ಉಡುಪಿ | ರೇಂಜಾಳದಲ್ಲಿ ಭೂಕುಸಿತ; ನಾಲ್ಕು ದಲಿತ ಕುಟುಂಬಗಳ ಸ್ಥಳಾಂತರ

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೇಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ರೇಂಜಾಳ ಪ್ಯಾರಲ್ ಬೆಟ್ಟುವಿನ ಹೆಡ್ಮೇ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಸುಮಾರು 15 ದಲಿತ ಕುಟುಂಬಗಳು ವಾಸಿಸುತ್ತಿರುವ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಪಾಯದ ಹಿನ್ನೆಲೆಯಲ್ಲಿ ಈಗಾಗಲೇ ನಾಲ್ಕು ದಲಿತ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

- Advertisement -

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ದಲಿತರ ಮನೆಗಳಿರುವ ಪ್ರದೇಶದ ಗುಡ್ಡದಲ್ಲಿ ಭಾರಿ ಬಿರುಕು ಕಾಣಿಸಿಕೊಂಡಿದ್ದು, ಗುಡ್ಡ ಕುಸಿದು ಮಣ್ಣು ಹರಿದುಬಂದಿದೆ. ಹರಿಪ್ರಸಾದ್ ಎಂಬುವವರ ಮನೆಯ ಸಮೀಪದವರೆಗೂ ಮಣ್ಣು ಕೊಚ್ಚಿಕೊಂಡು ಬಂದಿದ್ದು, ಮತ್ತಷ್ಟು ಭೂಕುಸಿತ ಸಂಭವಿಸುವ ಆತಂಕ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ವಿಷಯ ತಿಳಿದ ಕೂಡಲೇ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದ ಜಿಲ್ಲಾ ಸಮಿತಿಯ ನಿಯೋಗವು ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ ಅವರ ನೇತೃತ್ವದಲ್ಲಿ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿತು.

1012129626

ಈ ಪ್ರದೇಶದಲ್ಲಿ ತುರ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಅಗತ್ಯವಿದ್ದು, ಜಿಲ್ಲಾಡಳಿತ ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಕೇರಳದ ವಯನಾಡಿನಲ್ಲಿ ಸಂಭವಿಸಿದಂತಹ ಭೀಕರ ದುರಂತ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಂಭವಿಸಬಹುದಾದ ದೊಡ್ಡ ಅನಾಹುತವನ್ನು ತಡೆಗಟ್ಟಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದ ಆಗ್ರಹಿಸಿದೆ.

ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ನಿಯೋಗದಲ್ಲಿ ದಸಂಸ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಸಂಘಟನಾ ಸಂಚಾಲಕ ಅಣ್ಣಪ್ಪ ನಕ್ರೆ, ತಾಲೂಕು ಪದಾಧಿಕಾರಿಗಳಾದ ರಾಘವ ಕುಕುಜೆ, ರಮೇಶ್ ವೆರ್ವಾಜೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...