ಕಟಪಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಹಿನ್ನೆಲೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ- ಜಿಲ್ಲಾಧಿಕಾರಿ ಆದೇಶ

Date:

ಉಡುಪಿ ಜಿಲ್ಲೆಯ ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಸದ್ರಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ಯಾಗುತ್ತಿರುವ ಹಿನ್ನೆಲೆ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ.

- Advertisement -

ಮಂಗಳೂರಿನಿಂದ ಉಡುಪಿಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವಾ -ಮೂಡುಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗಬೇಕು ಅಥವಾ ಪಡುಬಿದ್ರೆ – ಬೆಳ್ಮಣ್ – ಶಿರ್ವಾ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1010036681 2
ಜಾಹಿರಾತು


ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ – ಮೂಡುಬೆಳ್ಳೆ- ಶಿರ್ವಾ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳಬೇಕು ಅಥವಾ ಮಣಿಪಾಲದಿಂದ ಶಿರ್ವಾ – ಬೆಳ್ಮಣ್ ಮಾರ್ಗವಾಗಿ ಪಡುಬಿದ್ರಿ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸಬೇಕು.

ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ ) ರಲ್ಲಿ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಗಳ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...