ಉಡುಪಿ | ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

Date:

ಉಡುಪಿ ಜಿಲ್ಲೆಯ ಕರಾವಳಿ, ಪ್ರಕೃತಿ ಹಾಗೂ ಜಲ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಜಿಲ್ಲೆಯ ಇತರೆ ಪ್ರವಾಸಿ ತಾಣಗಳನ್ನೂ ಅಭಿವೃದ್ಧಿಪಡಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ರಾಮ್‌ ಪ್ರಸಾತ್‌ ಮನೋಹರ್‌, ಐಎಎಸ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಪ್ರವಾಸೋದ್ಯಮ ಸಚಿವರಾದ ಶ್ರೀ ಕೆ.ಜೆ. ಜಾರ್ಜ್‌ ಅವರ ನಿರ್ದೇಶನದಂತೆ ಇಂದು ಅಧಿಕಾರಿಗಳ ತಂಡದೊಂದಿಗೆ ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಪ್ರವಾಸಿಗರು ಜಿಲ್ಲೆಯಲ್ಲಿ ಹೆಚ್ಚಿನ ದಿನಗಳ ಕಾಲ ತಂಗುವಂತೆ ಹೊಸ ಪ್ರವಾಸಿ ಆಕರ್ಷಣೆಗಳು ಮತ್ತು ಪೂರಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುವ ಲಕ್ಷಾಂತರ ಭಕ್ತರು ಹಾಗೂ ಪ್ರವಾಸಿಗರನ್ನು ಜಿಲ್ಲೆಯ ಕರಾವಳಿ ಮತ್ತು ನೈಸರ್ಗಿಕ ತಾಣಗಳತ್ತ ಸೆಳೆಯುವ ರೀತಿಯಲ್ಲಿ ಯೋಜನೆ ರೂಪಿಸುವಂತೆ ಸೂಚಿಸಿದರು.

WhatsApp Image 2026 08 27 at 9.33.50 PM

ತ್ರಾಸಿ–ಮರವಂತೆ ಅಭಿವೃದ್ಧಿಗೆ ವೇಗ

ತ್ರಾಸಿ–ಮರವಂತೆ ಬೀಚ್‌ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಕಾರ್ಯದರ್ಶಿಗಳು, ಕಾಮಗಾರಿಗಳಿಗೆ ವೇಗ ನೀಡಿ ಮುಂದಿನ 2–3 ತಿಂಗಳಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಸೂಚಿಸಿದರು. ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆಯಾಗದಂತೆ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ಸೋಮೇಶ್ವರ ಬೀಚ್‌ ಮತ್ತು ಕೋಡಿ ಹಿನ್ನೀರು

ಸೋಮೇಶ್ವರ ಬೀಚ್‌ನಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಪೂರಕ ಮೂಲಸೌಕರ್ಯ ಅಭಿವೃದ್ಧಿಪಡಿಸಿ, ತಾಣವನ್ನು ಮತ್ತಷ್ಟು ಆಕರ್ಷಕಗೊಳಿಸುವ ಕುರಿತು ಪರಿಶೀಲಿಸಲಾಯಿತು.

ಕುಂದಾಪುರದ ಕೋಡಿ ಹಿನ್ನೀರು ಪ್ರದೇಶದಲ್ಲಿ ಪರಿಸರ ಸ್ನೇಹಿ ಹೌಸ್‌ಬೋಟ್‌ ಹಾಗೂ ಜಲ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ಈ ಪ್ರದೇಶದ ಪ್ರವಾಸೋದ್ಯಮ ಸಾಮರ್ಥ್ಯ ಬಳಸಿಕೊಳ್ಳುವಂತೆ ಸೂಚಿಸಲಾಯಿತು.

