ಉಡುಪಿ | ಸಿಎಂ ವಿಜಯ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ ; ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

Date:

ಉಡುಪಿಗೆ ಭೇಟಿ ನೀಡುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.

- Advertisement -

ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಬಲೈಪಾದೆ ಜಂಕ್ಷನ್ ಬಳಿ ಜಮಾಯಿಸಿದ ಕಾರ್ಯಕರ್ತರು ತಮಿಳುನಾಡು ಸರ್ಕಾರದ ನಿಲುವಿನ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಈ ವೇಳೆ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಭೇಟಿಯನ್ನು ವಿರೋಧಿಸಿ ಕಪ್ಪು ಬಾವುಟ ಪ್ರದರ್ಶನಕ್ಕೆ ಕಾರ್ಯಕರ್ತರು ಮುಂದಾದರು. ಪರಿಸ್ಥಿತಿ ನಿಯಂತ್ರಣದಲ್ಲಿರಿಸಲು ಸ್ಥಳಕ್ಕೆ ಆಗಮಿಸಿದ ಉಡುಪಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದು ಕರೆದೊಯ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಬಲೈಪಾದೆ ಜಂಕ್ಷನ್ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಡಾ. ಕಾಂತರಾಜ್ ಕೆ.ಪಿ ನೂತನ ಡಿಎಚ್ಓ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ...

ಉಡುಪಿ | ಸಂವಿಧಾನ, ಮಾನವೀಯ ಮೌಲ್ಯಗಳ ರಕ್ಷಣೆಗೆ ಬೀದಿಗಿಳಿಯಿರಿ: ಪ್ರಕಾಶ್ ರಾಜ್

ಪ್ರಸ್ತುತ ದೇಶದ ಪರಿಸ್ಥಿತಿಯಲ್ಲಿ ವೇದಿಕೆಗಳಲ್ಲಿ ನಿಂತು ಭಾಷಣ ಮಾಡುವುದಕ್ಕಿಂತ ಬೀದಿಗಿಳಿದು ಸಂವಿಧಾನ...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಮುಂದೆ ನಡೆಯುತ್ತಿದ್ದ ಧರಣಿ ಹಿಂಪಡೆದ ರೈತರು

"ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿಗೆ ಆಗುವವರೆಗೂ ಕಾರ್ಖಾನೆಗಳನ್ನು...

ಚಿಂತಾಮಣಿ | ಯಾದವ ಸಮುದಾಯದ ಶೈಕ್ಷಣಿಕ,ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಒತ್ತು : ಮುನೇಗೌಡ

ಯಾದವ ಸಂಘದ ಜಿಲ್ಲಾಧ್ಯಕ್ಷರು ಹಾಗೂ ವಕೀಲರಾದ ಮುನೇಗೌಡ ಅವರು ಚಿಂತಾಮಣಿ ತಾಲ್ಲೂಕಿನ...