ಉಡುಪಿ‌ | ಶಾಸಕ ಸುನೀಲ್ ಕುಮಾರ್ ಅವರ ತಲೆ ಕತ್ತರಿಸಿದ ಚಿತ್ರ ಪೋಸ್ಟ್; ಆರೋಪಿ ಪ್ರಸಾದ್ ಶೆಟ್ಟಿ ವಿಚಾರಣೆ

Date:

ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಅವರ ತಲೆ ಕತ್ತರಿಸಿರುವ ರೀತಿಯ ಚಿತ್ರವನ್ನು ಬಳಸಿ, ಪ್ರಚೋದನಕಾರಿ ಹಾಗೂ ಅವಾಚ್ಯ ಶಬ್ದಗಳನ್ನು ಒಳಗೊಂಡ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇರೆಗೆ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

- Advertisement -

ಕಾರ್ಕಳ ತಾಲೂಕಿನ ವಿಘೇಶ್ ಪ್ರಸಾದ್ ರಾವ್ ಅವರು ಸೆ.12ರಂದು ರಾತ್ರಿ 10 ಗಂಟೆ ಸುಮಾರಿಗೆ ಫೇಸ್‌ಬುಕ್ ವೀಕ್ಷಿಸುತ್ತಿದ್ದ ವೇಳೆ ‘Prasad Shetty’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಶಾಸಕ ಸುನೀಲ್ ಕುಮಾರ್ ಅವರ ಚಿತ್ರವನ್ನು ತಲೆ ಕತ್ತರಿಸಿರುವ ರೀತಿಯಲ್ಲಿ ಎಡಿಟ್ ಮಾಡಿ ವಿಡಿಯೋ ರೂಪದಲ್ಲಿ ಪೋಸ್ಟ್ ಮಾಡಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ವಿಡಿಯೋದಲ್ಲಿ ಶಾಸಕರ ಚಿತ್ರವನ್ನು ಬಳಸಿಕೊಂಡು ಅವಾಚ್ಯ ಶಬ್ದಗಳನ್ನು ಒಳಗೊಂಡ ಧ್ವನಿ ಹಾಗೂ ‘ಹೊಡಿ ಮಗ ಹೊಡಿ ಮಗ’ ಎಂಬ ಸಿನಿಮಾದ ಹಾಡನ್ನು ಹಿನ್ನೆಲೆ ಧ್ವನಿಯಾಗಿ ಅಳವಡಿಸಲಾಗಿತ್ತು ಎನ್ನಲಾಗಿದೆ. ಜನರಿಂದ ಆಯ್ಕೆಯಾದ ಶಾಸಕರನ್ನು ಕೊಲೆ ಮಾಡಬೇಕು ಹಾಗೂ ಹಲ್ಲೆ ನಡೆಸಬೇಕು ಎಂಬ ರೀತಿಯಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವ ಉದ್ದೇಶದಿಂದ ವಿಡಿಯೋವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇಂತಹ ಪ್ರಚೋದನಕಾರಿ ಪೋಸ್ಟ್‌ನಿಂದ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿಘೇಶ್ ಪ್ರಸಾದ್ ರಾವ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 74/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 192, 351(3), 353(1)(c) ಸೇರಿದಂತೆ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿತ ಪ್ರಸಾದ್ ಶೆಟ್ಟಿಯವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...