ಉಡುಪಿ | ಪಾದಚಾರಿಗಳು, ಮಕ್ಕಳು, ಹಿರಿಯರಿಗೆ ಆತಂಕ, ತಕ್ಷಣ ಸ್ಪೀಡ್ ಬ್ರೇಕರ್ ಅಳವಡಿಕೆಗೆ ಆಗ್ರಹ

Date:

ಉಡುಪಿ ನಗರದ ಕಿನ್ನಿಮುಲ್ಕಿಯಿಂದ ಬ್ರಹ್ಮಗಿರಿ ವೃತ್ತವನ್ನು ಸಂಪರ್ಕಿಸುವ ರಸ್ತೆ ಅಗಲೀಕರಣಗೊಂಡ ಬಳಿಕ ವಾಹನಗಳ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಈ ರಸ್ತೆ ಸಾರ್ವಜನಿಕರಿಗೆ ಅಪಾಯದ ಕೇಂದ್ರವಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ. ವಿಶೇಷವಾಗಿ ಪಾದಚಾರಿಗಳು, ಮಹಿಳೆಯರು, ಶಾಲಾ ಮಕ್ಕಳು ಹಾಗೂ ಹಿರಿಯ ನಾಗರಿಕರು ರಸ್ತೆ ದಾಟಲು ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -
1011032464

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅನೇಕ ವಾಹನ ಸವಾರರು ಇದೀಗ ಈ ರಸ್ತೆಯನ್ನು ಪರ್ಯಾಯ ಮಾರ್ಗವಾಗಿ ಬಳಸಿಕೊಳ್ಳುತ್ತಿದ್ದಾರೆ. ಇದರ ಪರಿಣಾಮವಾಗಿ ಬಸ್‌ಗಳು, ಲಾರಿಗಳು ಸೇರಿದಂತೆ ಘನ ವಾಹನಗಳ ಸಂಚಾರವೂ ಹೆಚ್ಚಾಗಿದೆ. ಕೆಲ ವಾಹನ ಸವಾರರು ಅತಿವೇಗದಲ್ಲಿ ಸಂಚರಿಸುತ್ತಿರುವುದು ಸ್ಥಳೀಯ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ರಸ್ತೆ ಜನವಸತಿ ಪ್ರದೇಶವನ್ನು ಹಾದು ಹೋಗುತ್ತಿರುವುದರಿಂದ ಪ್ರತಿದಿನ ನೂರಾರು ಮಂದಿ ಸಂಚಾರ ಮಾಡುತ್ತಾರೆ. ಬನ್ನಂಜೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ತೆರಳುವ ಸರಕಾರಿ ಬಸ್‌ಗಳೂ ಇದೇ ರಸ್ತೆಯನ್ನು ಬಳಸುತ್ತಿರುವುದರಿಂದ ವಾಹನ ಸಂಚಾರ ಇನ್ನಷ್ಟು ಹೆಚ್ಚಾಗಿದೆ. ಆದರೆ ರಸ್ತೆಯಲ್ಲಿ ಯಾವುದೇ ವೇಗ ನಿಯಂತ್ರಕಗಳು ಇಲ್ಲದ ಕಾರಣ ವಾಹನಗಳು ನಿಯಂತ್ರಣವಿಲ್ಲದೆ ವೇಗವಾಗಿ ಚಲಿಸುತ್ತಿದ್ದು, ಅಪಘಾತಗಳ ಸಾಧ್ಯತೆ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

1011032463

ಅಗ್ನಿಶಾಮಕ ದಳ ಕಚೇರಿ ಸಮೀಪದ ಮೂರು ರಸ್ತೆ ಸೇರುವ ಜಂಕ್ಷನ್, ಕಸ್ಟಮ್ಸ್ ಕಚೇರಿ ಬಳಿ ಹಾಗೂ ನಾಯರ್ ಕೆರೆ ಹಾಶಿಮಿ ಮಸೀದಿ ಸಮೀಪದ ಪ್ರದೇಶಗಳು ಅತ್ಯಂತ ಅಪಾಯಕಾರಿ ತಿರುವು ಹಾಗೂ ಜಂಕ್ಷನ್‌ಗಳಾಗಿವೆ. ಇಲ್ಲಿ ಆಗಾಗ್ಗೆ ಅಪಘಾತ ಸಂಭವಿಸುತ್ತಿದ್ದು, ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಕುರಿತು ಈದಿ‌‌ನ.ಕಾಮ್ ಜೊತೆ ಮಾತನಾಡಿದ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ, “ಅಭಿವೃದ್ಧಿಯ ಹೆಸರಿನಲ್ಲಿ ರಸ್ತೆ ಅಗಲೀಕರಣ ಮಾಡಲಾಗಿದೆ. ಆದರೆ ಸಾರ್ವಜನಿಕರ ಸುರಕ್ಷತೆಗೆ ಅಗತ್ಯವಾದ ಕ್ರಮಗಳು ಕೈಗೊಳ್ಳಲಾಗಿಲ್ಲ. ಪಾದಚಾರಿಗಳ ಜೀವಕ್ಕೆ ಬೆಲೆ ಕೊಡಬೇಕು. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸುರಕ್ಷಿತವಾಗಿ ರಸ್ತೆ ದಾಟಲು ಸಾಧ್ಯವಾಗುವಂತೆ ತಕ್ಷಣವೇ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಬೇಕು” ಎಂದು ಒತ್ತಾಯಿಸಿದರು.

ಅವರು ಮುಂದುವರೆದು, “ಅಪಘಾತ ಸಂಭವಿಸಿ ಪ್ರಾಣ ಹಾನಿಯಾದ ಬಳಿಕ ಕ್ರಮ ಕೈಗೊಳ್ಳುವುದಕ್ಕಿಂತ ಮುನ್ನೆಚ್ಚರಿಕೆ ಕ್ರಮವೇ ಮುಖ್ಯ. ಮಾನವೀಯ ನೆಲೆಯಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...