WhatsApp Image 2026 08 26 at 10.13.35 PM 2

ಸ್ಥಳೀಯ ಆರ್ಥಿಕತೆಗೆ ಪ್ರವಾಸೋದ್ಯಮದ ಬಲ

ಪ್ರವಾಸಿಗರ ವಾಸ್ತವ್ಯ ಅವಧಿ ಹೆಚ್ಚಿಸುವ ಮೂಲಕ ಹೋಟೆಲ್‌, ಸಾರಿಗೆ, ಆಹಾರ, ಪ್ರವಾಸಿ ಸೇವೆಗಳು ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಿ, ಸ್ಥಳೀಯ ಯುವಕರಿಗೆ ಉದ್ಯೋಗ ಮತ್ತು ಉದ್ಯಮಾವಕಾಶಗಳನ್ನು ಸೃಷ್ಟಿಸುವುದು ಇಲಾಖೆಯ ಪ್ರಮುಖ ಉದ್ದೇಶವಾಗಿದೆ.

ಉಡುಪಿ ಜಿಲ್ಲೆಯ ಸ್ಥಳೀಯ ಕಲೆ, ಸಂಸ್ಕೃತಿ, ಆಹಾರ ಮತ್ತು ಕರಾವಳಿಯ ವಿಶಿಷ್ಟ ಜೀವನಶೈಲಿಯನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸುವ ಮೂಲಕ ಪ್ರವಾಸಿಗರಿಗೆ ಸಮಗ್ರ ಅನುಭವ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

“ಉಡುಪಿ ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಅಪಾರ ಕರಾವಳಿ ಮತ್ತು ನೈಸರ್ಗಿಕ ಪ್ರವಾಸೋದ್ಯಮ ಸಾಮರ್ಥ್ಯ ಹೊಂದಿದೆ. ಪ್ರವಾಸಿಗರು ಧಾರ್ಮಿಕ ಕ್ಷೇತ್ರಗಳ ದರ್ಶನದ ಬಳಿಕ ಜಿಲ್ಲೆಯ ಇತರೆ ತಾಣಗಳಿಗೂ ಭೇಟಿ ನೀಡಿ ಹೆಚ್ಚಿನ ದಿನಗಳ ಕಾಲ ತಂಗುವಂತಹ ವ್ಯವಸ್ಥೆ ರೂಪಿಸಬೇಕು. ಇದರಿಂದ ಪ್ರವಾಸೋದ್ಯಮದ ಜತೆಗೆ ಸ್ಥಳೀಯ ಉದ್ಯೋಗ ಮತ್ತು ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ.”

  • ಶ್ರೀ ಕೆ.ಜೆ. ಜಾರ್ಜ್‌ ಮಾನ್ಯ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರು
WhatsApp Image 2026 08 27 at 9.33.52 PM

“ಕರ್ನಾಟಕ ಸರ್ಕಾರವು ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನು ಇಡುತ್ತಿದೆ. ಕರಾವಳಿಯ ಕಡಲತೀರಗಳು, ಹಿನ್ನೀರು ಹಾಗೂ ನೈಸರ್ಗಿಕ ತಾಣಗಳ ಅಭಿವೃದ್ಧಿಯ ಜತೆಗೆ, ಮಲೆನಾಡಿನ ವಿಶಿಷ್ಟ ಪ್ರವಾಸಿ ಆಕರ್ಷಣೆಗಳನ್ನೂ ಪರಿಣಾಮಕಾರಿಯಾಗಿ ಪರಿಚಯಿಸುವ ಮೂಲಕ ಪ್ರವಾಸಿಗರ ವಾಸ್ತವ್ಯ ಅವಧಿಯನ್ನು ಹೆಚ್ಚಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ.

  • ರಿಜ್ವಾನ್ ಆರ್ಷದ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು

ತಂಡದಲ್ಲಿ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ (ಕರಾವಳಿ ಪ್ರವಾಸೋದ್ಯಮ) ಸೌಮ್ಯ ಬಾಪಟ್‌, ಉಡುಪಿ ಸಹಾಯಕ ನಿರ್ದೇಶಕಿ ವಿದ್ಯಾವತಿ, IPE Global ತಂಡದ PMU ಪ್ರತಿನಿಧಿ ಹೇಮಲತಾ ಹಾಗೂ DTC ಮತ್ತು KTILನ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...