ಮತ್ತೊಂದು ಶೂಟೌಟ್; ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದು ಆತಂಕಕಾರಿ : ಎಸ್ ಡಿ ಪಿ ಐ

Date:

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾ ಅವರನ್ನು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ ಹಾಗೂ ಆತಂಕಕಾರಿಯಾಗಿದೆ. ಶಾಂತಿಪ್ರಿಯ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿಯಲ್ಲಿ ಇಂತಹ ಗುಂಡಿನ ದಾಳಿ ಹಾಗೂ ಹತ್ಯೆ ಪ್ರಕರಣಗಳು ಪದೇಪದೇ ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಭಯ ಮತ್ತು ಆತಂಕವನ್ನು ಮೂಡಿಸಿದೆ.

- Advertisement -

ಕಳೆದ ವಾರ ಕುಂದಾಪುರದಲ್ಲಿ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಕಾಪು ತಾಲೂಕಿನ ಮುದರಂಗಡಿಯಲ್ಲಿ ಮತ್ತೊಂದು ಶೂಟೌಟ್ ನಡೆದಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಅತ್ಯಂತ ಗಂಭೀರ ವಿಚಾರವಾಗಿದ್ದು, ಅಪರಾಧಿಗಳಿಗೆ ಕಾನೂನಿನ ಭಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮುದರಂಗಡಿಯಲ್ಲಿ ನಡೆದಿರುವ ಹತ್ಯೆಯ ಹಿಂದಿರುವ ನೈಜ ಕಾರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು.

ಅದೇ ರೀತಿ, ಕಳೆದ ವಾರ ಕುಂದಾಪುರದಲ್ಲಿ ನಡೆದ ಶೂಟೌಟ್ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಗಂಭೀರ ಅಪರಾಧ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಗಸ್ತು ಹೆಚ್ಚಿಸುವುದು, ಅಕ್ರಮ ಶಸ್ತ್ರಾಸ್ತ್ರಗಳ ಬಳಕೆಯನ್ನು ತಡೆಗಟ್ಟುವುದು ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ಜಿಲ್ಲೆಯ ಜನರು ಭಯಮುಕ್ತವಾಗಿ ಬದುಕಲು ಅಗತ್ಯವಿರುವ ಸುರಕ್ಷಿತ ವಾತಾವರಣವನ್ನು ನಿರ್ಮಿಸುವುದು ಆಡಳಿತ ಮತ್ತು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ. ಆದ್ದರಿಂದ ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ, ಇಂತಹ ಹಿಂಸಾತ್ಮಕ ಘಟನೆಗಳು ಮರುಕಳಿಸದಂತೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್‌ಡಿಪಿಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾಧಿಕ್ ಕೆ.ಪಿ. ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...