ಉಡುಪಿ | ಸಮಾಜದಲ್ಲಿ ಮೌಲ್ಯಗಳ ಮರುಸ್ಥಾಪನೆಗೆ ಪ್ರವಾದಿ ಬೋಧನೆ ಅಗತ್ಯ : ಮುಹಮ್ಮದ್ ಕುಂಞ

Date:

ಪ್ರವಾದಿ ಮುಹಮ್ಮದ್ (ಸ) ಅವರು ಸಮಗ್ರ ಜೀವನದ ಮಾರ್ಗದರ್ಶಿಯಾಗಿದ್ದು, ಮನುಷ್ಯರು ಜೀವನದ ಪ್ರತಿಯೊಂದು ರಂಗದಲ್ಲೂ ಸಮರ್ಥವಾಗಿ ಬದುಕಲು ಅಗತ್ಯವಾದ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಹೇಳಿದರು.

- Advertisement -

ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ವತಿಯಿಂದ ಸಾಲಿಹಾತ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’ ವಿಚಾರ ಸಂಕಿರಣ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್ (ಸ) ಅವರು ತಮ್ಮ ಅನುಯಾಯಿಗಳಿಗೆ ಪ್ರೀತಿ, ಸೌಹಾರ್ದತೆ ಹಾಗೂ ಮೌಲ್ಯಯುತ ಜೀವನದ ಮಹತ್ವವನ್ನು ಬೋಧಿಸಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರವಾದಿಯವರ ಚಿಂತನೆಗಳ ಮೂಲಕ ಮದೀನಾವನ್ನು ಬಲಿಷ್ಠ ಸಮಾಜವಾಗಿ ರೂಪಿಸಲಾಗಿತ್ತು. ಮದ್ಯಪಾನ, ಅಪರಾಧ ಹಾಗೂ ಬಡ್ಡಿ ವ್ಯವಸ್ಥೆಯಿಂದ ಮುಕ್ತವಾದ ಸಮಾಜ ನಿರ್ಮಾಣಕ್ಕೆ ಅವರು ದಾರಿ ತೋರಿಸಿದ್ದರು. ಇಂದು ಸಮಾಜದಲ್ಲಿ ದ್ವೇಷ, ಹಗೆತನ ಹಾಗೂ ವಿಭಜನೆಯ ವಾತಾವರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ (ಸ) ಅವರ ವಿಚಾರಗಳನ್ನು ಅರಿತು, ಅವರು ಬೋಧಿಸಿದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯ ಹೆಚ್ಚಾಗಿದೆ ಎಂದು ಹೇಳಿದರು.

‘ಪೋಸ್ಟ್ ಟ್ರೂತ್’ ಎಂಬ ಕಲ್ಪನೆಯ ಮೂಲಕ ಸುಳ್ಳನ್ನು ಸತ್ಯವೆಂಬಂತೆ ಬಿಂಬಿಸುವ ಹಾಗೂ ಅಪಪ್ರಚಾರವನ್ನು ವ್ಯಾಪಕಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ವಾಸ್ತವಿಕ ವಿಚಾರಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಧೈರ್ಯದಿಂದ ಸತ್ಯವನ್ನು ಮಾತನಾಡುವವರಾಗಬೇಕು ಎಂದು ಮುಹಮ್ಮದ್ ಕುಂಞ ಕರೆ ನೀಡಿದರು.

ಸಮಾಜದಲ್ಲಿ ಮೌಲ್ಯಗಳು ದುರ್ಬಲವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ತಂದೆಯ ಅಂತ್ಯಸಂಸ್ಕಾರಕ್ಕೂ ಹಾಜರಾಗದೆ ಆನ್‌ಲೈನ್ ಮೂಲಕ ವೀಕ್ಷಿಸುವಂತಹ ಅಮಾನವೀಯ ಘಟನೆಗಳು ನಡೆಯುತ್ತಿರುವುದು ನಿಜಕ್ಕೂ ಆಘಾತಕಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಸಮಾಜದಲ್ಲಿ ಮೌಲ್ಯಗಳ ಮರುಸ್ಥಾಪನೆಗಾಗಿ ಪ್ರವಾದಿ ಮುಹಮ್ಮದ್ (ಸ) ಅವರ ಬೋಧನೆಗಳನ್ನು ಅರಿತುಕೊಳ್ಳುವುದು ಅತ್ಯಗತ್ಯ ಎಂದು ಅವರು ಹೇಳಿದರು.

ರಾಜಕೀಯ ಮುಂದಾಳು ಹಾಗೂ ಸಾಮಾಜಿಕ ಮುಖಂಡ ಶಂಕರ್ ಕುಂದರ್ ಮಾತನಾಡಿ, ಸಮಾಜದಲ್ಲಿ ಪ್ರವಾದಿ ಮುಹಮ್ಮದ್ (ಸ) ಅವರ ಬೋಧನೆಗಳನ್ನು ಅರಿಯುವ ಅಗತ್ಯ ಹೆಚ್ಚಾಗಿದೆ. ಅವರು ಸಮಾಜಕ್ಕೆ ಮಾನವೀಯ ಮೌಲ್ಯಗಳನ್ನು ಬೋಧಿಸಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರೀತಿ ಹಾಗೂ ಸೌಹಾರ್ದಯುತ ಬದುಕು ನಡೆಸಬೇಕು. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸಹಬಾಳ್ವೆಯ ಜೀವನವನ್ನು ಮತ್ತಷ್ಟು ಸುದೃಢಗೊಳಿಸಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜೆರಾಲ್ಡ್ ಪಿಂಟೋ ಹಾಗೂ ಸಾಲಿಹಾತ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸುನಂದಾ ಮಾತನಾಡಿದರು.

ಮಾಸ್ಟರ್ ಅಫಾಫ್ ಕುರ್‌ಆನ್ ಪಠಣ ಮಾಡಿದರು. ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯಕರ್ತ ಜನಾಬ್ ಇದ್ರಿಸ್ ಹೂಡೆ ಪ್ರಾಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಯಾಸೀನ್ ಕೋಡಿಬೆಂಗ್ರೆ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ಅಧ್ಯಕ್ಷ ಹಸನ್ ಕೋಡಿಬೆಂಗ್ರೆ, ಎಸ್.ಐ.ಓ ಹೂಡೆ ಘಟಕಾಧ್ಯಕ್ಷ ಸಾಕೀಬ್ ಸುಲೈಮಾನ್, ಕಾರ್ಯಕ್ರಮದ ಸಂಚಾಲಕ ಅಫ್ಘಾನ್ ಬಿ. ಹೂಡೆ, ರಿಫಾ ಚೇಂಬರ್ ಆಫ್ ಕಾಮರ್ಸ್‌ನ ಶಕೀಲ್ ನೇಜಾರು, ಸಾಲಿಹಾತ್ ಶಿಕ್ಷಣ ಸಂಸ್ಥೆಯ ಖಜಾಂಚಿ ಅಬ್ದುಲ್ ಕಾದಿರ್ ಮೊಯ್ದಿನ್, ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ, ಅಬ್ದುಲ್ ರಝಾಕ್ ನಕ್ವಾ, ಸಾಲಿಡಾರಿಟಿಯ ನಿಹಾಲ್ ಕಿದಿಯೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...