ಉಡುಪಿ | ಪರಶುರಾಮ ಪ್ರತಿಮೆ ವಿವಾದಕ್ಕೆ ತೆರೆ ಎಳೆಯಲು ಸರಕಾರದ ಹೆಜ್ಜೆ: ಹೊಸ ಟೆಂಡರ್‌ಗೆ ನಿರ್ಧಾರ

Date:

ಕಾರ್ಕಳ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿ ಹಾಗೂ ಪರಶುರಾಮನ ಪ್ರತಿಮೆ ಪುನರ್ ನಿರ್ಮಾಣಕ್ಕೆ ರಾಜ್ಯ ಸರಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಸಂಬಂಧ ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ವಿಶೇಷ ಸಭೆ ನಡೆಸಿ, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

- Advertisement -

ಈ ಬೆಳವಣಿಗೆಯನ್ನು ಸ್ವಾಗತಿಸಿರುವ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್, ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಮತ್ತೊಂದು ಹಂತದ ಜಯ ಸಿಕ್ಕಂತಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇತ್ತ ಬೆಲೆ ಏರಿಕೆಯ ‘ಬರೆ’, ಅತ್ತ 1 ಟ್ರಿಲಿಯನ್‌...

ಒಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದ್ದರೆ, ಇನ್ನೊಂದೆಡೆ ರಾಜ್ಯ ಕಾಂಗ್ರೆಸ್‌ ಸರ್ಕಾರ "ಟ್ರಿಲಿಯನ್ ಡಾಲರ್ ಆರ್ಥಿಕತೆ"ಯ ಭವ್ಯ ಚಿತ್ರಣವನ್ನು ಸಾರ್ವಜನಿಕರ ಮುಂದಿಡುತ್ತಿವೆ. ಸದ್ಯ ಕರ್ನಾಟಕದಲ್ಲಿ ಕಂಡುಬರುತ್ತಿರುವ...

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾರ್ಕಳ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಿಸಲಾಗಿದ್ದ ಪರಶುರಾಮನ ಕಂಚಿನ ಪ್ರತಿಮೆ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ ಎಂದು ಹೇಳಿ ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಿಸಲಾಗಿತ್ತು. ಆದರೆ ಪ್ರತಿಮೆಯ ನೈಜತೆಯ ಬಗ್ಗೆ ಪ್ರಶ್ನೆಗಳು ಎದ್ದ ಬಳಿಕ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ಹೋರಾಟ ನಡೆಸಿದವರನ್ನು ಅವಮಾನಿಸಿ, ಅಪಹಾಸ್ಯ ಮಾಡಲಾಗಿತ್ತು ಎಂದು ಶುಭದರಾವ್ ಆರೋಪಿಸಿದ್ದಾರೆ.

ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಅವರು ಹೈಕೋರ್ಟ್‌ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯ ನೀಡಿದ ಮಾರ್ಗದರ್ಶನದಂತೆ ರಾಜ್ಯ ಸರಕಾರ ಇದೀಗ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿಮೆ ಪುನರ್ ನಿರ್ಮಾಣದ ಕುರಿತು ತಾಂತ್ರಿಕ ಪರಿಣಿತರ ಸಲಹೆ ಪಡೆಯುವುದು, ಥೀಮ್ ಪಾರ್ಕ್‌ಗೆ ಸಂಬಂಧಿಸಿದ ಗೋಮಾಳ ಜಮೀನನ್ನು ಪಾರ್ಕ್ ಹೆಸರಿಗೆ ವರ್ಗಾಯಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಹಾಗೂ ಕಾಮಗಾರಿಯನ್ನು ಪಾರದರ್ಶಕವಾಗಿ ನಡೆಸಲು ಹೊಸದಾಗಿ ಟೆಂಡರ್ ಕರೆಯುವುದು ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಉಡುಪಿ ಜಿಲ್ಲಾಧಿಕಾರಿಯವರ ಉಪಸ್ಥಿತಿಯಲ್ಲಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದು ಉತ್ತಮ ಬೆಳವಣಿಗೆಯಾಗಿದ್ದು, ಸರಕಾರದ ಕ್ರಮಕ್ಕೆ ಕಾರ್ಕಳ ಕಾಂಗ್ರೆಸ್ ಕೃತಜ್ಞತೆ ಸಲ್ಲಿಸುತ್ತದೆ ಎಂದು ಅವರು ಹೇಳಿದ್ದಾರೆ.

