರು.

- Advertisement -

ನಿಲ್ದಾಣದ 1 ಮತ್ತು 2ನೇ ಪ್ಲಾಟ್‌ಫಾರ್ಮ್‌ಗಳಲ್ಲಿ ಅಳವಡಿಸಲಾದ ಲಿಫ್ಟ್‌ಗಳು ವೃದ್ಧರು, ವಿಶೇಷ ಚೇತನರು, ಗರ್ಭಿಣಿಯರು ಹಾಗೂ ಅಶಕ್ತರು ಒಂದು ಪ್ಲಾಟ್‌ಫಾರ್ಮ್‌ನಿಂದ ಮತ್ತೊಂದಕ್ಕೆ ಸುಲಭವಾಗಿ ಸಂಚರಿಸಲು ನೆರವಾಗಲಿವೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಉಡುಪಿ ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದ ನಗರವಾಗಿದ್ದು, ಶಿಕ್ಷಣ, ವೈದ್ಯಕೀಯ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕಾರಣಗಳಿಗೆ ರಾಜ್ಯದ ಹೊರಭಾಗಗಳಿಂದಲೂ ಸಾವಿರಾರು ಜನರು ಆಗಮಿಸುತ್ತಾರೆ. ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ರೈಲು ಸೇವೆ ಬಳಸುತ್ತಿರುವ ಹಿನ್ನೆಲೆಯಲ್ಲಿ ಓವರ್‌ಬ್ರಿಜ್‌ಗಳಿಗೆ ಲಿಫ್ಟ್ ಅಳವಡಿಸುವ ಮೂಲಕ ಉತ್ತಮ ಸೇವೆ ಒದಗಿಸಲು ರೈಲ್ವೆ ಇಲಾಖೆ ಮುಂದಾಗಿದೆ ಎಂದು ಸಂಸದರು ತಿಳಿಸಿದರು.

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಂತೆ ಕರಾವಳಿ ಭಾಗದ ಜನಪ್ರತಿನಿಧಿಗಳು ಒತ್ತಾಯಿಸುತ್ತಿದ್ದು, ವಿಲೀನವಾದಲ್ಲಿ ಕೇಂದ್ರದಿಂದ ಹೆಚ್ಚಿನ ಅನುದಾನ ದೊರೆತು ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದೆ ಎಂದು ಅವರು ಹೇಳಿದರು.

Railway prgrm news photo 3

ವಂದೇ ಭಾರತ್ ರೈಲು ಕಾರವಾರದವರೆಗೆ ವಿಸ್ತರಣೆ ಸಾಧ್ಯತೆ

ಬೆಂಗಳೂರಿನಿಂದ ಮಂಗಳೂರು, ಉಡುಪಿ ಮಾರ್ಗವಾಗಿ ಕಾರವಾರದವರೆಗೆ ವಂದೇ ಭಾರತ್ ರೈಲು ಸಂಚರಿಸುವಂತೆ ಪ್ರಾಯೋಗಿಕ ಸರ್ವೇ ನಡೆಯುತ್ತಿದೆ. ಜೊತೆಗೆ ಬಾರ್ಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಸುಮಾರು ₹14 ಕೋಟಿ ವೆಚ್ಚದ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಎ ಸುವರ್ಣ ಅವರು, ಕಳೆದ ಎರಡು ವರ್ಷಗಳಲ್ಲಿ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಸಾಕಷ್ಟು ಬದಲಾವಣೆಗಳು ನಡೆದಿವೆ. ಪ್ರಯಾಣಿಕರ ರಾತ್ರಿ ಆಶ್ರಯಕ್ಕಾಗಿ ಈಗಾಗಲೇ ಶೆಲ್ಟರ್ ನಿರ್ಮಿಸಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಪಾರ್ಕಿಂಗ್, ಸಂಪರ್ಕ ರಸ್ತೆ, ಪರಿಸರ ಸೌಂದರ್ಯೀಕರಣ ಸೇರಿದಂತೆ ಇನ್ನಷ್ಟು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಅವರು ಒತ್ತಾಯಿಸಿದರು. ಇಂದ್ರಾಳಿ ಬಸ್‌ಸ್ಟ್ಯಾಂಡ್‌ನಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ಕಿರಿದಾಗಿರುವುದರಿಂದ ಮಾಸ್ಟರ್ ಪ್ಲಾನ್‌ಗೆ ಸೇರಿಸಿ ರಸ್ತೆ ವಿಸ್ತರಣೆ ಕೈಗೊಳ್ಳಬೇಕೆಂದರು.

ರೈಲ್ವೆ ಯಾತ್ರಿಕರ ಸಂಘದಿಂದ ಮನವಿ

ಈ ಸಂದರ್ಭದಲ್ಲಿ ರೈಲ್ವೆ ಯಾತ್ರಿಕರ ಸಂಘವು ಉಡುಪಿ ರೈಲ್ವೆ ನಿಲ್ದಾಣದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕುರಿತ ಮನವಿಯನ್ನು ಸಂಸದರಿಗೆ ಸಲ್ಲಿಸಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಡೆಪ್ಯುಟಿ ಚೀಫ್ ಇಂಜಿನಿಯರ್ ವಿಜಯ್ ಕುಮಾರ್, ಕೊಂಕಣ ರೈಲ್ವೆ ಪಿಆರ್‌ಒ ಸುಧಾ ಕೃಷ್ಣಮೂರ್ತಿ, ಕಾರವಾರ ಪ್ರಾದೇಶಿಕ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...