ಕಿನ್ನಿಮುಲ್ಕಿ–ಅಂಬಲಪಾಡಿ ಸರ್ವಿಸ್ ರಸ್ತೆಗೆ ಅಕ್ರಮ ಪಾರ್ಕಿಂಗ್ ಕಂಟಕ: ತೆರವಿಗೆ ಇಕ್ಬಾಲ್ ಮನ್ನಾ ಆಗ್ರಹ

Date:

ಉಡುಪಿ ನಗರದ ಕಿನ್ನಿಮುಲ್ಕಿಯಿಂದ ಅಂಬಲಪಾಡಿವರೆಗೆ ಇರುವ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ಅಸಮರ್ಪಕವಾಗಿ ನಿಲುಗಡೆ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ದೊಡ್ಡ ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಗುತ್ತಿದ್ದು, ಆಗಾಗ್ಗೆ ಸಂಚಾರ ದಟ್ಟಣೆ ನಿರ್ಮಾಣವಾಗುತ್ತಿದೆ.

- Advertisement -
1012639579

ಈ ಭಾಗದಲ್ಲಿ ಸದಾ ಭಾರೀ ವಾಹನಗಳ ಸಂಚಾರವಿದ್ದು, ಸರ್ವಿಸ್ ರಸ್ತೆಯ ಎರಡೂ ಬದಿಗಳಲ್ಲಿ ಅಡ್ಡಾದಿಡ್ಡಿಯಾಗಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದರಿಂದ ವಾಹನಗಳು ಸಿಲುಕಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಪ್ರತಿನಿತ್ಯ ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಇದಲ್ಲದೆ, ಪ್ರತಿದಿನ ನಡೆಯುವ ಮೀನು ಮಾರುಕಟ್ಟೆಯ ಪ್ರವೇಶ ದ್ವಾರದ ಬಳಿಯೂ ದ್ವಿಚಕ್ರ ವಾಹನಗಳನ್ನು ಅಸಮರ್ಪಕವಾಗಿ ನಿಲುಗಡೆ ಮಾಡುತ್ತಿರುವುದರಿಂದ ಪ್ರವೇಶ ಮಾರ್ಗವೇ ಬಹುತೇಕ ಬಂದ್ ಆಗುತ್ತಿದೆ. ಇದರಿಂದ ಮಾರುಕಟ್ಟೆಗೆ ಆಗಮಿಸುವ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಮತ್ತಷ್ಟು ಅನಾನುಕೂಲ ಉಂಟಾಗುತ್ತಿದೆ.

1012634601

ಈ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಂ. ಇಕ್ಬಾಲ್ ಮನ್ನಾ ಅವರು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು, ಕಿನ್ನಿಮುಲ್ಕಿ–ಅಂಬಲಪಾಡಿ ಸರ್ವಿಸ್ ರಸ್ತೆಯಲ್ಲಿ ಅನಧಿಕೃತ ಹಾಗೂ ಅಸಮರ್ಪಕವಾಗಿ ನಿಲುಗಡೆ ಮಾಡಿರುವ ದ್ವಿಚಕ್ರ ವಾಹನಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ಸರ್ವಿಸ್ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರ ಅನಾನುಕೂಲ ನಿವಾರಣೆಗೆ ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...