ಶಾಸಕರಿಂದ ಮತ್ತೊಂದು ನಾಟಕ: ಶುಭದರಾವ್ ಟೀಕೆ

ಥೀಮ್ ಪಾರ್ಕ್ ವಿಚಾರವಾಗಿ ಬೆಂಗಳೂರಿನ ವಿಕಾಸಸೌಧದಲ್ಲಿ ಸರಕಾರದ ಸಭೆ ನಡೆಯುತ್ತಿದ್ದಂತೆಯೇ ಕಾರ್ಕಳ ಶಾಸಕರ ಆಪ್ತರ ಸಾಮಾಜಿಕ ಜಾಲತಾಣಗಳಲ್ಲಿ ಬೆಂಗಳೂರಿನಿಂದ ಕಾರ್ಕಳಕ್ಕೆ ವಾಹನ ಜಾಥಾ ನಡೆಸುವ ಪೋಸ್ಟರ್‌ಗಳು ಹರಿದಾಡುತ್ತಿವೆ. ಈ ಹಿಂದೆ ಎರಡು ಬಾರಿ ವಾಹನ ಜಾಥಾ ಆಯೋಜಿಸಲು ಮುಂದಾಗಿ ಜನಸ್ಪಂದನೆ ಇಲ್ಲದ ಕಾರಣ ರದ್ದುಗೊಳಿಸಲಾಗಿತ್ತು ಎಂದು ಶುಭದರಾವ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸಭೆ ನಡೆಸಿ ಸರಕಾರವೇ ಅಭಿವೃದ್ಧಿ ಕಾರ್ಯಗಳ ಕುರಿತು ನಿರ್ಧಾರ ಕೈಗೊಳ್ಳುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನಿಂದ ಕಾರ್ಕಳಕ್ಕೆ ಜಾಥಾ ನಡೆಸುವ ಔಚಿತ್ಯವೇನು ಎಂದು ಪ್ರಶ್ನಿಸಿರುವ ಅವರು, ಮುಂದಿನ ಕಾಮಗಾರಿಗಳು ತಮ್ಮ ಹೋರಾಟದ ಫಲವೆಂದು ಬಿಂಬಿಸಿಕೊಳ್ಳಲು ಈ ಜಾಥಾ ಆಯೋಜಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರಕಾರದ ನಿರ್ಧಾರದಿಂದ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಮಹತ್ವದ ಮುನ್ನಡೆ ದೊರೆತಿದೆ. ಈ ವಿಚಾರದಲ್ಲಿ ಪ್ರಶ್ನಿಸಿದವರ ವಿರುದ್ಧ ಪೊಲೀಸ್ ಪ್ರಕರಣಗಳು, ಅಧಿಕಾರಿಗಳು ಅನುಭವಿಸಿದ ಹಿಂಸೆ, ಕಾರ್ಯಕರ್ತರ ಸಂಘರ್ಷಗಳು ಹಾಗೂ ಆರೋಪ-ಪ್ರತ್ಯಾರೋಪಗಳಿಗೆ ಅಂತ್ಯ ಹಾಡುವ ಕಾಲ ಬಂದಿದೆ. ಸರಕಾರದ ಈ ನಿರ್ಧಾರಕ್ಕೆ ಯಾವುದೇ ಅಡ್ಡಿಪಡಿಸದೆ ಸಹಕರಿಸುವ ಮನೋಭಾವವನ್ನು ಶಾಸಕರು ಹಾಗೂ ಅವರ ಆಪ್ತರಿಗೆ ಪರಶುರಾಮನೇ ಕರುಣಿಸಲಿ ಎಂದು ಶುಭದರಾವ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಜನರ ಮೇಲೆ ತೆರಿಗೆ ಹಾಗೂ ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ : ಮುನಿ ವೆಂಕಟಪ್ಪ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡವರು, ಮಧ್ಯಮ ವರ್ಗದವರು, ಕಾರ್ಮಿಕರು...

ಬಾಗಲಕೋಟೆ |ಆಯುರ್ವೇದ ಚಿಕಿತ್ಸೆಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಆದ್ಯತೆ: ಡಾ. ಕೊನರಡ್ಡಿ

ಮುಂದಿನ ದಿನಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ದೊರೆಯಲಿದ್ದು,...

ಕೋಲಾರ | ಮಹಿಳಾ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆಲುವು

ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಡೆದ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ...

ವಿಜಯಪುರ |ಮತಗಳ್ಳತನ ನಿಲ್ಲಿಸಿ, ಪ್ರಜಾಪ್ರಭುತ್ವ ಉಳಿಸಿ: ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಹೆಸರಿನಲ್ಲಿ ಮತದಾರರ ಹೆಸರುಗಳನ್ನು...