ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

Date:

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ, ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಂಧ್ರಪ್ರದೇಶದ ರಾಜ್ಯಪಾಲ ಹಾಗೂ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

- Advertisement -

ಹೋರಾಟ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಹಾಗೂ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ಸಮಿತಿಯ ಸದಸ್ಯರು ರಾಜ್ಯಪಾಲರನ್ನು ಭೇಟಿಯಾಗಿ, ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಅಗತ್ಯತೆ ಹಾಗೂ ಅದರ ಮಹತ್ವದ ಕುರಿತು ಮನವರಿಕೆ ಮಾಡಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರು ನ್ಯಾಯಾಂಗ ಸಂಬಂಧಿತ ಕಾರ್ಯಗಳಿಗಾಗಿ ದೂರದ ಬೆಂಗಳೂರಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಸಮಯ ಹಾಗೂ ಹಣದ ವ್ಯಯವಾಗುವುದರ ಜತೆಗೆ, ವಿಶೇಷವಾಗಿ ಗ್ರಾಮೀಣ ಭಾಗದ ಜನರು, ಆರ್ಥಿಕವಾಗಿ ಹಿಂದುಳಿದವರು ಮತ್ತು ದೂರದ ಪ್ರದೇಶಗಳ ಕಕ್ಷಿದಾರರು ಹಲವು ರೀತಿಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ.

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದಲ್ಲಿ ಈ ಭಾಗದ ಜನರಿಗೆ ನ್ಯಾಯಾಂಗ ಸೇವೆ ಸುಲಭವಾಗಿ ದೊರೆಯಲಿದೆ. ಪ್ರಕರಣಗಳ ವಿಚಾರಣೆಗಾಗಿ ಬೆಂಗಳೂರಿಗೆ ತೆರಳುವ ಪ್ರಯಾಣದ ಹೊರೆ ಕಡಿಮೆಯಾಗುವುದರ ಜತೆಗೆ, ಸಾರ್ವಜನಿಕರಿಗೆ ನ್ಯಾಯದಾನ ಪ್ರಕ್ರಿಯೆ ಮತ್ತಷ್ಟು ಹತ್ತಿರವಾಗಲಿದೆ. ಅಲ್ಲದೆ, ಕರಾವಳಿ ಭಾಗದ ನ್ಯಾಯವಾದಿಗಳು ಹಾಗೂ ಕಕ್ಷಿದಾರರಿಗೆ ಅನುಕೂಲವಾಗಲಿದೆ ಎಂಬುದನ್ನು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಕರಾವಳಿ ಪ್ರದೇಶದ ಭೌಗೋಳಿಕ ಪರಿಸ್ಥಿತಿ, ಜನಸಂಖ್ಯೆ, ನ್ಯಾಯಾಂಗ ಸೇವೆಗಳ ಅಗತ್ಯತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕರಾವಳಿ ಹೈಕೋರ್ಟ್ ಪೀಠದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ನ್ಯಾಯಾಂಗ ಹಾಗೂ ಆಡಳಿತಾತ್ಮಕ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡು, ಅತಿ ಶೀಘ್ರದಲ್ಲಿ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಿಸಬೇಕೆಂದು ಸಮಿತಿ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಟ್ಟಿ ಚಿನ್ನದ ಗಣಿಯಲ್ಲಿ ಕಾರ್ಮಿಕ ಸಾವು; ಕುಟುಂಬಕ್ಕೆ ಉದ್ಯೋಗಕ್ಕಾಗಿ ಪ್ರತಿಭಟನೆ

ಲಿಂಗಸುಗೂರು ತಾಲೂಕು ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುವಾಗ ಕಾರ್ಮಿಕ ಸುಮನ್...

ಸಿಂಧನೂರು | ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಶಾಸಕ ಹಂಪನಗೌಡ ಬಾದರ್ಲಿ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ನೂತನ ಅಧ್ಯಕ್ಷರಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರದ...

ಬಾಗಲಕೋಟೆ | ಗ್ರಾಮೀಣ ಅಭಿವೃದ್ಧಿಗೆ ಮನೆ ಮನೆಗೆ ಜಾಗೃತಿ : ಯೋಜನೆಗಳ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಮುರನಾಳ...

ಮಂಗಳೂರು | ಕ್ಯಾನ್ಸರ್ ಅಪಾಯದ ಮುನ್ಸೂಚನೆಗೆ ಎಂ.ಐ.ಒ.ನಿಂದ ಡಿಜಿಟಲ್ ಆ್ಯಪ್ ಬಿಡುಗಡೆ

ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರಂಭಿಕ ಹಂತದಲ್ಲೇ ಅಪಾಯದ ಅಂಶಗಳನ್ನು...