ಕಾರ್ಕಳದಲ್ಲಿ ಭೂಕುಸಿತ ಆತಂಕ: ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ, ಕುಟುಂಬ ಸ್ಥಳಾಂತರಕ್ಕೆ ಸೂಚನೆ

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಾದ್ಯಂತ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಕೆಲವೆಡೆ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ. ರೇಂಜಾಳ ಗ್ರಾಮದ ಹೆಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಅವರ ಮನೆಯ ಸಮೀಪ ಭೂಕುಸಿತ ಸಂಭವಿಸಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹಾಗೂ ತಹಶೀಲ್ದಾರ್ ಪ್ರದೀಪ್ ಆರ್ ಅವರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಭೂಕುಸಿತದಿಂದ ಮತ್ತಷ್ಟು ಅಪಾಯ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸಂತ್ರಸ್ತ ಕುಟುಂಬವನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸಿಸಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ, ಭೂಕುಸಿತದ ಕಾರಣ ಹಾಗೂ ಮುಂದಿನ ಅಪಾಯದ ಸಾಧ್ಯತೆಗಳ ಕುರಿತು ಅಧ್ಯಯನ ನಡೆಸಲು ಬುಧವಾರ ಭೂ ವಿಜ್ಞಾನಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ತಿಳಿದುಬಂದಿದೆ. ಜಿಲ್ಲಾಡಳಿತ ಸಾರ್ವಜನಿಕರು ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳು ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...