ಉಡುಪಿ | ಭಾರತ್ ಜೋಡೋ ಯುವ ಸಂಘ ಸದಸ್ಯ ಅಭಿಯಾನ ಯಶಸ್ಸಿಗೊಳಿಸುವಂತೆ ಕಾಂಗ್ರೆಸ್ ಕರೆ

Date:

ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾರತ್ ಜೋಡೋ ಯುವ ಸಂಘದ ನೋಂದಾವಣೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಕುರಿತು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಸ್ತುವಾರಿಗಳ ಸಭೆ ನಡೆಯಿತು ಈ ಸಬೆಯಲ್ಲಿ ಭಾರತ್ ಜೋಡೋ ಸದಸ್ಯ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಲಾಯಿತು.

- Advertisement -

ಸಭೆಯಲ್ಲಿ ಭಾರತ್ ಜೋಡೋ ಯುವ ಸಂಘದ ನೋಂದಾವಣೆ ಪ್ರಕ್ರಿಯೆ, ಅದರ ಉದ್ದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಯೊಂದಿಗೆ ಸಂಪರ್ಕಿಸುವ ಕುರಿತು ವಿವರವಾದ ಮಾಹಿತಿ ನೀಡಿದರು. ಯುವ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಉದ್ಯೋಗ ಹಾಗೂ ಸಾರ್ವಜನಿಕ ವಿಚಾರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎನ್ನುವುದು ರಾಹುಲ್ ಗಾಂಧಿಯವರ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕನಸಾಗಿದ್ದು ಈ ನಿಟ್ಟಿನಲ್ಲಿ ಅವರ ಆಶಯದಂತೆ ರಾಜ್ಯ ಕಾಂಗ್ರೆಸ್ ಸರ್ಕಾರವು ಭಾರತ್ ಜೋಡೋ ಯುವ ಸಂಘಗಳನ್ನು ಪ್ರತಿ ಗ್ರಾಮದಲ್ಲಿಯೂ ಸ್ಥಾಪಿಸುವ ಗುರಿಯನ್ನು ಹೊಂದಿದೆ. ಪ್ರತಿ ಗ್ರಾಮಗಳ ಯುವ ಸಂಘಗಳಿಗೆ ರಾಜ್ಯ ಸರ್ಕಾರವು 10 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡುವ ನಿರ್ಧಾರವನ್ನು ಕೈಗೊಂಡಿದೆ, ಈ ಹಿನ್ನೆಲೆಯಲ್ಲಿ ಯುವ ಸಮುದಾಯವನ್ನು ಈ ಸಂಘಟನೆಯಲ್ಲಿ ಜೋಡಿಸಲು ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬ್ಲಾಕ್ ಅಧ್ಯಕ್ಷ ಶುಭದ ರಾವ್ ಮಾತನಾಡಿ ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆಯ ಪಾತ್ರದ ಕುರಿತು ವಿಸ್ತ್ರತ ಮಾಹಿತಿ ನೀಡಿ ಗ್ರಾಮೀಣ ಭಾಗದ ಪ್ರತಿಯೊಂದು ಪಂಚಾಯತ್ ಹಾಗೂ ಬೂತ್ ಮಟ್ಟದಲ್ಲಿ ಯುವಕರನ್ನು ತಲುಪಿ, ಅರ್ಹ ಯುವಕರನ್ನು ಭಾರತ್ ಜೋಡೋ ಯುವ ಸಂಘದೊಂದಿಗೆ ನೋಂದಾಯಿಸಿಕೊಳ್ಳುವಂತೆ ಮಾಡುವ ಕುರಿತು ಉಸ್ತುವಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.

ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಅವರು ಮಾತನಾಡಿ ಗ್ಯಾರಂಟಿ ಯೋಜನೆಯಂತೆ ಯುವ ಸಂಘವು ಕೂಡ ಜನೋಪಯೋಗಿಯಾಗಿದ್ದು ಗ್ರಾಮೀಣ ಭಾಗದಲ್ಲಿ ನೋಂದಾವಣೆ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಿ, ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಸಂಘಟನೆಯೊಂದಿಗೆ ಜೋಡಿಸುವಂತೆ ವಿನಂತಿ ಮಾಡಿದರು. ಬ್ಲಾಕ್ ಅಲ್ಪ ಸಂಖ್ಯಾತ ಅಧ್ಯಕ್ಷ ಶೇಕ್ ಶಬೀರ್ ಮಿಯಾರು ತಮ್ಮ ಮಾತುಗಳಲ್ಲಿ ಯುವ ಸಂಘದ ದ್ಯೇಯೋದ್ದೇಶಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು, ಉಸ್ತುವಾರಿಗಳು ಹಾಗೂ ಪಕ್ಷದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಭಾರತ್ ಜೋಡೋ ಪ್ರಚಾರ ಸ್ಟಿಕರನ್ನು ಬಿಡುಗಡೆಗೊಳಿಸುವ ಮೂಲಕ ಭಾರತ್ ಜೋಡೋ ಯುವ ಸಂಘದ ನೋಂದಾವಣೆ ಕಾರ್ಯಕ್ಕೆ ಮತ್ತಷ್ಟು ವೇಗ ನೀಡುವ ಹಾಗೂ ಕಾರ್ಕಳ ಕ್ಷೇತ್ರದ ಯುವ ಸಮುದಾಯವನ್ನು ಸಂಘಟನೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜೋಡಿಸುವ ಸಂಕಲ್ಪವನ್ನು ಮಾಡಲಾಯಿತು.
ಈ‌ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಅನಿಲ್ ಪೂಜಾರಿ ಮಾಳ, ಕೃಷಿ ಘಟಕದ ರಾಜ್ಯ ಕಾರ್ಯದರ್ಶಿ ಉದಯ್ ಶೆಟ್ಟಿ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಅನಿತಾ ಡಿ’ಸೋಜಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶೇಖ್ ಶಬ್ಬೀರ್, ಅನಿಲ್ ನೆಲ್ಲಿಗುಡ್ಡೆ, ಸುಬಿತ್ ಎನ್ ಆರ್, ಪ್ರತಿಮಾ ರಾಣೆ, ಸೂರಜ್ ನಕ್ರೆ, ಗ್ರಾಮೀಣ ಅಧ್ಯಕ್ಷರು, ವಲಯ ಉಸ್ತುವಾರಿಗಳು, ಪಧಾದಿಕಾರಿಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...