ಉಡುಪಿ | ಕಾಪುವಿನಲ್ಲಿ ಆ.26ರಿಂದ ಸೀರತ್ ಅಭಿಯಾನ: ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’

Date:

ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮ ದಿನದ ಪ್ರಯುಕ್ತ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’ ಎಂಬುದು ಅಭಿಯಾನದ ಶೀರ್ಷಿಕೆಯಾಗಿದೆ.

- Advertisement -

ಪ್ರವಾದಿ ಮುಹಮ್ಮದ್ (ಸ) ಅವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿತ್ತು. ಜನರ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ರ್ಯವನ್ನು ಶುದ್ಧೀಕರಿಸುವ ಮೂಲಕ ವ್ಯಕ್ತಿ ಹಾಗೂ ಸಮಾಜದಲ್ಲಿ ಪರಿವರ್ತನೆ ತಂದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿದ್ದು, ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆಡಳಿತ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ಬೆಳಕು ನೀಡಿತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು ಎಂದು ಜಮಾಅತೆ ಇಸ್ಲಾಮಿ ಹಿಂದ್ ಕಾಪು ಶಾಖೆಯ ಅಧ್ಯಕ್ಷ ಅನ್ವರ್ ಅಲಿ ಇಂದ ಕಾಪು ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಪ್ರವಾದಿ ಮುಹಮ್ಮದ್ (ಸ) ಅವರ ಸಂದೇಶವನ್ನು ಕನ್ನಡ ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶಗಳಾಗಿವೆ ಎಂದು ಅವರು ಹೇಳಿದರು.

1012356315

ಈ ಸಂದರ್ಭದಲ್ಲಿ ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೀಶ್ ಮಾಸ್ಟರ್ ಅವರು ಬರೆದ ‘ಮಾನವ ಮನಸ್ಸಿನ ಕೃಷಿಕ – ಮನದೊಡೆಯ ಪ್ರವಾದಿ ಮುಹಮ್ಮದ್ (ಸ)’ ಕೃತಿಯನ್ನು ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಪಡುಬಿದ್ರಿ ಬಿಡುಗಡೆಗೊಳಿಸಿದರು.

ವಾರ್ತಾಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ ಅವರು ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ)’ ಕೃತಿಯನ್ನು ಪ್ರೆಸ್ ಕ್ಲಬ್‌ನ ಹಿರಿಯ ಸದಸ್ಯ ಬಾಲಕೃಷ್ಣ ಪೂಜಾರಿ ಬಿಡುಗಡೆಗೊಳಿಸಿದರು.

ಅಭಿಯಾನದ ಅಂಗವಾಗಿ ಕಾಪು ಶಾಖೆಯ ವತಿಯಿಂದ ಆಸ್ಪತ್ರೆಗಳ ಸಂದರ್ಶನ, ಬಡ ರೋಗಿಗಳಿಗೆ ಹಣ್ಣುಹಂಪಲು ವಿತರಣೆ, ಸ್ವಚ್ಛತಾ ಕಾರ್ಯಕ್ರಮ, ಅನಾಥಾಶ್ರಮ ಭೇಟಿ, ಗಣ್ಯರ ಸಭೆ, ಸೀರತ್ ಪ್ರವಚನ ಸಭೆ, ಮಸೀದಿಯಲ್ಲಿ ಕೃತಿಗಳ ಬಿಡುಗಡೆ, ಭಾಷಣ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ಇಕ್ಬಾಲ್ ಸಾಹೇಬ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್ ಅಲಿ ಧನ್ಯವಾದ ಸಲ್ಲಿಸಿದರು. ಮುಹಮ್ಮದ್ ಹಾಶಿಮ್ ಸಾಹೇಬ್ ಹಾಗೂ ಮುಹಮ್ಮದ್ ಶರೀಫ್ ಶೇಕ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...